ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಜನೀಕಾಂತ್ ನಟನೆಯ ಸಿನಿಮಾ ಸೆಟ್ ನಲ್ಲಿ ಅವಘಡ – ಕಾರ್ಮಿಕ ಸಾವು

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ಸಿನಿಮಾ

• 1 ನಿಮಿಷದ ಓದು

ರಜನೀಕಾಂತ್ ನಟನೆಯ ಸಿನಿಮಾ ಸೆಟ್ ನಲ್ಲಿ ಅವಘಡ – ಕಾರ್ಮಿಕ ಸಾವು

ಚೆನ್ನೈ : ಕಾಲಿವುಡ್ ಸೂಪರ್ ಸ್ಟಾರ್ ರಜನಿಕಾಂತ್ (Actor Rajanikanth) ಅಭಿನಯದ ಬಹುನಿರೀಕ್ಷಿತ ‘ಜೈಲರ್ 2’ (Jailer 2) ಚಿತ್ರದ ಸೆಟ್‌ನಲ್ಲಿ ಭಾರಿ ದುರಂತವೊಂದು (Tragedy) ಸಂಭವಿಸಿದೆ. ಚೆನ್ನೈನ ಪಣಯೂರ್‌ನಲ್ಲಿರುವ ಖಾಸಗಿ ಸ್ಟುಡಿಯೋವೊಂದರಲ್ಲಿ ಚಿತ್ರದ ಸೆಟ್ ನಿರ್ಮಾಣದ ಕೆಲಸದಲ್ಲಿ ತೊಡಗಿದ್ದ 28 ವರ್ಷದ ಯುವಕ ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದಾರೆ.

ಮೃತರನ್ನು ಕಲಾ ವಿಭಾಗದ (Art Department) ಕಾರ್ಮಿಕ ಕಾರ್ತಿಕೇಯನ್ ಎಂದು ಗುರುತಿಸಲಾಗಿದೆ. ವರದಿಯ ಪ್ರಕಾರ, ಗುರುವಾರ ಪಣಯೂರ್ ಸ್ಟುಡಿಯೋದಲ್ಲಿ ಈ ಘಟನೆ ನಡೆದಿದೆ. ಕಾರ್ತಿಕೇಯನ್ ಅವರು ಚಿತ್ರೀಕರಣಕ್ಕಾಗಿ ಮನೆಯೊಂದರ ಸೆಟ್ ನಿರ್ಮಿಸುವ ಕೆಲಸದಲ್ಲಿ ನಿರತರಾಗಿದ್ದಾಗ, ಆಕಸ್ಮಿಕವಾಗಿ ವಿದ್ಯುತ್ ಸೋರಿಕೆಯಾಗಿ ಅವರಿಗೆ ತೀವ್ರವಾದ ಶಾಕ್ ತಗುಲಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ಈ ಸಂಬಂಧ ಕಾನತ್ತೂರು ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ. ಸ್ಟುಡಿಯೋದಲ್ಲಿ ವಿದ್ಯುತ್ ಸೋರಿಕೆಗೆ ನಿಖರ ಕಾರಣವೇನು ಮತ್ತು ಸುರಕ್ಷತಾ ಕ್ರಮಗಳಲ್ಲಿ ಲೋಪವಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಸದ್ಯಕ್ಕೆ ಘಟನೆಯ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದ್ದು, ಇನ್ನು ಅಧಿಕೃತವಾಗಿ ಎಫ್‌ಐಆರ್ ದಾಖಲಾಗಿಲ್ಲ ಎಂದು ತಿಳಿದುಬಂದಿದೆ.

ವಿಪರ್ಯಾಸವೆಂದರೆ, ಚಿತ್ರದ ಶೂಟಿಂಗ್ ಪೂರ್ಣಗೊಂಡಿದೆ ಎಂದು ಚಿತ್ರತಂಡ ಇತ್ತೀಚೆಗಷ್ಟೇ ಸಂಭ್ರಮಿಸಿತ್ತು. ಕಳೆದ ಏಪ್ರಿಲ್ 21 ರಂದು ನಿರ್ಮಾಣ ಸಂಸ್ಥೆ ಸನ್ ಪಿಕ್ಚರ್ಸ್, ನಟ ರಜನಿಕಾಂತ್ ಮತ್ತು ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಅವರು ಕೇಕ್ ಕತ್ತರಿಸಿ ಸಂಭ್ರಮಿಸುತ್ತಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿತ್ತು. ಸಿನಿಮಾ ಕೆಲಸಗಳು ಮುಗಿಯುವ ಹಂತದಲ್ಲಿದ್ದಾಗ ಇಂತಹದೊಂದು ದುರಂತ ಸಂಭವಿಸಿರುವುದು ಚಿತ್ರರಂಗದಲ್ಲಿ ವಿಷಾದ ಮೂಡಿಸಿದೆ.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು