ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಕುತೂಹಲ ಮುಂದುವರಿದಿರುವರೆದಿರುವಾಗಲೇ , ಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರಮುಖ ಹೇಳಿಕೆಯೊಂದನ್ನು ನೀಡಿದ್ದಾರೆ. ನನಗೆ ಯಾವುದೇ ಅತೃಪ್ತಿ ಇಲ್ಲ ಎಂದು ಅವರು ಹೇಳಿದರು.
ಮುಖ್ಯಮಂತ್ರಿ ಸ್ಥಾನದ ಕುರಿತು ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ನಿರ್ಧಾರವೇ ಅಂತಿಮ ಎಂದು ಅವರು ಹೇಳಿದ್ದಾರೆ. ಥಾಣೆಯಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಶಿಂಧೆ, ಅವರ ನಿರ್ಧಾರಕ್ಕೆ ಬದ್ಧರಾಗಿರುತ್ತೇನೆ ಎಂದು ಸ್ಪಷ್ಟಪಡಿಸಿದರು.
ಹೋರಾಟ ತನ್ನ ರಕ್ತದಲ್ಲಿದೆ ಎಂದು ಏಕನಾಥ್ ಶಿಂಧೆ ಹೇಳಿದ್ದಾರೆ. ಮಹಾಯುತಿಯ ಗೆಲುವಿಗೆ ಕಾರ್ಯಕರ್ತನಾಗಿ ದುಡಿದಿದ್ದೇನೆ ಎಂದರು. ಕಾರ್ಯಕರ್ತರಂತೆ ಚಪ್ಪಲಿ ಧರಿಸಿ ನಡೆದಿದ್ದೇನೆ ಎಂದ ಅವರು, ತಮ್ಮ ಪಕ್ಷಕ್ಕೆ ಅತಿ ದೊಡ್ಡ ಗೆಲುವು ತಂದುಕೊಟ್ಟಿದ್ದಕ್ಕಾಗಿ ಜನತೆಗೆ ಕೃತಜ್ಞತೆ ಸಲ್ಲಿಸಿದರು. ಜನರು ಮಹಾವಿಕಾಸ್ ಅಘಾಡಿ ಮೈತ್ರಿಯನ್ನು ತಿರಸ್ಕರಿಸಿದ್ದಾರೆ ಎಂದು ಪ್ರತಿಪಾದಿಸಿದರು. ಅವರ ದೃಷ್ಟಿಯಲ್ಲಿ ಸಿಎಂ ಎಂದರೆ ಸಾಮಾನ್ಯ ಮನುಷ್ಯ ಎಂದು ಹೇಳಿದರು.
ಪ್ರಧಾನಿ ಮೋದಿಯವರಿಗೆ ಸಂಪೂರ್ಣ ಬೆಂಬಲವಿದೆ ಎಂದು ಏಕನಾಥ್ ಶಿಂಧೆ ಹೇಳಿದ್ದಾರೆ. ಹೆಸರಿಗಾಗಿ ಜಗಳವಾಡುವುದು ಇಷ್ಟವಿಲ್ಲ ಎಂದರು. ಅಧಿಕಾರದಲ್ಲಿದ್ದಾಗ ತಾವು ಮತ್ತು ತಮ್ಮ ಸಹ ಸಚಿವರು 24/7 ಕೆಲಸ ಮಾಡಿದ್ದೇವೆ ಎಂದು ಹೇಳಿದರು. ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಯಾರನ್ನು ಆಯ್ಕೆ ಮಾಡಬೇಕು ಎಂಬುದು ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟ ವಿಚಾರ ಎಂದರು. ಮುಖ್ಯಮಂತ್ರಿ ಸ್ಥಾನದ ವಿಚಾರದಲ್ಲಿ ಮೋದಿ ಮತ್ತು ಅಮಿತ್ ಶಾ ನಿರ್ಧಾರವೇ ಅಂತಿಮ ಎಂದು ಸ್ಪಷ್ಟಪಡಿಸಿದರು.