ಹೈದರಾಬಾದ್: ಗೌತಮ್ ಅದಾನಿ ವಿರುದ್ಧ ಅಮೆರಿಕ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿರುವುದರಿಂದ ದೇಶದ ಪ್ರತಿಷ್ಠೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿರುವ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ, ಪ್ರಧಾನಿ ನರೇಂದ್ರ ಮೋದಿ ಅವರು ಕೈಗಾರಿಕೋದ್ಯಮಿಯನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬುಧವಾರ ಹೇಳಿದ್ದಾರೆ.
ಎಐಸಿಸಿ ಕರೆ ನೀಡಿದ್ದಂತೆ ಇಲ್ಲಿ ನಡೆದ ‘ಚಲೋ ರಾಜಭವನ’ದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿಗಳು, ಪ್ರತಿಪಕ್ಷ ಬಿಆರ್‌ಎಸ್ ಬೆಂಬಲ ನೀಡಿದರೆ ಅದಾನಿ ವಿಚಾರದಲ್ಲಿ ಜೆಪಿಸಿ ಕೋರಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲು ಕಾಂಗ್ರೆಸ್ ಸರ್ಕಾರ ಸಿದ್ಧವಿದೆ ಎಂದರು.
ಅದಾನಿ ವಿಷಯದ ಬಗ್ಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಗೆ ಕಾಂಗ್ರೆಸ್ ಮತ್ತು INDI ಅಲಯನ್ಸ್ ಒತ್ತಾಯಿಸಿವೆ ಎಂದು ಅವರು ಹೇಳಿದರು. PTI