Thursday, July 3, 2025

ಸತ್ಯ | ನ್ಯಾಯ |ಧರ್ಮ

Big Breaking news : ಬರೋಬ್ಬರಿ 1 ತಿಂಗಳ ನಂತರ ಲೈಂಗಿಕ ದೌರ್ಜನ್ಯದ ಆರೋಪಿ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ

ಹಾಸನದ ಲೈಂಗಿಕ ದೌರ್ಜನ್ಯದ ಆರೋಪಿ, NDA ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಬರೋಬ್ಬರಿ 1 ತಿಂಗಳ ನಂತರ ಮಾಧ್ಯಮಗಳ ಮೂಲಕ ಪ್ರತ್ಯಕ್ಷರಾಗಿದ್ದಾನೆ. ಅಶ್ಲೀಲ ವಿಡಿಯೋ ಪೆನ್​​ಡ್ರೈವ್​ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಜೆಡಿಎಸ್​ ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಮೂಲಕ ಮಾತನಾಡಿದ್ದಾನೆ.

ವಿದೇಶದಲ್ಲಿದ್ದುಕೊಂಡೇ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಇದೇ ಮೇ 31ರಂದು ಎಸ್​​ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದಾನೆ. ವಿಡಿಯೋದಲ್ಲಿ ತಂದೆ- ತಾಯಿ, ತಾತನ ಕ್ಷಮೆಯಾಚಿಸಿದ್ದಾನೆ. ಅಲ್ಲದೇ ಜನರು, ಪಕ್ಷದ ಕಾರ್ಯಕರ್ತರ ಬಳಿಯೂ ಕ್ಷಮೆ ಕೋರಿದ್ದಾನೆ.

ಇನ್ನು ಚುನಾವಣೆ ನಂತರ ವಿದೇಶಕ್ಕೆ ತೆರಳಿರುವ ಬಗ್ಗೆ ಪ್ರತಿಕ್ರಿಯಿಸಿದ್ದು, ನನ್ನ ವಿದೇಶ ಪ್ರವಾಸ ಮೊದಲೇ ನಿಗದಿಯಾಗಿತ್ತು. ನಾನು ಯಾವುದೇ ವಿಚಾರಣೆಗೆ ಹೆದರಿ ಹೋದದ್ದಲ್ಲ ಎಂದು ವಿಡಿಯೋದಲ್ಲಿ ಸ್ಪಷ್ಟಪಡಿಸಿದ್ದಾನೆ.

ವಿದೇಶಕ್ಕೆ ಹೋದ ಮೂರ್ನಾಲ್ಕು ದಿನದ ಬಳಿಕ ಪ್ರಕರಣದ ಬಗ್ಗೆ ಮಾಹಿತಿ ಗೊತ್ತಾಗಿದೆ. ಏಪ್ರಿಲ್ 26ರಂದು ಚುನಾವಣೆ ನಡೆಯಿತು. ಆಗ ಕೇಸ್​ ದಾಖಲಾಗಿರಲಿಲ್ಲ. ಎಸ್​​ಐಟಿ ಕೂಡ ರಚನೆ ಆಗಿರಲಿಲ್ಲ. ಆ ನಂತರ ಎಸ್​​ಐಟಿ ನೋಟಿಸ್​ ನೀಡಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ಆದರೆ ನನ್ನ ವಿರುದ್ಧದ ಎಲ್ಲಾ ಆರೋಪಗಳು ಸುಳ್ಳು ಎಂದು ಪ್ರಜ್ವಲ್ ರೇವಣ್ಣ ಸ್ಪಷ್ಟಪಡಿಸಿದ್ದಾನೆ.

“ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಷಡ್ಯಂತ್ರ ರೂಪಿಸಲಾಗಿದೆ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ಕೆಲವು ಶಕ್ತಿಗಳು ಒಟ್ಟಾಗಿ ನನ್ನ ವಿರುದ್ಧ ಪಿತೂರಿ ನಡೆಸಿವೆ. ಇಷ್ಟಾದರೂ ನಾನು ನನ್ನ ತಾತ, ಜೆಡಿಎಸ್‌ ಕಾರ್ಯಕರ್ತರಿಗೆ ಕ್ಷಮೆಯಾಚಿಸುತ್ತೇನೆ. ನಾನು ಮೇ 31ರಂದು ಬೆಳಗ್ಗೆ 10 ಗಂಟೆಗೆ ಭಾರತಕ್ಕೆ ಬಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ಆದರೂ, ನಾನು ಭಾರತಕ್ಕೆ ಬಂದು ವಿಚಾರಣೆ ಎದುರಿಸುತ್ತೇನೆ” ಎಂದು ವಿಡಿಯೋದಲ್ಲಿ ತಿಳಿಸಿದ್ದಾನೆ.

“ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ. ನನ್ನ ವಿರುದ್ಧ ಮಾಡಿದ ಆರೋಪಗಳನ್ನು ಕೇಳಿ ನನಗೆ ಶಾಕ್‌ ಆಯಿತು. ಇದೇ ಕಾರಣಕ್ಕಾಗಿ ನಾನು ಕೆಲ ದಿನಗಳಿಂದ ಡಿಪ್ರೆಷನ್ ನಲ್ಲಿ ಇದ್ದೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ನಾನು ವಿದೇಶಕ್ಕೆ ಬಂದ ಬಳಿಕ ಪ್ರಕರಣ ತಿಳಿಯಿತು. ನನ್ನ ವಿರುದ್ಧ ರಾಹುಲ್‌ ಗಾಂಧಿ ಸೇರಿ ಎಲ್ಲರೂ ವೇದಿಕೆ ಮೇಲೆಯೇ ಹೇಳಿಕೆಗಳನ್ನು ಕೊಟ್ಟರು. ಆ ಮೂಲಕ ರಾಜಕೀಯ ಪಿತೂರಿ ನಡೆಸಿದರು. ಆದರೂ, ನಾನು ರಾಜ್ಯಕ್ಕೆ ಆಗಮಿಸಿ ತನಿಖೆಗೆ ಸಹಕಾರ ನೀಡುತ್ತೇನೆ” ಎಂದು ಹೇಳಿದ್ದಾನೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page