ಕೂಚ್ ಬೆಹಾರ್: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ‘ಬಂಕಿಂ ದಾ’ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
ಕೂಚ್ ಬೆಹಾರ್‌ನಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಮತಾ, ‘ದೇಶಕ್ಕೆ ಸ್ವಾತಂತ್ರ್ಯ ಬಂದಾಗ ಮೋದಿ ಹುಟ್ಟಿರಲಿಲ್ಲ, ಆದರೆ… ಬಂಗಾಳದ ಪ್ರಸಿದ್ಧ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಒಬ್ಬರ ಬಗ್ಗೆ ಅವರು ಅಸಂಬದ್ಧವಾಗಿ ಮಾತನಾಡುತ್ತಿದ್ದಾರೆ’ ಎಂದು ಟೀಕಿಸಿದರು.
‘ಬಂಕಿಂ ಚಂದ್ರ ಚಟ್ಟೋಪಾಧ್ಯಾಯ ಅವರಿಗೆ ಮೋದಿ ಕನಿಷ್ಠ ಗೌರವವನ್ನೂ ನೀಡಿಲ್ಲ. ಮೋದಿ ದೇಶಕ್ಕೆ ಕ್ಷಮೆಯಾಚಿಸಬೇಕು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅದು ಬಂಗಾಳದ ಸಂಸ್ಕೃತಿ, ಭಾಷೆ ಮತ್ತು ಪರಂಪರೆಯನ್ನು ನಾಶಪಡಿಸುತ್ತದೆ ಎಂದು ಅವರು ಟೀಕಿಸಿದರು.
ವಂದೇ ಮಾತರಂ ಕುರಿತ ಚರ್ಚೆಯ ಸಂದರ್ಭದಲ್ಲಿ ಸೋಮವಾರ ಲೋಕಸಭೆಯಲ್ಲಿ ಮಾತನಾಡಿದ ಮೋದಿ, ಬಂಕಿಂ ಚಂದ್ರ ಚಟ್ಟೋಪಾಧ್ಯಾಯ ಅವರನ್ನು ಉಲ್ಲೇಖಿಸಿ ‘ಬಂಕಿಂ ದಾ’ ಎಂಬ ಹೇಳಿಕೆ ನೀಡಿದರು.
