ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಎಲ್ರ ಕಾಲೆಳಿಯತ್ತೆ ಕಾಲ ಚಂದನ್ ಶೆಟ್ಟಿ ನಾಯಕನಾಗೋ ಕಾಲ

P

Peepal Media • ಸಿನಿಮಾ

• 1 ನಿಮಿಷದ ಓದು

ಎಲ್ರ ಕಾಲೆಳಿಯತ್ತೆ ಕಾಲ ಚಂದನ್ ಶೆಟ್ಟಿ ನಾಯಕನಾಗೋ ಕಾಲ

ಉಷಾ ಗೋವಿಂದರಾಜು ನಿರ್ಮಾಣದ “ಎಲ್ರ ಕಾಲೆಳಿಯತ್ತೆ ಕಾಲ” ಚಿತ್ರದ ಪತ್ರಿಕಾಗೋಷ್ಠಿ ಶುಕ್ರವಾರ ಬನಶಂಕರಿಯಲ್ಲಿರುವ ಸಂಕ್ರಾಂತಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಚಿತ್ರದ ನಿರ್ದೇಶಕ ಮತ್ತು ನಟ ಸುಜಯ್ ಶಾಸ್ತ್ರಿ, ನಾಯಕ ಚಂದನ್ ಶೆಟಿ, ನಾಯಕಿ ಅರ್ಚನಾ ಕೊಟ್ಟಿಗೆ,
ಕಥೆ-ಚಿತ್ರಕಥೆ ಮತ್ತು ಸಂಭಾಷಣೆ ಬರೆದಿರುವ ರಾಜಗುರು ಹೊಸಕೋಟೆ, ಸಂಗೀತ ನಿರ್ದೇಶಕರಾದ ಪ್ರವೀಣ್-ಪ್ರದೀಪ್, ಬಿಗ್ ಬಾಸ್ ವಿಜೇತ ಮಂಜು ಪಾವಗಡ ಮುಂತಾದವರು ಹಾಜರಿದ್ದರು.

 ನಮ್ಮ ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿದೆ. ಸದ್ಯದಲ್ಲೇ ಮೊದಲ ಪ್ರತಿ ಬರಲಿದೆ. ಇಂದಿನಿಂದ ಪ್ರಚಾರ ಕಾರ್ಯ ಶುರುವಾಗಲಿದೆ. ಇಂದು ನಮ್ಮ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಅದೊಂದು ಮದುವೆಯ ಆರತಕ್ಷತೆಯ ಹಾಡು. ಇದೇ ಕಲ್ಯಾಣ ಮಂಟಪದಲ್ಲಿ ಆ ಹಾಡಿನ ಚಿತ್ರೀಕರಣ ನಡೆದಿದ್ದರಿಂದ, ಅದರ ನೆನಪಿನಲ್ಲಿ ಇಲ್ಲೇ ಪತ್ರಿಕಾಗೋಷ್ಠಿ ಮಾಡುತ್ತಿದ್ದೇವೆ. ರಾಜಗುರು ಹೊಸಕೋಟೆ ಬರೆದಿರುವ ಈ ಹಾಡನ್ನು ಗುರುರಾಜ ಹೊಸಕೋಟೆ, ಪ್ರವೀಣ್ – ಪ್ರದೀಪ್ ಹಾಡಿದ್ದಾರೆ.  ಇಂದಿನಿಂದ ಐದು ಅಥವಾ 10 ದಿನಗಳಿಗೊಮ್ಮೆ ಚಿತ್ರದ ಹಾಡು ಅಥವಾ ಕಂಟೆಂಟ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರವನ್ನು ಮುಂದುವರೆಸುತ್ತೇವೆ ಎನ್ನುತ್ತದೆ ಚಿತ್ರತಂಡ.  ಇನ್ನು ಈ ಚಿತ್ರದಲ್ಲಿ  80ರ ದಶಕದ ಕಥೆ ಇದೆಯಂತೆ. ಒಂದು ಘಟನೆ ಒಬ್ಬ ವ್ಯಕ್ತಿಯ ಜೀವನದಲ್ಲಿ ಯಾವ ತರಹದ ಪಾತ್ರ ವಹಿಸುತ್ತದೆ ಎಂದು ಹೇಳುವ ಪ್ರಯತ್ನ ಮಾಡಿದ್ದೇವೆ. ಕಾಲ ಯಾರನ್ನೂ ಬಿಡುವುದಿಲ್ಲ, ಎಲ್ಲರ ಕಾಲನ್ನೂ ಎಳೆಯುತ್ತದೆ ಎಂದು ಈ ಚಿತ್ರದ ಮೂಲಕ ತೋರಿಸುವುದಕ್ಕೆ ಹೊರಟಿದ್ದೇವೆ. ಇಲ್ಲಿ ಚಂದನ್ ಮತ್ತು ಅರ್ಚನಾ ಅವರ ಕೆಮಿಸ್ಟ್ರಿ ಚೆನ್ನಾಗಿ ವರ್ಕೌಟ್ ಆಗಿದೆ. ಇಬ್ಬರೂ ಬಹಳ ಸಹಜವಾಗಿ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇಡೀ ಚಿತ್ರ ವಿಭಿನ್ನವಾಗಿ ಮತ್ತು ನಾವು ಅಂದುಕೊಂಡಿದ್ದಕ್ಕಿಂತ ಚೆನ್ನಾಗಿ ಮೂಡಿಬಂದಿದೆ ಅಂತಾರೆ ನಿರ್ದೇಶಕ ಸುಜಯ್ ಶಾಸ್ತ್ರಿ.

 ಇಂದು ನಮ್ಮ ಚಿತ್ರದ ಗೋಲ್ಡ್ ಫ್ಯಾಕ್ಟರಿ ಎಂಬ ಮೊದಲ ಹಾಡು ಬಿಡುಗಡೆಯಾಗಿದೆ. ಈ ಹಾಡಿನಲ್ಲಿ ನಾನು ತುಂಬಾ ಸಿಟ್ಟಾಗಿರುತ್ತೇನೆ. ಅದಕ್ಕೊಂದು ಕಾರಣವೂ ಇರುತ್ತದೆ. ಹಾಡು, ಚಿತ್ರ ಎರಡೂ ಬಹಳ ಚೆನ್ನಾಗಿ ಮೂಡಿ ಬಂದಿದೆ. ಇದೊಂದು ವಿಭಿನ್ನವಾದ ಚಿತ್ರ. ಸುಜಯ್ ಶಾಸ್ತ್ರಿ ಅವರಿಂದ ತುಂಬಾ ಕಲಿತೆ. ಅವರು ನನ್ನನ್ನು ಚೆನ್ನಾಗಿ ಮೌಲ್ಡ್ ಮಾಡಿದ್ದಾರೆ ಎಂದಿದ್ದು ಚಿತ್ರದ ನಾಯಕ ಚಂದನ್ ಶೆಟ್ಟಿ.

 ಉಳಿದಂತೆ ಚಿತ್ರದಲ್ಲಿ ತಾರಾ, ದತ್ತಣ್ಣ, ಮಂಡ್ಯ ರಮೇಶ್, ಮಂಜು ಪಾವಗಡ, ರಜನಿಕಾಂತ್ ಮುಂತಾದವರು ಅಭಿನಯಿಸಿದ್ದಾರೆ.

P

Peepal Media

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version