ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಡಾಲಿ ಧನಂಜಯ ಹೊಸ ಸಿನಿಮಾ ಹೆಸರು: ಕೋಟಿ

PPeepal Media Desk

Peepal Media Desk ಸಿನಿಮಾ

• 1 ನಿಮಿಷದ ಓದು

ಡಾಲಿ ಧನಂಜಯ ಹೊಸ ಸಿನಿಮಾ ಹೆಸರು: ಕೋಟಿ

ಕನ್ನಡದ ಪ್ರತಿಭಾವಂತ ನಟರಲ್ಲಿ ಒಬ್ಬರಾದ ಡಾಲಿ ಧನಂಜಯ ಅವರ ಹೊಸ ಕನ್ನಡ ಸಿನಿಮಾ ಯಾವುದು ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಕನ್ನಡ ಕಿರುತೆರೆಯಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಪರಮ್‌ ನಿರ್ದೇಶನದ ಈ ಸಿನಿಮಾ ಹೆಸರು ಕೋಟಿ. ಕಿರುತೆರೆಯಲ್ಲಿ ಹತ್ತು ಹಲವು ಪ್ರಯೋಗಗಳ ಮೂಲಕ ಗಮನ ಸೆಳೆದಿದ್ದವರು ಪರಮ್.‌ ಕಲರ್ಸ್‌ ಕನ್ನಡ ವಾಹಿನಿಯನ್ನು ಅವರು ಮುನ್ನಡೆಸುತ್ತಿದ್ದಾಗ ಅತಿ ಹೆಚ್ಚು ಕನ್ನಡ ಮೂಲದ ಕತೆಗಳನ್ನು ಅವರು ಕೊಟ್ಟಿದ್ದು ನಿಮಗೆಲ್ಲಾ ಗೊತ್ತೇ ಇದೆ. ಈಗ ಅಪ್ಪಟ ಕನ್ನಡದ ಕತೆಯೊಂದಿಗೆ ಅವರು ಮೊದಲ ಬಾರಿ ಸಿನಿಮಾ ಒಂದನ್ನು ನಿರ್ದೇಶಿಸುತ್ತಿದ್ದಾರೆ.
ಯುಗಾದಿ ಹಬ್ಬಕ್ಕೆ ಪೋಸ್ಟರ್
ಯುಗಾದಿ ಹಬ್ಬದ ದಿನವಾದ ಇಂದು ಕೋಟಿ ಚಿತ್ರದ ಟೈಟಲ್‌ ಬಿಡುಗಡೆಯಾಗಿದೆ. ಐದುನೂರು ರೂಪಾಯಿ ನೋಟುಗಳನ್ನು ಮಡಿಚಿ ಮಾಡಿರುವಂತೆ ಕಾಣಿಸುವ ಕೋಟಿ ಟೈಟಲ್‌ನಲ್ಲಿ ಕೇವಲ ಧನಂಜಯ್‌ ಅವರ ಕಣ್ಣುಗಳನ್ನು ಮಾತ್ರ ಬಳಸಿಕೊಂಡಿರುವುದು ವಿಶೇಷ. ತೀಕ್ಷ್ಣ ಕಣ್ಣುಗಳಿಂದ ಈ ಪೋಸ್ಟರ್‌ ಗಮನ ಸೆಳೆಯುತ್ತಿರುವುದಂತೂ ಹೌದು.‌
ಕೋಟಿ ಕನಸು ಕಾಣುವ ಒಬ್ಬ ಕಾಮನ್‌ ಮ್ಯಾನ್‌ ಕತೆ ಇದು ಎನ್ನುವುದನ್ನು ಶೀರ್ಷಿಕೆ ಹೇಳುವಂತಿದೆ. ದುಡ್ಡಿಗಾಗಿ ಒದ್ದಾಡುವ ಒಬ್ಬ ಸಾಮಾನ್ಯ ಮನುಷ್ಯನ ಭಾವನೆಗಳನ್ನು ಈ ಸಿನಿಮಾ ಹೇಳಬಹುದು ಎಂಬ ಸೂಚನೆಯನ್ನು ಧನಂಜಯ ಆಗಲೇ ಕೊಟ್ಟಿದ್ದಾರೆ. ಹೊಯ್ಸಳ ನಂತರ ಬರುತ್ತಿರುವ ಅವರ ಮೊದಲ ಕನ್ನಡ ಚಿತ್ರ ಇದು. ಅಲ್ಲಿಗೆ ಡಾಲಿ ಧನಂಜಯ ಅವರ ಚಿತ್ರ ವರ್ಷದ ಅಂತರದ ನಂತರ ಬಿಡುಗಡೆ ಆಗುತ್ತಿದೆ. ನಟ ರಾಕ್ಷಸ ಎಂದು ಬಿರುದು ಪಡೆದಿರುವ ಡಾಲಿ ಅವರ ವೃತ್ತಿ ಜೀವನದಲ್ಲಿ ಇದೊಂದು ಮೈಲುಗಲ್ಲು ಆಗಬಹುದಾದ ಸಿನಿಮಾ ಎಂಬ ಅಭಿಪ್ರಾಯ ಈಗಾಗಲೇ ಬಂದಿರುವುದು ಸಿನಿಮಾದ ಕುರಿತು ನಿರೀಕ್ಷೆಯನ್ನು ಹೆಚ್ಚು ಮಾಡಿದೆ.
ಸಮರ್ಥ ಚಿತ್ರತಂಡ
ಈ ಸಿನಿಮಾಗೆ ಕತೆ, ಚಿತ್ರಕತೆ ಮತ್ತು ಸಂಭಾಷಣೆಯನ್ನು ಬರೆದು ಸ್ವತಃ ಪರಮ್‌ ನಿರ್ದೇಶನದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ಇದರೊಂದಿಗೆ ಸಿನಮಾ ಮಾಡಬೇಕು ಎಂಬ ಅವರ ಬಹುದಿನಗಳ ಕನಸು ನೆರವೇರಿದಂತಾಗಿದೆ. ಕಳೆದ ವರ್ಷ ಟೆಲಿವಿಷನ್‌ ಚಾನೆಲ್ಲಿನಿಂದ ಹೊರಗೆ ಬಂದಾಗ ತಾನು ಹಿರಿತೆರೆಯಲ್ಲಿ ಕತೆಗಳನ್ನು ಹೇಳಬೇಕು ಎಂದು ಅವರು ಆಸೆ ಪಟ್ಟಿದ್ದನ್ನು ಇಲ್ಲಿ ನೆನಪು ಮಾಡಿಕೊಳ್ಳಬಹುದು.
ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವುದು ಜಿಯೋ ಸ್ಟುಡಿಯೋಸ್‌ ನ ಜ್ಯೋತಿ ದೇಶಪಾಂಡೆ. ಈ ವರ್ಷ ಒಂದಾದ ಮೇಲೆ ಒಂದು ಹಿಟ್‌ ಹಿಂದಿ ಸಿನಿಮಾಗಳನ್ನು ಕೊಟ್ಟಿರುವ ಜ್ಯೋತಿ ಮತ್ತು ಜಿಯೋ ಸ್ಟುಡಿಯೋಸ್ ಈ ಮೂಲಕ ಕನ್ನಡಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ವಾಸುಕಿ ವೈಭವ್‌ ಹಾಡುಗಳನ್ನು ಸಂಯೋಜನೆ ಮಾಡಿದ್ದರೆ ನೊಬಿನ್‌ ಪೌಲ್‌ ಹಿನ್ನೆಲೆ ಸಂಗೀತ ಕೊಟ್ಟಿದ್ದಾರೆ. ಈ ಸಿನಿಮಾಗೆ ಅರುಣ್‌ ಬ್ರಹ್ಮನ್‌ ಛಾಯಾಗ್ರಹಣವಿದೆ.
ಸಿನಿಮಾ ಶೀರ್ಷಿಕೆ ಅನಾವರಣ ಮಾಡುತ್ತಲೇ ಇದೇ ಶನಿವಾರ ಟೀಸರ್‌ ಬಿಡುಗಡೆಯಾಗಲಿದೆ ಎಂದು ತಂಡ ಹೇಳಿದೆ.‌

PPeepal Media Desk

Peepal Media Desk

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು