ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

“ಲವ್ 360” ಟ್ರೇಲರ್ ಬಿಡುಗಡೆ ಮಾಡಿದ ಹ್ಯಾಟ್ರಿಕ್ ಹೀರೋ

P

Peepal Media • ಸಿನಿಮಾ

• 1 ನಿಮಿಷದ ಓದು

“ಲವ್ 360” ಟ್ರೇಲರ್ ಬಿಡುಗಡೆ ಮಾಡಿದ ಹ್ಯಾಟ್ರಿಕ್ ಹೀರೋ

ರೆಡಿ ಆಯ್ತು ಶಶಾಂಕ್ ಹೊಸ ಸಿನಿಮಾ

ಶಶಾಂಕ್ ನಿರ್ದೇಶನದ “ಲವ್ 360” ಚಿತ್ರದ ಥಿಯೇಟ್ರಿಕಲ್ ಟ್ರೇಲರ್ ಶಿವರಾಜ್ ಕುಮಾರ್ ಅವರಿಂದ ಬಿಡುಗಡೆಯಾಗಿದೆ. ಚಿತ್ರ ಇದೇ ಆಗಸ್ಟ್ 19 ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ.

ಶಶಾಂಕ್ ನನ್ನ ಅಚ್ಚುಮೆಚ್ಚಿನ ನಿರ್ದೇಶಕರಲ್ಲಿ ಒಬ್ಬರು. ಅವರ ನಿರ್ದೇಶನದಲ್ಲಿ ನಾನು ನಟಿಸಬೇಕಿತ್ತು. ಕಾರಣಾಂತರದಿಂದ ಆಗಿಲ್ಲ. ಮುಂದೆ ನಮಿಬ್ಬರ ಕಾಂಬಿನೇಶನ್ ನಲ್ಲಿ ಚಿತ್ರ ಬರುತ್ತದೆ. ಸದ್ಯ ಶಶಾಂಕ್  ನಿರ್ದೇಶನದ “ಲವ್ 360” ಚಿತ್ರದ ಟ್ರೇಲರ್ ನೋಡಿದೆ. ಚೆನ್ನಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಸುಮಧುರವಾಗಿದೆ. ಅದರಲ್ಲೂ ಸಿದ್ ಶ್ರೀರಾಮ್ ಹಾಡಿರುವ “ಜಗವೇ ನೀನು ಗೆಳತಿಯೆ” ಹಾಡಂತೂ ನನಗೆ ಬಹಳ ಇಷ್ಟ. ನಾಯಕ, ನಾಯಕಿ ಎಲ್ಲರೂ ಚೆನ್ನಾಗಿ ಅಭಿನಯಿಸಿದ್ದಾರೆ. ನಾನು ಬಿಡುಗಡೆ ದಿನದಂದೇ ಈ ಚಿತ್ರವನ್ನು ಚಿತ್ರಮಂದಿರದಲ್ಲಿ ಅಭಿಮಾನಿಗಳ  ಜೊತೆಗೆ ನೋಡುತ್ತೇನೆ ಎನ್ನುತ್ತಾರೆ ನಟ ಶಿವರಾಜಕುಮಾರ್.

ಇನ್ನು ಈ ಬಗ್ಗೆ ಮಾತನಾಡಿದ ಚಿತ್ರದ ನಿರ್ದೇಶಕ ಶಶಾಂಕ್, ಚಿತ್ರದ ಥಿಯೇಟ್ರಿಕಲ್ ಟ್ರೇಲರ್ ಬಿಡುಗಡೆ ಮಾಡಿ ಕೊಟ್ಟ ಶಿವರಾಜಕುಮಾರ್ ಅವರಿಗೆ ಧನ್ಯವಾದಗಳು. ಚಿತ್ರ ಆಗಸ್ಟ್ ೧೯ರಂದು ತೆರೆ ಕಾಣಲಿದೆ.  ಅದಕ್ಕೂ ಮುನ್ನ ನಾವು ಬೇರೆ ಬೇರೆ ಊರುಗಳಿಗೆ ಭೇಟಿ ನೀಡುತ್ತಿದ್ದೇವೆ. ಹೋದ ಕಡೆ ಸಿಗುತ್ತಿರುವ ಅಭೂತಪೂರ್ವ ಬೆಂಬಲಕ್ಕೆ‌ ಮನತುಂಬಿ ಬಂದಿದೆ. ಖ್ಯಾತ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆಯವರು ನಮ್ಮ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ. ನೂರೈವತ್ತಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದೆ.  ಈಗಾಗಲೇ ಹಾಡುಗಳನ್ನು ಜನಪ್ರಿಯಗೊಳಿಸಿರುವ ಕನ್ನಡ ಕಲಾ ರಸಿಕರು ಚಿತ್ರವನ್ನೂ ಗೆಲ್ಲಿಸುತ್ತಾರೆಂಬ ನಂಬಿಕೆ ಇದೆ ಎಂದರು.

 ನನ್ನ ಸ್ನೇಹಿತನೊಬ್ಬ, ನೀನು ಹೀರೋ ತರಹ ಇಲ್ಲ. ನಿನ್ನ ಸಿನಿಮಾ ಯಾರು ನೋಡುತ್ತಾರೆ ಅಂದಿದ್ದ. ಆ ಮಾತು‌ ನನ್ನ ಮನಸ್ಸಿನಲ್ಲೇ ಇತ್ತು. ಆದರೆ ಈಗ ಬೇರೆ ಬೇರೆ ಊರುಗಳಿಗೆ, ಅದರಲ್ಲೂ ಕಾಲೇಜುಗಳಿಗೆ ಭೇಟಿ ನೀಡಿದಾಗ ಅಲ್ಲಿನ ವಿದ್ಯಾರ್ಥಿಗಳು ನನ್ನನ್ನು ಗುರುತಿಸುತ್ತಿರುವ ರೀತಿ ಕಂಡು ಆಶ್ಚರ್ಯವಾಗಿದೆ. ಹೆಣ್ಣುಮಕ್ಕಳಂತೂ ನಾವು ನಿಮ್ಮ ಅಭಿಮಾನಿಗಳು. ನಿಮ್ಮ ಚಿತ್ರದ ಹಾಡುಗಳು ತುಂಬಾ ‌ಚೆನ್ನಾಗಿದೆ. ನೀವು ತುಂಬಾ ಚೆನ್ನಾಗಿ ಕಾಣುತ್ತೀರಾ ಎನ್ನುತ್ತಿದ್ದಾರೆ. ಅದಕ್ಕೆಲ್ಲಾ ಕಾರಣ ನಿರ್ದೇಶಕ ಶಶಾಂಕ್ ಸರ್. ಅವರಿಗೆ ಹಾಗೂ ನನಗೆ ಬೆಂಬಲ ನೀಡುತ್ತಿರುವ ನನ್ನ‌ ತಾಯಿ ಹಾಗೂ ಅಂಕಲ್ ಗೆ ಧನ್ಯವಾದ ಎಂದರು ನಾಯಕ ಪ್ರವೀಣ್. ಇನ್ನು ಚಿತ್ರದ ನಾಯಕಿ, ನಾಯಕಿ ರಚನಾ ಇಂದರ್ ಸಹ ಚಿತ್ರಕ್ಕೆ ಬಿಡುಗಡೆ ಪೂರ್ವದಲ್ಲಿ ಸಿಗುತ್ತಿರುವ ಪ್ರತಿಕ್ರಿಯೆಗೆ ಸಂತಸಪಟ್ಟರು.

P

Peepal Media

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version