ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ʼಅಟ್ಲಿʼ ಚಿತ್ರದಲ್ಲಿ ವಿಶೇಷ ಪಾತ್ರ : ಫ್ಯಾಮಿಲಿ ಸ್ಟಾರ್ ಅಭಿಜಿತ್

PPeepal Media Desk

Peepal Media Desk • ಸಿನಿಮಾ

• 1 ನಿಮಿಷದ ಓದು

ʼಅಟ್ಲಿʼ ಚಿತ್ರದಲ್ಲಿ ವಿಶೇಷ ಪಾತ್ರ : ಫ್ಯಾಮಿಲಿ ಸ್ಟಾರ್ ಅಭಿಜಿತ್

ಬೆಂಗಳೂರು : ಕಳೆದ ಮೂರು ದಶಕಗಳಿಂದ ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನಗೆದ್ದಿರುವ, ಫ್ಯಾಮಿಲಿ ಸ್ಟಾರ್ ಎಂದೇ ಖ್ಯಾತರಾಗಿರುವ ಅಭಿಜಿತ್ ʼಅಟ್ಲಿʼ ಚಿತ್ರದ ತಮ್ಮ ಪಾತ್ರದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

ʼಅಟ್ಲಿʼ ಚಿತ್ರದಲ್ಲಿ ನನ್ನ ಪಾತ್ರ ತುಂಬಾ ಚೆನ್ನಾಗಿದೆ. ಮೊದಲ ಬಾರಿಗೆ ಮುಸ್ಲಿಂ ವ್ಯಕ್ತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ತೊಂಭತ್ತರ ದಶಕದಲ್ಲಿ ನನ್ನ ಹಾಗೂ ಶೃತಿ ಅವರ ಜೋಡಿಯಲ್ಲಿ ಬಿಡುಗಡೆಯಾಗಿದ್ದ  ಚಿತ್ರಗಳು ಪ್ರೇಕ್ಷಕರ ಮನ ಗೆದ್ದಿದೆ. ಈಗ ಹಲವು ವರ್ಷಗಳ ನಂತರ ನಾನು ಶೃತಿ ಅವರ ಜೊತೆ ಈ ಚಿತ್ರದಲ್ಲಿ ನಟಿಸಿರುವುದು ಸಂತೋಷ ತಂದಿದೆ ಎಂದರು ಹಿರಿಯ ನಟ ಅಭಿಜಿತ್.

ಆರ್ ಜಿ ವಿ ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ರಂಗನಾಥ್ ಆರ್ ನಿರ್ದೇಶನದ “ಅಟ್ಲಿ” ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ದ್ವಿತೀಯ ಹಂತದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ.

ಇತ್ತೀಚಿಗೆ ಖ್ಯಾತ ನಟ – ನಿರ್ದೇಶಕ ರಿಷಬ್ ಶೆಟ್ಟಿ ಈ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡಿದ್ದರು. ಕಾಸರಗೋಡಿನ ಸುತ್ತಮುತ್ತ ʼಅಟ್ಲಿʼ ಕಥೆ ನಡೆಯುತ್ತದೆ.  ನಿರ್ದೇಶಕ ರಂಗನಾಥ್ ಅವರೇ ಕಥೆ, ಚಿತ್ರಕಥೆ ಬರೆದಿದ್ದಾರೆ. ಈ ಹಿಂದೆ ʼಅರಿವುʼ, ʼಪ್ರಭುತ್ವʼ ಚಿತ್ರಗಳನ್ನು ನಿರ್ದೇಶಿಸಿದ್ದ ರಂಗನಾಥ್ ಅವರಿಗೆ ಇದು ಮೂರನೇ ಚಿತ್ರವಾಗಿದೆ.

ಈ ಚಿತ್ರದ ನಾಯಕಿಯಾಗಿ ಪೂಜಾ ಜನಾರ್ದನ್ ನಟಿಸುತ್ತಿದ್ದಾರೆ. ಕೆ.ಜಿ.ಎಫ್ ಅನ್ ಮೋಲ್,  ಶೃತಿ, ಅಭಿಜಿತ್, ಅತುಲ್ ಕುಲಕರ್ಣಿ, ರವಿಕಾಳೆ, ನಾಜರ್, ಸುಪ್ರೀತ್, ಮನು ಮಯೂರ, ಲಲಿತಾ ʼಅಟ್ಲಿʼ ಚಿತ್ರದ ತಾರಾಬಳಗದಲ್ಲಿದ್ದಾರೆ.

ಚಿತ್ರದ ಮೂರು ಹಾಡುಗಳನ್ನು ಯೋಗರಾಜ್ ಭಟ್, ಡಾ.ವಿ.ನಾಗೇಂದ್ರ ಪ್ರಸಾದ್ ಹಾಗೂ ಬಹದ್ದೂರ್ ಚೇತನ್ ಕುಮಾರ್ ಬರೆದಿದ್ದು, ಮಣಿಕಾಂತ್ ಕದ್ರಿ ಸಂಗೀತ ನೀಡುತ್ತಿದ್ದಾರೆ. ಕೆ.ಎಸ್ ಚಂದ್ರಶೇಖರ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ವಿನೋದ್ ಸಾಹಸ ನಿರ್ದೇಶನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರಕ್ಕೆ ವಿನಯ್ ಮೂರ್ತಿ ಸಂಭಾಷಣೆ ಬರೆದಿದ್ದಾರೆ.

ಇದನ್ನೂ ಓದಿ : ಪುನೀತ್ ರಾಜಕುಮಾರ್ ಈ ಪ್ರಶಸ್ತಿಗೆ ಅರ್ಹರಾಗಿರಲಿಲ್ಲವೇ? ಇದು ಕನ್ನಡಿಗರ ಕಣ್ಮಣಿಗೆ ಮಾಡಿದ ಅಪಮಾನವಲ್ಲವೇ?

     

PPeepal Media Desk

Peepal Media Desk

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು