ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವೇದಿಕೆ ಮೇಲೆಯೇ ಹಿರೋಯಿನ್ ತಳ್ಳಿದ ಬಾಲಯ್ಯ: ನೆಟ್ಟಿಗರಿಂದ ಆಕ್ರೋಶ

P

Peepal Media Desk • ಸಿನಿಮಾ

• 1 ನಿಮಿಷದ ಓದು

ವೇದಿಕೆ ಮೇಲೆಯೇ ಹಿರೋಯಿನ್ ತಳ್ಳಿದ ಬಾಲಯ್ಯ: ನೆಟ್ಟಿಗರಿಂದ ಆಕ್ರೋಶ

ಹಿರಿಯ ನಟ ನಂದಮೂರಿ ಬಾಲಕೃಷ್ಣ (ಬಾಲಯ್ಯ) ಅವರು ‘ಗ್ಯಾಂಗ್ ಆಫ್ ಗೋದಾವರಿ’ ಚಿತ್ರದ ಈವೆಂಟ್​ ಸಮಯದಲ್ಲಿ ವೇದಿಕೆಯ ಮೇಲೆಯೇ ಆ ಚಿತ್ರದ ಮುಖ್ಯನಟಿ ಅಂಜಲಿಯವರನ್ನು ಜೋರಾಗಿ ತಳ್ಳಿದ ವಿಡಿಯೋ ಸಾಕಷ್ಟು ವೈರಲ್‌ ಆಗುತ್ತಿದ್ದು, ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಬಾಲಯ್ಯ ನಟನೆಯ ಅಂಜಲಿ ನಟನೆಯ ‘ಗ್ಯಾಂಗ್ ಆಫ್ ಗೋದಾವರಿ’ ಚಿತ್ರದ ಈವೆಂಟ್​ ನಡೆಯುತ್ತಿತ್ತು. ಈ ಕಾರ್ಯಕ್ರಮ ಚಿತ್ರದ ಮತ್ತೋರ್ವ ನಟಿ ನೇಹಾಶೆಟ್ಟಿ ಸಹ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ಸಿನಿಮಾದ ಕಾರ್ಯಕ್ರಮದ ವೇದಿಕೆ ಮೇಲೆ ನಡೆದ ಘಟನೆ ಅನೇಕರನ್ನು ದಂಗಾಗಿಸಿದೆ.

ಹಿರಿಯ ನಟ ಬಾಲಯ್ಯ ಅವರ ಮುಂಗೋಪ ಮತ್ತು ಅವರ ಅಹಂಕಾರದ ಕುರಿತು ಆಗಾಗ ಸುದ್ದಿಗಳು ಕೇಳಿ ಬರುತ್ತಲೇ ಇರುತ್ತವೆ. ಅವರಿಗೆ ಕೋಪ ಜಾಸ್ತಿ. ಅವರು ಸಹ ನಟರ ಮೇಲೆ, ಫ್ಯಾನ್ಸ್ ಮೇಲೆ ರೇಗಾಡಿದ ಸಾಕಷ್ಟು ಉದಾಹರಣೆಗಳಿವೆ. ಈಗ ಅವರು ನಟಿ ಅಂಜಲಿ ಅವರನ್ನು ತಳ್ಳಿದ ವಿಡಿಯೋ ವೈರಲ್ ಆಗಿದೆ. ಆ ವಿಡಿಯೋ ಲಿಂಕ್‌ ಇಲ್ಲಿದೆ.

ಅಂಜಲಿ, ನೇಹಾ ಶೆಟ್ಟಿ ಮೊದಲಾದವರು ವೇದಿಕೆ ಮೇಲೆ ನಿಂತಿದ್ದರು. ಬಾಲಯ್ಯ ಅವರು ಅಂಜಲಿಗೆ ಏನನ್ನೋ ಹೇಳುವ ಪ್ರಯುತ್ನ ಮಾಡಿದ್ದಾರೆ. ಆದರೆ, ಅವರಿಗೆ ಇದು ಕೇಳಿಲ್ಲ. ಇದರಿಂದ ಸಿಟ್ಟಾದ ಬಾಲಯ್ಯ ಅವರು ಅಂಜಲಿಯವರ ಭುಜ ಹಿಡಿದು ತಳ್ಳಿದ್ದಾರೆ. ಅಂಜಲಿ ಇನ್ನೇನು ಬೀಳಲಿದ್ದವರು ಸಾವರಿಸಿಕೊಂಡು ಗಟ್ಟಿಯಾಗಿ ನಿಂತರು. ಅಲ್ಲೇ ಇದ್ದ ನೇಹಾ ಶೆಟ್ಟಿ ಈ ಘಟನೆಯಿಂದ ಶಾಕ್ ಆದರು. ಆದರೆ, ಅಂಜಲಿ ಅವರು ಏನನ್ನೂ ತೋರಿಸಿಕೊಳ್ಳದೆ ಜೋರಾಗಿ ನಗುವ ಮೂಲಕ ಆಗಲಿರುವ ಅನಾಹುತವನ್ನು ಶಾಂತಗೊಳಿಸಿದ್ದಾರೆ. . ಸದ್ಯ ಈ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಅನೇಕರು ಟೀಕೆ ವ್ಯಕ್ತಪಡಿಸಿದ್ದಾರೆ.

‘ಬಾಲಯ್ಯ ಅವರು ಈ ರೀತಿ ಮಾಡಿದ್ದು ಸರಿ ಅಲ್ಲ ಎಂದು ಕೆಲವರು ಹರಿಹಾಯ್ದಿದ್ದರೆ, ಇನ್ನು ಹಲವರು ‘ಬಾಲಯ್ಯ ಅವರು ಈ ರೀತಿ ನಡೆದುಕೊಳ್ಳುತ್ತಿರುವುದು ಹೊಸದಲ್ಲ’ ಎಂದಿದ್ದಾರೆ. ‘ಹಿರಿಯ ನಟನಾಗಿ ಹೇಗೆ ನಡೆದುಕೊಳ್ಳಬೇಕು ಅನ್ನೋದು ಗೊತ್ತಿಲ್ಲ’ ಎಂದು ಅನೇಕರು ಬಾಲಯ್ಯ ಅವರನ್ನು ಬೈದಿದ್ದಾರೆ.

ಬಾಲಯ್ಯ ಅವರು 100ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಹಿರಿಯ ನಟ. ‘ಅಖಂಡ’, ‘ವೀರಸಿಂಹ ರೆಡ್ಡಿ, ‘ಭಗವಾನ್ ಕೇಸರಿ’ ಮೊದಲಾದ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿವೆ. 2023ರಲ್ಲಿ ರಿಲೀಸ್ ಆದ ‘ವೀರಸಿಂಹ ರೆಡ್ಡಿ’ ಅವರ ನಟನೆಯ ಕೊನೆಯ ಸಿನಿಮಾ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 132 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ‘ಅಖಂಡ 2’ ಚಿತ್ರದಲ್ಲಿ ಬಾಲಯ್ಯ ನಟಿಸಲಿದ್ದಾರೆ. ಇತ್ತೀಚೆಗೆ ಬೇರೊಂದು ಸಿನಿಮಾ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ಅವರು, ‘ಹೊಸ ಚಿತ್ರದ ಕೆಲಸ ಆರಂಭ ಆಗಿಲ್ಲ. ಚುನಾವಣಾ ಫಲಿತಾಂಶ ಬಂದ ಬಳಿಕವೇ ಕೆಲಸ ಶುರು ಮಾಡುತ್ತೇನೆ’ ಎಂದಿದ್ದರು.

P

Peepal Media Desk

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version