ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಾಲಿವುಡ್ ನಟ ಮನೋಜ್ ಕುಮಾರ್ ನಿಧನ

PPeepal Media

Peepal Media ಸಿನಿಮಾ

• 1 ನಿಮಿಷದ ಓದು

ಬಾಲಿವುಡ್ ನಟ ಮನೋಜ್ ಕುಮಾರ್ ನಿಧನ

ಬಾಲಿವುಡ್‌ನ ಹಿರಿಯ ನಟ ನಟ ಮನೋಜ್ ಕುಮಾರ್ (87) ನಿಧನರಾಗಿದ್ದಾರೆ. ಹೃದಯ ಸಂಬಂಧಿ ತೊಂದರೆಗಳಿಂದ ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಅವರು ಕೊನೆಯುಸಿರೆಳೆದರು.

ಮನೋಜ್ ಕುಮಾರ್ ಅವರು ಪೂರಬ್ ಔರ್ ಪಶ್ಚಿಮ್ ಮತ್ತು ಕ್ರಾಂತಿಯಂತಹ ದೇಶಭಕ್ತಿ ಚಿತ್ರಗಳಲ್ಲಿನ ಪಾತ್ರಗಳಿಗೆ ಹೆಸರುವಾಸಿಯಾಗಿದ್ದಾರೆ. ಮನೋಜ್ ಕುಮಾರ್ ನಿಧನದ ಸುದ್ದಿ ಕೇಳಿ ಬಾಲಿವುಡ್ ಶೋಕದಲ್ಲಿ ಮುಳುಗಿದೆ. ಅವರ ನಿಧನಕ್ಕೆ ಚಲನಚಿತ್ರ ಮತ್ತು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಮನೋಜ್ ಕುಮಾರ್ 1937 ರಲ್ಲಿ ಬ್ರಿಟಿಷ್ ಭಾರತದ ವಾಯುವ್ಯ ಗಡಿನಾಡು ಪ್ರಾಂತ್ಯದ (ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ) ಅಬ್ಬೋಟಾಬಾದ್ ಪಟ್ಟಣದಲ್ಲಿ ಜನಿಸಿದರು. ನಿಜವಾದ ಹೆಸರು ಹರಿಕೃಷ್ಣನ್ ಗೋಸ್ವಾಮಿ. ಅವರು 1957 ರಲ್ಲಿ ‘ಫ್ಯಾಷನ್’ ಚಿತ್ರದ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು.

ನಂತರ ಅವರು ಕಾಂಚ್ ಕಿ ಗುಡಿಯಾ (1961) ನಲ್ಲಿ ಸಯೀದಾ ಖಾನ್ ಅವರೊಂದಿಗೆ ನಟಿಸಿದರು ಮತ್ತು ಉತ್ತಮ ಯಶಸ್ಸನ್ನು ಗಳಿಸಿದರು. ಚಲನಚಿತ್ರೋದ್ಯಮಕ್ಕೆ ಅವರು ನೀಡಿದ ಸೇವೆಯನ್ನು ಗುರುತಿಸಿ, ಕೇಂದ್ರ ಸರ್ಕಾರವು 2015 ರಲ್ಲಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಿ ಗೌರವಿಸಿತು.

ಮನೋಜ್ ಕುಮಾರ್ 40 ವರ್ಷಗಳಿಗೂ ಹೆಚ್ಚು ಕಾಲ ಚಲನಚಿತ್ರೋದ್ಯಮಕ್ಕೆ ಸೇವೆ ಸಲ್ಲಿಸಿದ್ದಾರೆ. ಅವರು ಬಾಲಿವುಡ್‌ನ ಎಲ್ಲಾ ಟಾಪ್ ಹೀರೋಗಳೊಂದಿಗೆ ಚಲನಚಿತ್ರಗಳನ್ನು ಮಾಡಿದ್ದಾರೆ. ಹಲವು ಸಿನಿಮಾಗಳು ಬ್ಲಾಕ್‌ಬಸ್ಟರ್ ಆಗಿವೆ. ಅವರಿಗೆ 1982 ರಲ್ಲಿ ಪದ್ಮಶ್ರೀ ಮತ್ತು 2016 ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿದೆ.

PPeepal Media

Peepal Media

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು