Home ರಾಜ್ಯ ಮೈಸೂರು ಮೋದಿ ಬದುಕಿರುವುದು ಪ್ರಚಾರದಿಂದ| ಮೋದಿ ಸರ್ಕಾರಕ್ಕೆ ಸೊನ್ನೆ ಅಂಕ: ಸಿಎಂ ಸಿದ್ದರಾಮಯ್ಯ

ಮೋದಿ ಬದುಕಿರುವುದು ಪ್ರಚಾರದಿಂದ| ಮೋದಿ ಸರ್ಕಾರಕ್ಕೆ ಸೊನ್ನೆ ಅಂಕ: ಸಿಎಂ ಸಿದ್ದರಾಮಯ್ಯ

0

ಮೈಸೂರು, ಜೂನ್ 9: ಮೋದಿ ಅವರ ಸರ್ಕಾರಕ್ಕೆ ಸೊನ್ನೆ ಅಂಕ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು.

ಮೋದಿ ಪ್ರಚಾರದಿಂದ ಬದುಕಿರುವುದು

ಮೋದಿ ಅವರು ಪ್ರಚಾರದಿಂದ ಬದುಕಿರುವುದು. ನೋಟು ಅಮಾನ್ಯೀಕರಣದಿಂದ ಯಾರಿಗೆ ಅನುಕೂಲವಾಗಿದೆ? ಅಚ್ಚೆ ದಿನ್ ಆಯೇಗಾ , ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಕೊಡುತ್ತೇನೆ ಎಂದರು. ರೈತರ ಸಮಸ್ಯೆ ಬಗೆಹರಿಸುತ್ತೇನೆ ಎಂದರು. ರೈತರು ಒಂದು ವರ್ಷ ಕಾಲ ಚಳುವಳಿಯನ್ನು ಏಕೆ ಮಾಡಿದರು ಎಂದು ಪ್ರಶ್ನಿಸಿದರು.

ಹನ್ನೊಂದು ವರ್ಷ ತುಂಬಿಸಿದ್ದಾರೆ ಅಷ್ಟೇ
ಮುಖ್ಯಮಂತ್ರಿಗಳು ಪ್ರಮುಖವಾಗಿ ಏನು ಹೇಳಿದ್ದರೋ ಅದನ್ನು ಮಾಡಿಲ್ಲ. ಹನ್ನೊಂದು ವರ್ಷ ತುಂಬಿಸಿದ್ದಾರೆ ಅಷ್ಟೇ ಎಂದು ತಿಳಿಸಿದರು.

ಸುಳ್ಳು ವಿಚಾರಗಳಿಗೆ ಪ್ರಚಾರ

ಮಾಧ್ಯಮಗಳು ಅವರಿಗೆ ಹೆಚ್ಚಿನ ಪ್ರಚಾರ ನೀಡುತ್ತಿವೆ. ಅವುಗಳ ಮೂಲಕ ಸುಳ್ಳು ವಿಚಾರಗಳಿಗೆ ಪ್ರಚಾರ ನೀಡುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆ ಗಳನ್ನು ಘೋಷಣೆ ಮಾಡಿದಾಗ ಇದನ್ನು ಅನುಷ್ಠಾನ ಮಾಡಲಾಗುವುದಿಲ್ಲ,ರಾಜ್ಯ ಸರ್ಕಾರ ದಿವಾಳಿಯಾಗುತ್ತದೆ ಎಂದವರು ಅದನ್ನೇ ನಕಲು ಮಾಡಿದರು ಎಂದರು. ರಾಜಸ್ಥಾನ, ಉತ್ತರ ಪ್ರದೇಶ, ದೆಹಲಿಯಲ್ಲಿ ಅದನ್ನೇ ಜಾರಿ ಮಾಡಿದರು. ಗುಜರಾತ್ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಶೇ.50ರಷ್ಟು ತೆರಿಗೆ ಹಂಚಿಕೆ ಮಾಡಿದರು. ಇವರೇ ಪ್ರಧಾನಿಗಳಾದಾಗ ಏನು ಮಾಡಿದರು? ಎಂದು ಪ್ರಶ್ನಿಸಿದರು. ನಿರ್ಮಲಾ ಸೀತಾರಾಮನ್ 5300 ಕೋಟಿಗಳನ್ನು ಕೊಡುವುದಾಗಿ ಘೋಷಿಸಿ ಕೊಡಲಿಲ್ಲ. 15 ನೇ ಹಣಕಾಸು ಆಯೋಗದವರು 11495 ಕೋಟಿ ಕೊಡಬೇಕು ಎಂದು ಶಿಫಾರಸ್ಸು ಮಾಡಿದರೂ ಕೊಡಲಿಲ್ಲ. ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಬಿಜೆಪಿ ಪ್ರಶ್ನೆ ಮಾಡುವುದನ್ನು ಬಿಟ್ಟು ಅಪಪ್ರಚಾರ ಮಾಡುತ್ತಿದೆ ಎಂದರು.

You cannot copy content of this page

Exit mobile version