ಚುನಾವಣಾ ಆಯೋಗ ಮತ್ತು ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ನೇರವಾಗಿ ಸಾಕ್ಷ್ಯ ಸಮೇತ ಮತಗಳ್ಳತನದ ಆರೋಪ ಮಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುಂದಿನ ದಿನಗಳಲ್ಲಿ ಮತ್ತಷ್ಟು ಸ್ಫೋಟಕ ಸಾಕ್ಷ್ಯಗಳನ್ನು ಜನತೆಯ ಮುಂದಿಡುವುದಾಗಿ ಹೇಳಿದ್ದಾರೆ.
ಬಿಜೆಪಿ ಮತಗಳ್ಳತನದಲ್ಲಿ ನೇರ ಭಾಗಿಯಾಗಿದೆ ಎಂದು ಮತ್ತೊಮ್ಮೆ ಪುನರುಚ್ಚರಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಂಬರುವ ದಿನಗಳಲ್ಲಿ ಮತ್ತಷ್ಟು ಸ್ಫೋಟಕ ಸಾಕ್ಷ್ಯ ಹೊರಹಾಕುವುದಾಗಿ ಹೇಳಿದ್ದು, ಕಾಂಗ್ರೆಸ್ ಈ ಬಗ್ಗೆ ಮತ್ತಷ್ಟು ಸಾಕ್ಷ್ಯ ಕಲೆಹಾಕುತ್ತಿರುವ ಬಗ್ಗೆ ಸೂಚ್ಯವಾಗಿ ಹೇಳಿದ್ದಾರೆ.
ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಮಹಾರಾಷ್ಟ್ರ, ಹರಿಯಾಣ ಹಾಗೂ ಕರ್ನಾಟಕದಲ್ಲಿ ಮತಗಳ್ಳತನ ನಡೆದಿದೆ. ಈ ಬಗ್ಗೆ ನಾವು ನಿಖರ ಸಾಕ್ಷ್ಯ ಒದಗಿಸಿದ್ದೇವೆ. ಭವಿಷ್ಯದಲ್ಲಿ ನಿಖರ ಹಾಗೂ ಸ್ಫೋಟಕ ಮಾಹಿತಿ ನೀಡುತ್ತೇವೆ’ ಎಂದು ಹೇಳಿದ್ದಾರೆ. ‘ಮತಗಳ್ಳರೇ ಗದ್ದುಗೆ ಬಿಡಿ’ ಎನ್ನುವ ಘೋಷವಾಕ್ಯ ದೇಶದಾದ್ಯಂತ ಮಾರ್ದನಿಸುತ್ತಿದೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ.