Thursday, April 24, 2025

ಸತ್ಯ | ನ್ಯಾಯ |ಧರ್ಮ

ಸರ್ವಪಕ್ಷಗಳ ಸಭೆಯ ನೇತೃತ್ವವನ್ನು ರಾಜನಾಥ್ ಸಿಂಗ್ ಬದಲು ಪ್ರಧಾನಿ ನರೇಂದ್ರ ಮೋದಿಯೇ ವಹಿಸಬೇಕು; ಕಾಂಗ್ರೆಸ್ ಒತ್ತಾಯ

ಪಹಲ್ಗಾಮ್ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಕರೆದಿದ್ದ ಸರ್ವಪಕ್ಷ ಸಭೆಯನ್ನು ಪ್ರಧಾನಿ ನರೇಂದ್ರ ಮೋದಿಯವರೇ ಅಧ್ಯಕ್ಷತೆ ವಹಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಪರಿಸ್ಥಿತಿಯ ಗಂಭೀರತೆ ಅರಿತು ಪ್ರಧಾನಿ ನರೇಂದ್ರ ಮೋದಿಯವರೇ ಸಭೆಯಲ್ಲಿ ಭಾಗವಹಿಸುವರು ಎಂಬ ನಂಬಿಕೆ ಇದೆ ಎಂದು ಕಾಂಗ್ರೆಸ್ ಹೇಳಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಸರ್ವಪಕ್ಷ ಸಭೆ ಇಂದು ಸಂಜೆ 6 ಗಂಟೆಗೆ ನಿಗದಿಯಾಗಿದೆ. ನಿಗದಿಯಾದ ಕೆಲವೇ ಗಂಟೆಗಳ ಮೊದಲು, ಪ್ರಧಾನಿ ನರೇಂದ್ರ ಮೋದಿ ಅವರು ಚರ್ಚೆಗಳ ಅಧ್ಯಕ್ಷತೆ ವಹಿಸಬೇಕು ಎಂದು ಕಾಂಗ್ರೆಸ್ ಪರೋಕ್ಷವಾಗಿ ಪಟ್ಟು ಹಿಡಿದಿದೆ. ಸಾಮೂಹಿಕ ಸಂಕಲ್ಪವನ್ನು ನಿರ್ಮಿಸಲು ಎಲ್ಲಾ ಪಕ್ಷಗಳನ್ನು ಪ್ರಧಾನಿ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ಹೇಳಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಅವರು ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿ, “ಸಮಸ್ಯೆಯ ತೀವ್ರ ಗಂಭೀರತೆ ಮತ್ತು ರಾಷ್ಟ್ರದ ಮನಸ್ಥಿತಿಯನ್ನು ಪರಿಗಣಿಸಿ, ಇಂದು ಸಂಜೆ 6 ಗಂಟೆಗೆ ನಿಗದಿಯಾಗಿರುವ ಸರ್ವಪಕ್ಷ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ವಹಿಸುತ್ತಾರೆ ಮತ್ತು ಎಲ್ಲಾ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾಮೂಹಿಕ ಸಂಕಲ್ಪವನ್ನು ನಿರ್ಮಿಸುತ್ತಾರೆ ಎಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಿರೀಕ್ಷಿಸುತ್ತದೆ” ಎಂದು ತಮ್ಮ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಬಹುತೇಕ ಇಂತಾ ಸಂದಿಗ್ಧ ಸ್ಥಿತಿಯಲ್ಲೂ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆ ಅಥವಾ ನೇತೃತ್ವ ವಹಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಹಲವು ಸಂದರ್ಭಗಳಲ್ಲೂ ವಿಪಕ್ಷಗಳ ಪ್ರಶ್ನೆಗಳನ್ನು ಎದುರಿಸಲು ನರೇಂದ್ರ ಮೋದಿ ಯಾವತ್ತೂ ವಿಪಕ್ಷಗಳ ಮುಂದೆ ನಿಂತ ಉದಾಹರಣೆಯೇ ಇಲ್ಲದಾಗ ಕಾಂಗ್ರೆಸ್ ಪಕ್ಷದ ಈ ಒತ್ತಾಯದಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ತೀವ್ರ ಮುಜುಗರಕ್ಕೆ ಒಳಗಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page