Home ರಾಜಕೀಯ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್‌ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದಕ್ಕೆ

ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್‌ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದಕ್ಕೆ

0

ಬೆಂಗಳೂರು : ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ ಪ್ರಸ್ತುತ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ತಮ್ಮ 2ನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು, ವಿಚಾರಣೆ ನಡೆಸಿದ ಕೋರ್ಟ್ ಜುಲೈ 10ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದ್ದು, ಸಿಐಡಿ ತನಿಖಾಧಿಕಾರಿ ಎಂ ಹೆಚ್ ಉಮೇಶ್ ವಿಚಾರಣೆ ವೇಳೆ ನ್ಯಾಯಾಲಯದಲ್ಲಿ ಹಾಜರಿದ್ದರು.

ಸೂರಜ್ ರೇವಣ್ಣ ವಿರುದ್ಧ 2ನೇ ಪ್ರಕರಣದಲ್ಲೂ ಕೂಡ ಸಿಐಡಿ ಪೋಲೀಸರು ಅವರನ್ನು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಮಧ್ಯಂತರ ಜಾಮಿನು ನೀಡುವಂತೆ ಸೂರಜ್ ಪರ ವಕೀಲರು ಮನವಿ ಮಾಡಿದ್ದಾರೆ. ಈ ವೇಳೆ ಸರ್ಕಾರಿ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಲು ಅವಕಾಶವನ್ನು ಕೋರಿದರು.

ಇದೆ ಸಂದರ್ಭದಲ್ಲಿ ನ್ಯಾಯಾಲಯವು ಆಕ್ಷೇಪಣೆ ಸಲ್ಲಿಸುವವರೆಗೂ ಎರಡನೇ ಕೇಸಿನ ವಿಷಯದಲ್ಲಿ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ನ್ಯಾಯಾಲಯಕ್ಕೆ ಸರ್ಕಾರಿ ಅಭಿಯೋಜಕರಿಂದ ಮುಚ್ಚಳಿಕೆ ಬರೆದುಕೊಡಲಾಯಿತು. ನಂತರ ನ್ಯಾಯಾಲಯ ವಿಚಾರಣೆಯನ್ನು ಜುಲೈ 10 ಕ್ಕೆ ಮುಂದೂಡಿತು.

You cannot copy content of this page

Exit mobile version