MLC ಚುನಾವಣೆ: ಐವರು ಬಂಡಾಯ ಅಭ್ಯರ್ಥಿಗಳನ್ನು ಅಮಾನತುಗೊಳಿಸಿದ ಕಾಂಗ್ರೆಸ್

ಪಕ್ಷದ ಅಭ್ಯರ್ಥಿಗಳ ವಿರುದ್ಧ ಪಕ್ಷೇತರ ಅಭ್ಯರ್ಥಿಗಳಾಗಿ ಎಂಎಲ್‌ಸಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಐವರು ಬಂಡಾಯ ಅಭ್ಯರ್ಥಿಗಳನ್ನು ಕರ್ನಾಟಕ ಕಾಂಗ್ರೆಸ್ ಅಮಾನತುಗೊಳಿಸಿದೆ.

ಪಕ್ಷ ವಿರೋಧಿ ಚಟುವಟಿಕೆಗಾಗಿ ಬೆಂಗಳೂರಿನ ಎಸ್ ಪಿ ದಿನೇಶ್ (ಶಿವಮೊಗ್ಗ), ಫರ್ನಾಂಡಿಸ್ ಲಾರೆನ್ಸ್ (ಬೆಂಗಳೂರು), ಬಿ ಆರ್ ನಂಜೇಶ್ (ಚಿಕ್ಕಮಗಳೂರು), ಲೋಕೇಶ್ ತಾಳಿಕಟ್ಟೆ (ಚಿತ್ರದುರ್ಗ) ಮತ್ತು ವಿನೋದ್ ಶಿವರಾಜ್ ಅವರನ್ನು ಆರು ವರ್ಷಗಳ ಕಾಲ ಅಮಾನತುಗೊಳಿಸಲಾಗಿದೆ ಎಂದು ಪಕ್ಷವು ಪ್ರಕಟಣೆಯಲ್ಲಿ ತಿಳಿಸಿದೆ.

ಜೂನ್ 3ರಂದು ನಡೆಯಲಿರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆಗೆ ಐವರೂ ಬಂಡಾಯವಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಹೈಕಮಾಂಡ್ ಭೇಟಿ ಮಾಡ್ತಾರಾ ಸಿಎಂ?

ಏತನ್ಮಧ್ಯೆ, ಎಂಎಲ್‌ಸಿ ಟಿಕೆಟ್‌ಗಳನ್ನು ನಿರ್ಧರಿಸಲು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಇತರ ಹಿರಿಯ ನಾಯಕರು ಮೇ 28 ಮತ್ತು 29ರಂದು ದೆಹಲಿಗೆ ತೆರಳಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

Related Articles

ಇತ್ತೀಚಿನ ಸುದ್ದಿಗಳು