ಕೆ.ಕವಿತಾ ಅವರನ್ನು BRS ಪಕ್ಷದಿಂದ ಅಮಾನತುಗೊಳಿಸಿದ ಒಂದು ದಿನದ ನಂತರ, ಬುಧವಾರ ತಮ್ಮ MLC ಹುದ್ದೆಗೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕೆ ಕವಿತಾ ಅವರು BRS ಪಕ್ಷದ ಸಂಸ್ಥಾಪಕ ಕೆ.ಚಂದ್ರಶೇಖರ ರಾವ್ ಅವರ ಪುತ್ರಿಯಾಗಿದ್ದಾರೆ.
“ಪಕ್ಷ ವಿರೋಧಿ ಚಟುವಟಿಕೆ” ಆರೋಪದ ಮೇಲೆ ಅವರನ್ನು ಕೆ.ಕವಿತಾ ಅವರನ್ನು ಹೊರ ಹಾಕಲಾಗಿತ್ತು. ತನ್ನ ಸೋದರಸಂಬಂಧಿಗಳು ಮತ್ತು ಬಿಆರ್‌ಎಸ್ ನಾಯಕರಾದ ಟಿ.ಹರೀಶ್ ರಾವ್ ಮತ್ತು ಜೆ. ಸಂತೋಷ್ ಕುಮಾರ್ ಅವರು ತಮ್ಮ ತಂದೆ ಕೆಸಿಆರ್ ಅವರ ಪ್ರತಿಷ್ಠೆಯನ್ನು ಹಾಳು ಮಾಡಲು ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರೊಂದಿಗೆ ಮೌನ ಒಪ್ಪಂದವನ್ನು ಮಾಡಿಕೊಂಡಿದ್ದಾರೆ ಎಂದು ಕವಿತಾ ಆರೋಪಿಸಿದ್ದರು. ಅದರ ಬೆನ್ನಲ್ಲೇ ಬಿಆರ್‌ಎಸ್ ಎಂಎಲ್‌ಸಿ ಕವಿತಾ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.
ಕವಿತಾ ತಮ್ಮ ಅಮಾನತು ‘ನೋವುಂಟುಮಾಡಿದೆ’ ಮತ್ತು ‘ನನ್ನನ್ನು ಬಿಆರ್‌ಎಸ್ ಪಕ್ಷದಿಂದ ಹಠಾತ್ತನೆ ಅಮಾನತುಗೊಳಿಸಿರುವುದು ತುಂಬಾ ನೋವಿನ ಸಂಗತಿ’ ಎಂದು ಹೇಳಿದರು.
ನಾನು ಎಂಎಲ್ಸಿ ಸ್ಥಾನಕ್ಕೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಕವಿತಾ ಅಮಾನತುಗೊಂಡ ಕುರಿತು ಮಾಧ್ಯಮಗಳನ್ನುದ್ದೇಶಿಸಿ ಹೇಳಿದರು. “ನಾನು ನನ್ನ ರಾಜೀನಾಮೆಯನ್ನು ಸ್ಪೀಕರ್ ಮತ್ತು (ಪಕ್ಷದ ಮುಖ್ಯಸ್ಥ ಮತ್ತು ಅವರ ತಂದೆ) ಕೆ ಚಂದ್ರಶೇಖರ್ ರಾವ್ ಅವರಿಗೆ ಕಳುಹಿಸುತ್ತಿದ್ದೇನೆ” ಎಂದು ಅವರು ಹೇಳಿದರು.