ವಿಮಾನ ಅಪಘಾತ | ಮೋದಿ, ಶಾ ರಾಜೀನಾಮೆ ನೀಡಬೇಕು: ಸುಬ್ರಮಣಿಯನ್ ಸ್ವಾಮಿ

ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದ ಕುರಿತು ಮುಕ್ತ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಲು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಬೇಕೆಂದು ಹಿರಿಯ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಒತ್ತಾಯಿಸಿದ್ದಾರೆ.

1956ರಲ್ಲಿ ಅರಿಯಲೂರ್ ರೈಲು ಅಪಘಾತದ ನಂತರ ಅಂದಿನ ರೈಲ್ವೆ ಸಚಿವ ಲಾಲ್ ಬಹದ್ದೂರ್ ಶಾಸ್ತ್ರಿ ರಾಜೀನಾಮೆ ನೀಡಿದ ಉದಾಹರಣೆಯನ್ನು ಅವರು ಈ ಸಂದರ್ಭದಲ್ಲಿ ಉಲ್ಲೇಖಿಸಿದ್ದಾರೆ.

ಪ್ರಧಾನಿ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ರಾಮಮೋಹನ್ ನಾಯ್ಡು ಅವರು ಅದೇ ನೈತಿಕತೆ ಹೊಣೆಯೊಂದಿಗೆ ರಾಜೀನಾಮೆ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು