ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

“ಐ ಆಮ್ ಕಮಿಂಗ್” ; 131 ನೇ ಸಿನೆಮಾ ಟೀಸರ್ ಮೂಲಕ ಸೆಂಸೇಷನ್ ಸೃಷ್ಟಿಸಿದ ಸೆಂಚುರಿ ಸ್ಟಾರ್ ಶಿವಣ್ಣ

PPeepal Media Desk

Peepal Media Desk • ಸಿನಿಮಾ

• 1 ನಿಮಿಷದ ಓದು

“ಐ ಆಮ್ ಕಮಿಂಗ್” ; 131 ನೇ ಸಿನೆಮಾ ಟೀಸರ್ ಮೂಲಕ ಸೆಂಸೇಷನ್ ಸೃಷ್ಟಿಸಿದ ಸೆಂಚುರಿ ಸ್ಟಾರ್ ಶಿವಣ್ಣ

ಐ ಆಮ್ ಕಮಿಂಗ್ ಎಂದ ‘ಕರುನಾಡ ಕಿಂಗ್’…ಶಿವಣ್ಣನ ಜನ್ಮದಿನಕ್ಕೆ 131ನೇ ಸಿನಿಮಾದ ಮೊದಲ ಝಲಕ್ ರಿಲೀಸ್

ಲಾಂಗ್ ನ ಲಾಂಗೆಸ್ಟ್ ಟೈಮ್ ಹಿಡಿದವರು…ಶಿವ ಸಂಭ್ರಮಕ್ಕೆ 131ನೇ ಸಿನಿಮಾ ತಂಡದಿಂದ ವಿಶೇಷ ಉಡುಗೊರೆ

ಚಿಂದಿಯಾಗಿದೆ ಶಿವಣ್ಣನ ಇಂಟ್ರೂಡಕ್ಷನ್ ಟೀಸರ್..ಐ ಆಮ್ ಕಮಿಂಗ್ ಎಂದ ಕರುನಾಡ ಕಿಂಗ್..131 ಚಿತ್ರತಂಡ ಸ್ಪೆಷಲ್ ಗಿಫ್ಟ್

ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಶಿವಣ್ಣನ ಜನ್ಮದಿನದ ವಿಶೇಷವಾಗಿ ರಾಶಿ ರಾಶಿ ಉಡುಗೊರೆಗಳು ಶಿವಸೈನ್ಯಕ್ಕೆ ಸಿಕ್ಕಿದೆ. ಆ ಸ್ಪೆಷಲ್ ಗಿಫ್ಟ್ ಗಳಲ್ಲಿ ತುಂಬಾನೇ ಸ್ಪೆಷಲ್ ಎನಿಸಿಕೊಂಡಿರುವುದು ಶಿವಣ್ಣನ 131ನೇ ಚಿತ್ರದ ಝಲಕ್… ಯಾಕೆ ವಿಶೇಷ ಅಂದರೆ ಈ ಹಿಂದೆ ಕನ್ನಡ ಚಿತ್ರರಂಗಕ್ಕೆ ರಾಮ್ ಗೋಪಾಲ್ ವರ್ಮಾ ಕರೆ ತಂದು ಶಿವಣ್ಣನಿಗೆ ಕಿಲ್ಲಿಂಗ್ ವೀರಪ್ಪನ್ ಸಿನಿಮಾ ಮಾಡಿಸಿದ್ದ ಸುಧೀರ್ ಮತ್ತೊಮ್ಮೆ ಕರುನಾಡ ಕಿಂಗ್ ಗೆ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಜೊತೆಗೆ ತಮಿಳಿನ ಯುವ ನಿರ್ದೇಶಕ ಕಾರ್ತಿಕ್ ಅದ್ವೈತ್ ದೊಡ್ಮನೆ ದೊರೆಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದ ಮೊದಲ ಝಲಕ್ ಶಿವಣ್ಣನ ಹುಟ್ಟುಹಬ್ಬಕ್ಕೆ ಅನಾವರಣಗೊಂಡಿದೆ.

ಶಿವಣ್ಣನ ಜನ್ಮದಿನದ ಅಂಗವಾಗಿ 131ನೇ ಚಿತ್ರದ ಮೊದಲ ತುಣುಕು ಬಿಡುಗಡೆ ಮಾಡಲಾಗಿದೆ. 3 ನಿಮಿಷ 49 ಸೆಕೆಂಡ್ ಇರುವ ವಿಡಿಯೋ ತುಣುಕಿನಲ್ಲಿ ಪೊಲೀಸ್ ಸ್ಟೇಷನ್ ನಲ್ಲಿ ರಗಡ್ ಡೈಲಾಗ್ ಮೂಲಕ ಹೀರೋ ಇಂಟ್ರೂಡ್ಯೂಸ್ ಮಾಡಲಾಗುತ್ತದೆ. ಶಿವಣ್ಣನನ್ನು ಅಚ್ಯುತ್ ಕುಮಾರ್ ವರ್ಣನೆ ಮಾಡುವ ರೀತಿ ಅದ್ಭುತವಾಗಿದೆ. ಆದ್ರೆ ಶಿವಣ್ಣ ವಿಡಿಯೋದಲ್ಲಿ ಕಾಣಿಸಿಕೊಳ್ಳಲ್ಲ. ಐ ಆಮ್ ಕಮಿಂಗ್ ಎನ್ನುವ ಕರುನಾಡ ಕಿಂಗ್ ನ ಫೋಟೋ ಬಿಟ್ಟು ಚಿತ್ರತಂಡ ಥ್ರಿಲ್ ಹೆಚ್ಚಿಸಿದೆ. ಚಂಡಮಾರುತ ಮೊದಲ ಮೌನ ಎಂಬ ಅಡಿಬರಹದೊಂದಿಗೆ ಶಿವಣ್ಣನ 131ನೇ ಚಿತ್ರದ ವಿಡಿಯೋ ಝಲಕ್ ಬಿಡುಗಡೆ ಮಾಡಲಾಗಿದ್ದು, ಅಚ್ಯುತ್ ಕುಮಾರ್, ರವೀಂದ್ರ ವಿಜಯ್ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ.

ತಮಿಳಿನಲ್ಲಿ ವಿಕ್ರಂ ಪ್ರಭು ಅಭಿನಯದ ಪಾಯುಮ್ ಒಲಿ ನೀ ಎನಕ್ಕು ಚಿತ್ರವನ್ನು ನಿರ್ದೇಶಿಸಿದ್ದ ಕಾರ್ತಿಕ್ ಅದ್ವೈತ್, ಈ ಚಿತ್ರದ ಮೂಲಕ ಸ್ಯಾಂಡಲ್ವುಡ್ ಅಂಗಳಕ್ಕೆ ಎಂಟ್ರಿ ಕೊಡುತ್ತಿದ್ದಾರೆ, ಅಂದಹಾಗೇ ಇವರಿಗೆ ಇದು ನಿರ್ದೇಶಕನಾಗಿ ಎರಡನೇ ಸಿನಿಮಾ. ಇದೊಂದು ಆ್ಯಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಶಿವಣ್ಣ ಡಿಫ್ರೆಂಟ್ ಲುಕ್ನಲ್ಲಿ, ವಿಭಿನ್ನ ಪಾತ್ರದಲ್ಲಿ ಕಾಣಸಿಕೊಳ್ಳಲಿದ್ದಾರೆ. ಆಗಸ್ಟ್ ತಿಂಗಳಲ್ಲಿ ಮುಹೂರ್ತ ನಡೆಯಲಿದೆ. ಇತರ ಕಲಾವಿದರ ಆಯ್ಕೆ ಪ್ರಕ್ರಿಯೆ ಮುಗಿದಿದ್ದು, ಚಿತ್ರೀಕರಣಕ್ಕೆ ತೆರಳು ಎದುರು ನೋಡುತ್ತಿದೆ ಚಿತ್ರತಂಡ. ಸ್ಯಾಮ್ ಸಿ.ಎಸ್ ಸಂಗೀತ ಒದಗಿಸಲಿದ್ದಾರೆ. ಎ.ಜೆ ಶೆಟ್ಟಿ ಛಾಯಾಗ್ರಹಣ ನಿರ್ವಹಿಸಲಿದ್ದಾರೆ. ದೀಪು ಎಸ್ ಕುಮಾರ್ ಅವರ ಸಂಕಲನ ಹಾಗೂ ರವಿ ಸಂತೆಹಕ್ಲು ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿರಲಿದೆ. ಭುವನೇಶ್ವರಿ ಪ್ರೊಡಕ್ಷನ್ ನಡಿ ಎಸ್ ಎನ್ ರೆಡ್ಡಿ ಹಾಗೂ ಸುಧೀರ್ ಪಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

PPeepal Media Desk

Peepal Media Desk

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು