ಭಾರತೀಯ ಹವಾಮಾನ ಇಲಾಖೆ ಮಾಹಿತಿಯಂತೆ ಈ ಬಾರಿ ಮೇ 31 ಕ್ಕೇ ಭಾರತಕ್ಕೆ ಮಾನ್ಸೂನ್ ಆಗಮಿಸಲಿದ್ದು ದಕ್ಷಿಣದ ತುದಿ ಕೇರಳ ಪ್ರವೇಶಿಸುವ ಸಂಭವವಿದೆ ಎಂದು ತಿಳಿಸಿದೆ. ಈ ಸಮಯದಲ್ಲಿ ಸ್ವಲ್ಪ ಆಚೀಚೆ ಆದರೂ ನಾಲ್ಕೈದು ದಿನ ಹೆಚ್ಚು ಕಮ್ಮಿ ಆಗಬಹುದು ಎಂದು ನಿರೀಕ್ಷಿಸಲಾಗಿದೆ.
ಈ ಬಾರಿ ಮುಂಗಾರು ಮುಂಚಿತವಾಗೇನು ಪ್ರವೇಶ ಮಾಡುತ್ತಿಲ್ಲ. ಸಾಮಾನ್ಯವಾಗಿ ಜೂ.1ರಂದು ಮುಂಗಾರು ಮಾರುತಗಳು ಕೇರಳ ಪ್ರವೇಶಿಸುವ ವಾಡಿಕೆ ಹೊಂದಿದ್ದು, ಅದೇ ಸಮಯವೇ ಈ ವರ್ಷವೂ ಪಾಲನೆಯಾಗಬಹುದು’ ಎಂದು ಹೇಳಿದೆ.
ನೈಋತ್ಯ ಮಾನ್ಸೂನ್ ಭಾರತಕ್ಕೆ ಪ್ರಮುಖ ಮಳೆಯನ್ನು ತರುವ ಕಾಲ. ಇದು ದೇಶದ ವಾರ್ಷಿಕ ಮಳೆಯ ಬಹುಪಾಲನ್ನು ಒದಗಿಸುತ್ತದೆ. ಈ ಅವಧಿಯಲ್ಲಿ ಖಾರೀಫ್ ಬೆಳೆಗಳನ್ನು ಹೆಚ್ಚಾಗಿ ಬೆಳೆಯುವುದರಿಂದ ಜೂನ್ ಮತ್ತು ಜುಲೈ ತಿಂಗಳ ಅವಧಿಯ ನೈಋತ್ಯ ಮಾನ್ಸೂನ್ ಅತಿ ಮಹತ್ವದ್ದು ಅಂತಲೇ ಪರಿಗಣಿಸಲಾಗುತ್ತದೆ. ನೈಋತ್ಯದಿಂದ ಬೀಸುವ ಮಾನ್ಸೂನ್ ಸಾಮಾನ್ಯವಾಗಿ ಜೂನ್‌ನಲ್ಲಿ ಆರಂಭವಾಗಿ ಸೆಪ್ಟೆಂಬರ್ ತಿಂಗಳಿನಲ್ಲಿ ಕೊನೆಗೊಳ್ಳುತ್ತದೆ.