ಬೆಂಗಳೂರು : ಬಿಡದಿ ಸಮೀಪದ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಟೌನ್‌ಶಿಪ್) ಯೋಜನೆ ಕುರಿತ ವಿವಾದದ ನಡುವೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಹತ್ವದ ಹೇಳಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು, ಎಸ್‌ಪಿ ಹಾಗೂ ಸಿಇಒಗಳ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಯೋಜನೆಯನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಮಾರ್ಗದರ್ಶನದಂತೆ ಮುಂದುವರಿಸಲಾಗುತ್ತಿದ್ದು, ದೆಹಲಿಯಲ್ಲಿ ನಡೆದ ಭೇಟಿಯ ವೇಳೆ ಪ್ರಧಾನಿ ನರೇಂದ್ರ ಮೋದಿಅವರು ಸಹ ಯೋಜನೆಗೆ ಬೆಂಬಲ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ. ಬೆಂಗಳೂರಿನ ಮೇಲೆ ಜನಸಂಖ್ಯೆ ಮತ್ತು ಮೂಲಸೌಕರ್ಯಗಳ ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸ ಟೌನ್‌ಶಿಪ್‌ಗಳ ಅಗತ್ಯವಿದೆ ಎಂದರು. “ನಾನು ಹಲವು ಟೌನ್‌ಶಿಪ್‌ಗಳನ್ನು ಅಭಿವೃದ್ಧಿಪಡಿಸಿದ್ದೇನೆ, ನೀವು ಕೂಡ ಮುಂದುವರಿಸಿ” ಎಂದು ಪ್ರಧಾನಿ ಮೋದಿ ಶುಭ ಹಾರೈಸಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದರು.
