Saturday, June 15, 2024

ಸತ್ಯ | ನ್ಯಾಯ |ಧರ್ಮ

ಲೋಕಸಭೆ ಚುನಾವಣೆ ನಂತರ ಮೋದಿ ವಿದೇಶದಲ್ಲಿ ನೆಲೆಸಲಿದ್ದಾರೆ : ಲಾಲೂ ಪ್ರಸಾದ್

2024 ರ ಲೋಕಸಭಾ ಚುನಾವಣೆ ನಂತರ ನರೇಂದ್ರ ಮೋದಿ ವಿದೇಶದಲ್ಲಿ ನೆಲೆಸಲಿದ್ದಾರೆ. ಆ ಕಾರಣಕ್ಕಾಗಿಯೇ ಅವರು ಪದೇ ಪದೆ ವಿದೇಶ ಪ್ರವಾಸ ಮಾಡುತ್ತಿದ್ದಾರೆ ಎಂದು ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರು ವ್ಯಂಗ್ಯ ಮಾಡಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಸೋಲುವ ಮತ್ತು ವಿದೇಶದಲ್ಲಿ ಆಶ್ರಯ ಪಡೆಯುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಚಿಂತನೆ ನಡೆಸಿದ್ದಾರೆ. ಅವರು ಪಿಜ್ಜಾ, ಮೊಮೊಸ್ ಮತ್ತು ಚೌ ಮೇನ್ ಸವಿಯಲು ಸೂಕ್ತ ದೇಶವನ್ನು ಹುಡುಕುತ್ತಿದ್ದಾರೆ,” ಎಂದು ಲಾಲು ಪ್ರಸಾದ್ ಅವರು ಹೇಳಿದ್ದಾರೆ ಎಂದು ಲಾಲೂ ಪ್ರಸಾದ್ ಯಾದವ್ ಹೇಳಿದ್ದಾರೆ.

ವಿರೋಧ ಪಕ್ಷಗಳೆಲ್ಲ ಸೇರಿ INDIA ಒಕ್ಕೂಟ ರಚಿಸಿದ ಹಿನ್ನೆಲೆಯಲ್ಲಿ “ವಿರೋಧ ಪಕ್ಷಗಳು ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ತುಷ್ಟೀಕರಣದ ರಾಜಕೀಯವನ್ನು ಮಾಡುತ್ತಿದ್ದಾರೆಂದು” ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ ಬೆನ್ನಲ್ಲೆ ಈ ಹೇಳಿಕೆಯನ್ನು ಲಾಲು ಪ್ರಸಾದ್ ನೀಡಿದ್ದು ಮಹತ್ವ ಪಡೆದುಕೊಂಡಿದೆ.

ಇದೇ ವೇಳೆ ಮಣಿಪುರ ಹಿಂಸಾಚಾರದ ಬಗ್ಗೆಯೂ ನರೇಂದ್ರ ಮೋದಿ ಮಾತನಾಡಿ, “ನಾವು ಒಗ್ಗಟ್ಟನ್ನು ಉಳಿಸಿಕೊಳ್ಳಬೇಕು ಮತ್ತು ಬಿಜೆಪಿಯನ್ನು ಸೋಲಿಸಬೇಕು. ನರೇಂದ್ರ ಮೋದಿಯವರು ಸಂವಿಧಾನವನ್ನು ಬುಡಮೇಲು ಮಾಡಲು ಪ್ರಯತ್ನಿಸುತ್ತಿದ್ದಾರೆ, ಆದರೆ ನಾವು ಅವರ ಪ್ರಯತ್ನವನ್ನು ವಿಫಲಗೊಳಿಸುತ್ತೇವೆ” ಎಂದು ಲಾಲೂ ಪ್ರಸಾದ್ ಯಾದವ್ ಹೇಳಿದರು. ಮಾತ್ರವಲ್ಲದೆ ಮಣಿಪುರದಲ್ಲಿ ನಡೆಯುತ್ತಿರುವ ಕಲಹಕ್ಕೆ ಕೇಂದ್ರ ಬಿಜೆಪಿ ಸರ್ಕಾರವೇ ಕಾರಣ ಎಂದು ಆರೋಪಿಸಿದರು.

ಹಲವು ದಿನಗಳ ಅನಾರೋಗ್ಯದಿಂದ ಬಳಲುತ್ತಿದ್ದ ಲಾಲೂ ಪ್ರಸಾದ್ ಯಾದವ್, ಮೊದಲ ಬಾರಿಗೆ ಬೆಂಗಳೂರಿನ ‘ಇಂಡಿಯಾ’ ಒಕ್ಕೂಟ ಸಭೆಯಲ್ಲಿ ಭಾಗಿಯಾಗಿದ್ದರು. ನಂತರ ತಮ್ಮ ಹಿರಿಯ ಮಗ ಬಿಹಾರದ ಸಚಿವ ತೇಜ್ ಪ್ರತಾಪ್ ಯಾದವ್ ಆಯೋಜಿಸಿದ್ದ ಸಮಾರಂಭದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡರು. ಮುಂದಿನ ದಿನಗಳಲ್ಲಿ ಮುಂಬೈನಲ್ಲಿ ಆಯೋಜಿಸುವ ‘ಇಂಡಿಯಾ’ ಒಕ್ಕೂಟದಲ್ಲೂ ಭಾಗಿಯಾಗುವ ಬಗ್ಗೆ ಉತ್ಸುಕತೆ ತೋರಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು