Friday, June 14, 2024

ಸತ್ಯ | ನ್ಯಾಯ |ಧರ್ಮ

ಮಹಾತ್ಮ ಗಾಂಧಿ ಸಮಾಧಿಗೆ ತೆರಳಿ ನಮಸ್ಕರಿಸಿದ ಮೋದಿ

ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಇಂದು (ಭಾನುವಾರ) ಸಂಜೆ 7.15ಕ್ಕೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮೋದಿ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಲಿದ್ದಾರೆ.

ಪ್ರಮಾಣ ವಚನ ಸ್ವೀಕರಿಸುವ ಮುನ್ನ ಅವರು ಇಂದು ಮುಂಜಾನೆ ರಾಜ್‌ಘಾಟ್‌ಗೆ ತೆರಳಿದರು. ಅಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸಮಾಧಿಗೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.

ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸಂದರ್ಭದಲ್ಲಿ ದೆಹಲಿಯ ಹಲವೆಡೆ ಇದಕ್ಕೆ ಸಂಬಂಧಿಸಿದ ಪೋಸ್ಟರ್ ಗಳನ್ನು ಅಂಟಿಸಲಾಗಿದೆ. ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜು, ಸೆಶೆಲ್ಸ್ ಉಪಾಧ್ಯಕ್ಷ ಅಹ್ಮದ್ ಅಫೀಫ್, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನಾಥ್, ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ಪ್ರಚಂಡ ಮತ್ತು ಭೂತಾನ್ ಪ್ರಧಾನಿ ತ್ಶೆರಿಂಗ್ ಟೋಬ್ಗೆ ಮೊದಲಾದವರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು