ಅಕ್ರಮ ಹಣ ವರ್ಗಾವಣೆ ಪ್ರಕರಣ: ಅನಿಲ್ ದೇಶಮುಖ್‌ಗೆ ಜಾಮೀನು ಮಂಜೂರು

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಅನಿಲ್ ದೇಶಮುಖ್ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ದಾಖಲಿಸಿದ್ದ ಪ್ರಕರಣದಲ್ಲಿ ಜಾಮೀನು ಮಂಜೂರಾಗಿದ್ದು, 1 ಲಕ್ಷದ ಶ್ಯೂರಿಟಿ ಮೊತ್ತದ ಮೇಲೆ ಜಾಮೀನು ನೀಡಲಾಗಿದೆ.

ಜಾರಿ ನಿರ್ದೇಶನಾಲಯ (ಇಡಿ) ಪ್ರಕರಣದಲ್ಲಿ ಜಾಮೀನು ಪಡೆದ ನಂತರವೂ ಅನಿಲ್ ದೇಶಮುಖ್ ಅವರ ವಿರುದ್ಧ ದಾಖಲಾಗಿರುವ ಸಿಬಿಐ ಪ್ರಕರಣದಿಂದಾಗಿ ಅವರು ಬಂಧನದಲ್ಲಿಯೇ ಇರಬೇಕಾಗುತ್ತದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

Related Articles

ಇತ್ತೀಚಿನ ಸುದ್ದಿಗಳು