ಹಾಸನ : ಹೊಳೆನರಸೀಪುರ ನಡುವಿನ ಮೊಸಳೆ ಹೊಸಳ್ಳಿ ಬಳಿ ಗಣೇಶ ಮೆರವಣಿಗೆ ವೇಳೆ ಭೀಕರ ರಸ್ತೆ ಅಪಘಾತ. ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್ ಲಾರಿಗೆ ಸಿಲುಕಿ ಸುಮಾರು 5 ಜನರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೊಸಳೆ ಹೊಸಳ್ಳಿ ರಸ್ತೆಯಲ್ಲಿ ಗಣೇಶ ವಿಸರ್ಜನೆಗೆ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿದ ಕ್ಯಾಂಟರ್ ನುಗ್ಗಿದ ಪರಿಣಾಮ ಈ ಘಟನೆ ಸಂಭವಿಸಿದೆ. ಸುಮಾರು 25ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು ಮೃತರ ಸಂಖ್ಯೆ 8 ಕ್ಕೂ ಹೆಚ್ಚಾಗುವ ಸಂಭವವಿದೆ. ಗಾಯಾಳುಗಳನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕ್ಷೇತ್ರದ ಶಾಸಕರಾದ ಹೆಚ್.ಡಿ ರೇವಣ್ಣ ಆಗಮಿಸಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳುತ್ತಿದ್ದಾರೆ.
