Sunday, June 16, 2024

ಸತ್ಯ | ನ್ಯಾಯ |ಧರ್ಮ

ಮೋದಿ ಈ ದೇಶಕ್ಕೆ ಅಂಟಿರುವ ಶನಿ, ದೇವೇಗೌಡರ ನೆರಳಿನಡಿ ಹೋಗಿ ಯಾರೂ ಉದ್ಧಾರವಾಗಿಲ್ಲ:‌ ಮಾಜಿ ಸ್ಪೀಕರ್ ರಮೇಶ್‌ ಕುಮಾರ್

ಕೋಲಾರ: ಪ್ರಧಾನಿ ನರೇಂದ್ರ ಮೋದಿ ಈ ದೇಶಕ್ಕೆ ಅಂಟಿರುವ ಶನಿ ಎಂದು ಮಾಜಿ ಸ್ಪೀಕರ್‌ ಕೆ.ಆರ್‌. ರಮೇಶ್‌ ಕುಮಾರ್‌ ತೀವ್ರವಾಗಿ ಟೀಕಿಸಿದ್ದಾರೆ. ಭಾನುವಾರ ಕೋಲಾರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೌತಮ್‌ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಈ ದೇಶಕ್ಕೆ ಹಿಡಿದಿರುವ ಶನಿ ಬಿಟ್ಟು ಹೋಗುವುದನ್ನೇ ಕಾಯುತ್ತಿದ್ದೇವೆ ಎಂದು ಹೇಳಿದ್ದಾರೆ.

ನಂತರ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಯವರ ವಿರುದ್ಧವೂ ಕಿಡಿಕಾರಿದ ಅವರು, ಸತ್ಯ ಹರಿಶ್ಚಂದ್ರನ ಅವತಾರವೇ ಕುಮಾರಸ್ವಾಮಿ ಎಂದು ಹೇಳಿದರು. ದೇವೇಗೌಡರ ನೆರಳಿಗೆ ಹೋಗಿ ಚೆನ್ನಾಗಿ ಬದುಕಿರುವವರು ಯಾರೂ ಇಲ್ಲ. ಲೋಕಸಭಾ ಚುನಾವಣೆಯಲ್ಲಿ ತಮ್ಮ ಮಗ, ಮೊಮ್ಮಗ, ಅಳಿಯನಿಗಷ್ಟೇ ಮೂರು ಸೀಟು ಪಡೆದಿದ್ದಾರೆ ಎಂದು ಟೀಕಿಸಿದರು.

ಕೋಲಾರದಲ್ಲಿ ಸಿದ್ಧರಾಮಯ್ಯನವರ ನೇತ್ರತ್ವದಲ್ಲಿ ಕಾಂಗ್ರೆಸ್‌ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದು, ಅಭ್ಯರ್ಥಿ ಗೌತಮ್‌ ಭರ್ಜರಿ ಬಹುಮತದೊಂದಿಗೆ ಗೆಲ್ಲುವ ಭರವಸೆಯಲ್ಲಿದ್ದಾರೆ

ಕೋಲಾರದಲ್ಲಿ ಇಲ್ಲಿಯವರೆಗೆ ನಡೆದ 17 ಚುನಾವಣೆಗಳಲ್ಲಿ 15 ರಲ್ಲಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಇದನ್ನು ಭದ್ರಕೋಟೆಯಾಗಿ ಮಾಡಿಕೊಂಡಿದೆ. ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಐದರಲ್ಲಿ ಪಕ್ಷವು ತನ್ನ ಹಿಡಿತ ಹೊಂದಿದೆ. ಹೀಗಾಗಿ ಕಾಂಗ್ರೆಸ್‌ ಅಭ್ಯರ್ಥಿ ಗೌತಮ್ ಗೆಲ್ಲುತ್ತಾರೆ ಎನ್ನಲಾಗುತ್ತಿದೆ.

Related Articles

ಇತ್ತೀಚಿನ ಸುದ್ದಿಗಳು