ಬೆಂಗಳೂರು: ಶಿಕ್ಷಕರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಕಾಂಗ್ರೆಸ್ ಕರ್ನಾಟಕ ಘಟಕದ ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನ ಬಿಜಿಎಸ್ ಬ್ಲೂಮ್‌ಫೀಲ್ಡ್ ಶಾಲೆಯಲ್ಲಿ 75ಕ್ಕೂ ಹೆಚ್ಚು ಮಹಿಳೆಯರು ಕೆಲಸ ಮಾಡುತ್ತಿದ್ದಾನೆ ಎಂದು 38 ವರ್ಷದ ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ನಾಯ್ಡು ಶಾಲೆಯ ಅಧ್ಯಕ್ಷರಾಗಿದ್ದು 2021ರ ಮಾರ್ಚ್ 1ರಿಂದ 2023ರ ಆಗಸ್ಟ್ 15ರವರೆಗೂ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.
ಆದರೆ, ಗುರಪ್ಪ ನಾಯ್ಡು ಇದನ್ನು ತಳ್ಳಿಹಾಕಿದ್ದು, ಇದು ಸುಳ್ಳು ಮತ್ತು ನಿರಾಧಾರ ಆರೋಪವನ್ನು ತನ್ನ ಮೇಲೆ ಹೊರಿಸಲಾಗಿದೆ ಎಂದು ಹೇಳಿದ್ದಾರೆ.
ಶಿಕ್ಷಕಿಯ ದೂರಿನ ಮೇರೆಗೆ ಚನ್ನಮ್ಮನಕೆರೆ ಅಚ್ಚುಕಟ್ಟೆ ಠಾಣೆ ಪೊಲೀಸರು ನ.26ರಂದು ಐಪಿಸಿ ಕಲಂ 354, 506, 509 504 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿರುವ ನಾಯ್ಡು ಿದು ಸುಳ್ಳು ಮತ್ತು ಆಧಾರರಹಿತ ಆರೋಪ ಎಂದು ಹೇಳಿದರು. ಈ ಕುರಿತು ಶೀಘ್ರವೇ ಪತ್ರಿಕಾಗೋಷ್ಠಿ ಕರೆಯುವುದಾಗಿಯೂ ಅವರು ತಿಳಿಸಿದರು.