Monday, July 28, 2025

ಸತ್ಯ | ನ್ಯಾಯ |ಧರ್ಮ

ಮೋದಿ, ಶಾ ವಿರುದ್ಧ ಹರಿಹಾಯ್ದ ರಾಹುಲ್ ಗಾಂಧಿ

ನವದೆಹಲಿ: ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಂಡು ತಮ್ಮ ಮತ್ತು ಇತರರ ವಿರೋಧದ ಧ್ವನಿಗಳನ್ನು ಮೌನಗೊಳಿಸಲು ಒತ್ತಡದ ತಂತ್ರಕ್ಕೆ ಮಣಿಯುವ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

ರಾಜಕೀಯ ಮುಖಂಡರ ವಿರುದ್ಧ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ರಾಜಕೀಯ ಪ್ರೇರಿತ ದಾಳಿ, ವಿಚಾರಣೆಗಳ ಹಿನ್ನೆಲೆಯಲ್ಲಿ ಇಂದು ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿನಿರ್ದೇಶನಾಲಯವು ಜೂನ್‌ನಲ್ಲಿ ಐದು ದಿನಗಳ ಕಾಲ ಸುಮಾರು 50 ಗಂಟೆಗಳ ಕಾಲ  ಗಾಂಧಿ ಅವರನ್ನು ಪ್ರಶ್ನಿಸಿತ್ತು. ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಅವರ ತಾಯಿ ಮತ್ತು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನೂ ಕೇಂದ್ರ ಸಂಸ್ಥೆ ಪ್ರಶ್ನಿಸಿತ್ತು.

ಕೇಂದ್ರೀಯ ಸಂಸ್ಥೆಗಳ ಮೂಲಕ ಸರ್ಕಾರ ನಮ್ಮನ್ನು ಬೆದರಿಸಲು ಯತ್ನಿಸುತ್ತಿದೆ. ಈ ಬಗೆಯ ಒತ್ತಡ ಹೇರಿಕೆಯಿಂದ ಬೆದರಿ, ನಾವು ಮೌನವಾಗಿರುತ್ತೇವೆ ಎಂದು ನರೇಂದ್ರ ಮೋದಿ ಮತ್ತು ಅಮಿತ್ ಶಾ ಭಾವಿಸಿರಬಹುದು. ಆದರೆ ನಾವು ಹೆದರುವುದಿಲ್ಲ ಎಂದು ರಾಹುಲ್ ಹೇಳಿದ್ದಾರೆ.

ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ದೆಹಲಿಯಲ್ಲಿರುವ ಯಂಗ್ ಇಂಡಿಯನ್‌ನ ಕಚೇರಿಗೆ ಮೊಹರು ಹಾಕಿದ ನಂತರ ಕಾಂಗ್ರೆಸ್ ಸಂಸದರ ಜತೆ ಚರ್ಚಿಸಿದ ಸಂದರ್ಭದಲ್ಲಿ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ನರೇಂದ್ರ ಮೋದಿಗೆ ನಾವು ಹೆದರುವುದಿಲ್ಲ, ನೀವು ಏನು ಬೇಕಾದರೂ ಮಾಡಿ, ಪರವಾಗಿಲ್ಲ, ಪ್ರಜಾಪ್ರಭುತ್ವವನ್ನು ರಕ್ಷಿಸುವ, ದೇಶದಲ್ಲಿ ಸಾಮರಸ್ಯವನ್ನು ಕಾಪಾಡುವ ನನ್ನ ಕೆಲಸವನ್ನು ನಾನು ಮಾಡುತ್ತೇನೆ ಎಂದು ರಾಹುಲ್ ಸವಾಲು ಒಡ್ಡಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page