ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಾಲಿವುಡ್ಡಿಗೆ ಅಯ್ಯೋ ಶ್ರದ್ಧಾ, ಡಾಕ್ಟರ್ ಜೀ ಚಿತ್ರದಲ್ಲಿ ಕನ್ನಡದ ಬೆಡಗಿ

PPeepal Media

Peepal Media ಸಿನಿಮಾ

• 1 ನಿಮಿಷದ ಓದು

ಬಾಲಿವುಡ್ಡಿಗೆ ಅಯ್ಯೋ ಶ್ರದ್ಧಾ, ಡಾಕ್ಟರ್ ಜೀ ಚಿತ್ರದಲ್ಲಿ ಕನ್ನಡದ ಬೆಡಗಿ

ಆರ್ ಜೆ ಆಗಿ ಸಿಕ್ಕಾಪಟ್ಟೆ ಫ್ಯಾನ್ಸ್ ಹೊಂದಿರುವ ಶ್ರದ್ಧಾ, ಅಯ್ಯೋ ಶ್ರದ್ಧಾ ಅಂತಲೇ ಸೋಷಿಯಲ್ ಮೀಡಿಯಾದಲ್ಲಿ ಫೇಮಸ್. ಈಗ ಅವರು ಇನ್ನಷ್ಟು ಫೇಮಸ್ ಆಗುವ ಹಾದಿಲ್ಲಿದ್ದಾರೆ. ಅವರು ಪ್ರಯಾಣ ಬೆಳೆಸಿರುವುದು ಬಾಲಿವುಡ್ ಕಡೆಗೆ.

 ಸೋಷಿಯಲ್ ಮೀಡಿಯಾಗಳಲ್ಲಿ ಎಲ್ಲರನ್ನೂ ನಗೆಗಡಲಿನಲ್ಲಿ ತೇಲಿಸಿ, ತಮ್ಮ ಪಂಚ್ ತುಂಬಿದ ಮಾತುಗಳು ಮತ್ತು ಮತನಾಡುವ ಶೈಲಿಯಿಂದ ಎಲ್ಲರನ್ನೂ ಮೋಡಿ ಮಾಡಿರುವ ಸೋಷಿಯಲ್ ಮೀಡಿಯಾ ಸ್ಟಾರ್, ಆರ್​ ಜೆ ಅಯ್ಯೋ ಶ್ರದ್ಧಾ ಅವರು ಬಾಲಿವುಡ್​​ಗೆ ಎಂಟ್ರಿ ಕೊಟ್ಟಿದ್ದಾರೆ. ಈಗ ಅವರು ಡಾಕ್ಟರ್ ಜಿ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಅಯ್ಯೋ ಶ್ರದ್ಧಾ ಎನ್ನುವ ಹೆಸರು ಸೋಷಿಯಲ್ ಮೀಡಿಯಾಗಳಲ್ಲಿ ಆಕ್ಟಿವ್ ಆಗಿರುವವರಿಗೆ ತುಂಬಾ ಪರಿಚಿತ. ಸೋಷಿಯಲ್ ಮೀಡಿಯಾ ಬಳಸುವವರೆಲ್ಲ ಈ ಹುಡುಗಿಯ ಮಾತಿನ ಮೋಡಿಗೆ ಮರುಳಾಗಿದ್ದಾರೆ. ಈಗಲೇ ತಮ್ಮ ಅಭಿಮಾನಿಗಳಿಗೆ ನೀಡುವ ಮನರಂಜನೆಯನ್ನು ನೆಕ್ಸ್ಟ್ ಲೆವೆಲ್ಲಿಗೆ ಕೊಂಡೊಯ್ಯುತ್ತಿದ್ದಾರೆ ಶ್ರದ್ಧಾ.

ಸೋಶಿಯಲ್ ಮೀಡಿಯಾಗಳಲ್ಲಿ ನಮ್ಮ ದಿನನಿತ್ಯದ ಜೀವನದಲ್ಲಿ ನಡೆಯುವ ಸಣ್ಣ ಸಣ್ಣ ವಿಷಯಗಳನ್ನೇ ಆಯ್ದುಕೊಂಡು ಅದಕ್ಕೇ ತಮ್ಮದೇ ಆದ ಟಚ್ ಕೊಟ್ಟು, ಕಣ್ಣಿಗೆ ಕಟ್ಟುವಂತೆ ಮನಸಿಗೆ ಮುಟ್ಟುವಂತೆ ಶಾರ್ಟ್ ವಿಡಿಯೋಗಳನ್ನು ಮಾಡಿ ಮನರಂಜಿಸೋ ಶ್ರದ್ಧಾ ಅವರ ಈ ಟ್ಯಾಲೆಂಟ್​ಗೆ ಕನ್ನಡಿಗರು ಮಾತ್ರವಲ್ಲ, ದೇಶಾದ್ಯಂತ ಅಭಿಮಾನಿಗಳಿದ್ದಾರೆ.

ಈಗ ಕನ್ನಡದ ಪ್ರತಿಭೆ ಗಡಿ ದಾಟಿ ಬಾಲಿವುಡ್ಡಿಗೆ ಕಾಲಿಟ್ಟಿದೆ. ಈಗ  ಬಾಲಿವುಡ್ ಸಿನಿಮಾದಲ್ಲಿ ನಟಿಸುತ್ತಿರೋದು ಆಯುಷ್ಮಾನ್ ಖುರಾನ ಜೊತೆ ಅನ್ನೋದು ವಿಶೇಷ. ಶ್ರದ್ಧಾ ಅವರು ಈ ಗುಡ್ ನ್ಯೂಸ್ ಅನ್ನು ಇನ್​ಸ್ಟಗ್ರಾಮ್ ಪೋಸ್ಟ್ ಮೂಲಕ ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ತಮ್ಮ ವಿಭಿನ್ನ ಚಿತ್ರಗಳಿಗೆ ಹೆಸರುವಾಸಿ ಆಗಿರುವ ಬಾಲಿವುಡ್ ನಟ  ಆಯುಷ್ಮಾನ್ ಖುರಾನಾ ಮತ್ತು ರಕುಲ್ ಪ್ರೀತ್ ಸಿಂಗ್ ಅವರು ಡಾಕ್ಟರ್ ಜಿ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಹೆಸರೇ ಹೇಳುವಂತೆ ಅವರಿಬ್ಬರಿಗೂ ಇಲ್ಲಿ ಡಾಕ್ಟರ್ ಪಾತ್ರ.

ಈ ಚಿತ್ರದ ಟ್ರೈಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಅನುಭೂತಿ ಕಶ್ಯಪ್ ನಿರ್ದೇಶನದ ಈ ಚಿತ್ರದಲ್ಲಿ ಶೀಬಾ ಚಡ್ಡಾ ಮತ್ತು ಶೆಫಾಲಿ ಶಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಶ್ರದ್ಧಾ ಅವರ ಪಾತ್ರ ಏನಿರುತ್ತದೆ ಅನ್ನೋದರ ಬಗ್ಗೆ ಇನ್ನೂ ಕ್ಲಾರಿಟಿ ಇಲ್ಲ. ಆದರೆ, ಅದರ ಬಗ್ಗೆ ಕುತೂಹಲವಂತೂ ಎಲ್ಲರಿಗೂ ಇದೆ.

PPeepal Media

Peepal Media

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು