ಹನಿಟ್ರಾಪ್ ಮತ್ತು ವಂಚನೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಲ್ಲಿ ಕಂಬಿ ಎಣಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಪ್ರಕರಣ ಸಧ್ಯಕ್ಕೆ ಮುಗಿಯುವ ಹಂತದಲ್ಲಿಲ್ಲ. ಇಂದು ಮುನಿರತ್ನ ಹನಿಟ್ರಾಪ್ ಜಾಲದ ಸುಳಿಯಲ್ಲಿ ಸಿಕ್ಕ ಸಂತ್ರಸ್ತೆ ನೀಡಿದ ಹೇಳಿಕೆ ಹಿನ್ನೆಲೆಯಲ್ಲಿ ಈ ಪ್ರಕರಣ ಮತ್ತಷ್ಟು ಜಠಿಲ ಆಗುವ ಮಟ್ಟಕ್ಕೆ ಬಂದಿದೆ. ಜೊತೆಗೆ ಕರ್ನಾಟಕ ರಾಜಕಾರಣದ ಅತಿ ಕೆಟ್ಟ ಬೆಳವಣಿಗೆ ಇದು ಎಂಬ ಕಪ್ಪು ಚುಕ್ಕೆ ಕರ್ನಾಟಕದ ಮೇಲೆ ಬೀಳಲಿದೆ.
ಅಂದಹಾಗೆ ಪ್ರಕರಣದಲ್ಲಿ ಸಂತ್ರಸ್ತೆ ಎಂದು ಗುರುತಿಸಲ್ಪಟ್ಟ ಮಹಿಳೆ ಇಂದು ಆಘಾತಕಾರಿ ಹೇಳಿಕೆ ನೀಡಿದ್ದಾರೆ. “ಶಾಸಕ ಮುನಿರತ್ನ ಅವರು ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್ ಮಾಡಿದ್ದಾರೆ. ನನಗೆ ಸರ್ಕಾದಿಂದ ಭದ್ರತೆ ಕೊಟ್ಟಲ್ಲಿ ನಾನು ಮಾಜಿ ಮುಖ್ಯಮಂತ್ರಿಗಳ ಹೆಸರನ್ನು ಹಾಗೂ ಸಂಬಂಧಿತ ವಿಡಿಯೋವನ್ನು ಕೊಡುವುದಾಗಿ” ಮುನಿರತ್ನ ಅವರಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆಂದು ಹೇಳಲಾದ ಸಂತ್ರಸ್ತ ಮಹಿಳೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಸತ್ರ ಮಹಿಳೆ “ಮುನಿರತ್ನ ಅವರ ಬಳಿ ಯಾವುದೇ ಮಾಧ್ಯಮಗಳ ಬಳಿಯೂ ಇಲ್ಲದಂತಹ ತುಂಬಾ ಅಡ್ವಾನ್ಸ್ಡ್ ಕ್ಯಾಮೆರಾಗಳಿವೆ. ನಮ್ಮಂಥವರ ಅಸಹಾಯಕತೆ ಬಳಸಿಕೊಂಡು ಮಾಜಿ ಸಿಎಂ, ಸಚಿವರು, ಶಾಸಕರು ಹನಿಟ್ರ್ಯಾಪ್ ವೀಡಿಯೋ ಮಾಡಿಸಿದ್ದಾರೆ. ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಹನಿಟ್ರ್ಯಾಪ್ ಮಾಡಿಸಿದ್ದಾರೆ. ಎಸಿಪಿ, ಸಿಪಿಐ ಅಧಿಕಾರಿಗಳನ್ನು ಹನಿಟ್ರ್ಯಾಪ್ ಮಾಡಿಸಿದ್ದಾರೆ” ಎಂದು ಹೇಳಿದ್ದಾರೆ.
‘ಹನಿಟ್ರಾಪ್’ ಪ್ರಕರಣದ ಬಗ್ಗೆ ಲಘುವಾಗಿ ಮಾತನಾಡಿ, ಮುನಿರತ್ನ ಪರವಾಗಿ ನಿಂತಿದ್ದ ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಶಾಸಕ ಅಶ್ವತ್ಥ ನಾರಾಯಣ್ ಅವರ ಮಾತಿಗೆ ಕೌಂಟರ್ ನೀಡಿದ ಸಂತ್ರಸ್ತೆ “ನನ್ನ ಹಾಗೂ ಮುನಿರತ್ನ ಬ್ರೈನ್ ಮ್ಯಾಪಿಂಗ್ ಮಾಡಿಸಲಿ” ಎಂದು ಚಾಲೆಂಜ್ ಮಾಡಿದ್ದಾರೆ.
ಹನಿಟ್ರ್ಯಾಪ್ ಮಾಡುವುದಕ್ಕೆ ನನ್ನನ್ನು ಬಳಕೆ ಮಾಡಿಕೊಂಡಿಲ್ಲ, ಬೇರೆ ಮಹಿಳೆಯರನ್ನು ಬಳಸಿಕೊಂಡಿದ್ದಾರೆ. ಇದರಲ್ಲಿ ಯಾವುದೇ ಸಿನಿಮಾ ನಟಿಯರು ಇಲ್ಲ. ಇನ್ನು ಹನಿಟ್ರ್ಯಾಪ್‌ಗೆ ಬಳಸಿಕೊಳ್ಳಲಾದ ಸುಮಾರು ಐದಾರು ಸಂತ್ರಸ್ತ ಮಹಿಳೆಯರು ಹೆದರಿಕೊಂಡು ಸುಮ್ಮನಾಗಿದ್ದಾರೆ. ಅವರು ಕೂಡ ನನ್ನಂತೆಯೇ ಹೊರಗೆ ಬಂದರೆ ಎಲ್ಲ ಸತ್ಯಗಳೂ ಹೊರಗೆ ಬರಲಿವೆ ಎಂದು ಹೇಳಿದರು.
ಅನೇಕ ಮಹಿಳೆಯರನ್ನು ಶಾಸಕ ಮುನಿರತ್ನ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಲವು ರಾಜಕೀಯ ನಾಯಕರ ಮೇಲೆ ಹನಿಟ್ರ್ಯಾಪ್ ಮಾಡಲು ಬಳಕೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಇದರ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ವಿಜಯೇಂದ್ರ 10 ನಿಮಿಷ ಅಪಾಯಿಂಟ್ ಮೆಂಟ್ ಬೇಕಿದೆ. ಹತ್ತೇ ಹತ್ತು ನಿಮಿಷ ಅವರ ಜೊತೆ ಮಾತಾಡಬೇಕು. ಇದಕ್ಕೆ ಅವಕಾಶ ಮಾಡಿಕೊಡಿ ಎಂದರು. ಇಷ್ಟೆಲ್ಲ ಆದ್ರೂ ಮುನಿರತ್ನ ಪಕ್ಷದಲ್ಲಿ ಇರಿಸಿಕೊಂಡಿದ್ದೀರಲ್ಲ ಎಂದು ಕೇಳಬೇಕಿದೆ ಎಂದು ಹೇಳಿದ್ದಾರೆ