ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆ ಬೀಳುತ್ತಿದ್ದು, ಕಾವೇರಿ ಜಲಾನಯನ ಪ್ರದೇಶದಲ್ಲೂ ಸಹ ಒಳಹರಿವು ಹೆಚ್ಚಿದೆ. ಹೀಗಾಗಿ ಕೃಷ್ಣರಾಜಸಾಗರ ಜಲಾಶಯದಿಂದ ಸುಮಾರು 80,000 ರಿಂದ 1,20,000 ಕ್ಯೂಸೆಕ್ಸ್ ಗೂ ಅಧಿಕ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು ಎಂದು ಮೂಲಗಳು ತಿಳಿಸಿವೆ. ಹೀಗಾಗಿ ನದಿ ಪಾತ್ರದಲ್ಲಿ ಪ್ರವಾಹ ಸ್ಥಿತಿ ಎದುರಾಗಿದೆ.
ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರಿಕೆ ವಹಿಸಿ, ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗಲು ಈ ಮೂಲಕ ಕೋರಲಾಗಿದೆ.
ಕೆಆರ್‌ಎಸ್ ಜಲಾಶಯದ ಮಟ್ಟವು ಪೂರ್ಣವಾಗುವ ಹಂತದಲ್ಲಿದೆ. 50,000 ದಿಂದ 80,000 ಕ್ಯೂಸೆಕ್ಗಳವರೆಗೆ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಇದು ನದಿ ಪಾತ್ರದಲ್ಲಿ ಅಪಾಯಕಾರಿ ಮಟ್ಟ ತಲುಪಬಹುದು. ಆದ್ದರಿಂದ, ನದಿಯ ಎರಡೂ ದಡಗಳು ಮತ್ತು ಕಾವೇರಿ ನದಿಯ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಎಲ್ಲಾ ಜನರು ಸುರಕ್ಷಿತ ಸ್ಥಳಕ್ಕೆ ತೆರಳಲು ಮತ್ತು ಅವರ ಜೀವ ಮತ್ತು ಆಸ್ತಿಯ ಸುರಕ್ಷತೆ ಮತ್ತು ಭದ್ರತೆಗಾಗಿ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ.