Wednesday, July 3, 2024

ಸತ್ಯ | ನ್ಯಾಯ |ಧರ್ಮ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಕೇಜ್ರಿವಾಲ್, ಸಿಸೋಡಿಯಾ, ಕವಿತಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಜುಲೈ 12 ರವರೆಗೆ ಇಲ್ಲಿನ ನ್ಯಾಯಾಲಯವು ಬುಧವಾರ ವಿಸ್ತರಿಸಿದೆ. ಮತ್ತಿಬ್ಬರು ಪ್ರಮುಖ ಆರೋಪಿಗಳಾದ ಮನೀಶ್ ಸಿಸೋಡಿಯಾ ಮತ್ತು ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ಕೋರ್ಟ್‌ ಜುಲೈ 25 ರವರೆಗೆ ವಿಸ್ತರಣೆ ಮಾಡಿದೆ.

ಇಂದು ಬುಧವಾರ ಕೇಜ್ರಿವಾಲ್ ಅವರು ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರ ನ್ಯಾಯಾಲಯದ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದರು.

ಜೂನ್ 26 ರಂದು ಸಿಬಿಐ ಕೇಜ್ರಿವಾಲ್‌ ಅವರನ್ನು ಬಂಧಿಸಿತ್ತು. ಇದಕ್ಕೂ ಮೊದಲು ಕೇಜ್ರಿವಾಲ್ ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ತುಷಾರ್ ರಾವ್ ಗೆಡೆಲಾ ಅವರ ಪೀಠದ ಮುಂದೆ ಕೇಜ್ರಿವಾಲ್ ಅವರ ವಕೀಲ ರಜತ್ ಭಾರದ್ವಾಜ್ ಅವರು ಜಾಮೀನು ಅರ್ಜಿಯನ್ನು ಪ್ರಸ್ತಾಪಿಸಿದರು.

ಸೆಕ್ಷನ್ 41 ಸಿಆರ್‌ಪಿಸಿಯನ್ನು ಅನುಸರಿಸದೆ ಸಿಎಂ ಅವರನ್ನು ಅಕ್ರಮ ಬಂಧನಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಆರೋಪಿಸಿ ಗುರುವಾರ ಸಲ್ಲಿಸಿರುವ ಮನವಿಯನ್ನು ಪಟ್ಟಿ ಮಾಡುವಂತೆ ಭಾರದ್ವಾಜ್ ನ್ಯಾಯಾಲಯವನ್ನು ಒತ್ತಾಯಿಸಿದರು.

ವಾದವನ್ನು ಪರಿಗಣಿಸಿದ ನ್ಯಾಯಾಲಯವು ಕಳೆದ ಶುಕ್ರವಾರ ವಿಷಯವನ್ನು ಆರೋಪ ಪಟ್ಟಿ ಮಾಡಲು ಒಪ್ಪಿಕೊಂಡಿತು. “ನಾವು ಅದನ್ನು ಮುಂದಿನ ದಿನದಲ್ಲಿ ಪಟ್ಟಿ ಮಾಡುತ್ತೇವೆ” ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಹೇಳಿದರು.

ಮಾರ್ಚ್ 21ರಂದು ಇಡಿಯಿಂದ ಬಂಧನಕ್ಕೊಳಗಾಗಿದ್ದ ಕೇಜ್ರಿವಾಲ್ ಅವರಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ಜೂನ್ 20ರಂದು ಜಾಮೀನು ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಇನ್ನಿಬ್ಬರ ನಾಯಕರ ಬಂಧನ ಅವಧಿ ವಿಸ್ತರಣೆ

ಎಎಪಿ ನಾಯಕ ಮನೀಶ್ ಸಿಸೋಡಿಯಾ ಮತ್ತು ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯವು ಜುಲೈ 25 ರವರೆಗೆ ವಿಸ್ತರಿಸಿದೆ. ಈ ಹಿಂದೆ ನೀಡಲಾಗಿದ್ದ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರ ಕಸ್ಟಡಿಯನ್ನು ವಿಸ್ತರಿಸಿದ್ದಾರೆ.

ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಈ ಹಿಂದೆ ನೀಡಲಾಗಿದ್ದ ಕಸ್ಟಡಿ ಅವಧಿ ಮುಗಿದಿರುವ ಕಾರಣ ಅವರ ನ್ಯಾಯಾಂಗ ಬಂಧನವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಸ್ತರಿಸಿದರು. ಟ ನಂತರ ಜುಲೈ 12 ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದಾರೆ. ಎಎಪಿ ಸಂಚಾಲಕರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು.

Related Articles

ಇತ್ತೀಚಿನ ಸುದ್ದಿಗಳು