ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

‘ಧರಣಿ ಮಂಡಲ ಮಧ್ಯದೊಳಗೆ’ ಟ್ರೇಲರ್ ರಿಲೀಸ್ : ಡಿಸೆಂಬರ್‌ 2 ಕ್ಕೆ ಸಿನಿಮಾ

PPeepal Media Desk

Peepal Media Desk ಸಿನಿಮಾ

• 2 ನಿಮಿಷದ ಓದು

‘ಧರಣಿ ಮಂಡಲ ಮಧ್ಯದೊಳಗೆ’ ಟ್ರೇಲರ್ ರಿಲೀಸ್ : ಡಿಸೆಂಬರ್‌ 2 ಕ್ಕೆ ಸಿನಿಮಾ

ಬೆಂಗಳೂರು: ಟೀಸರ್, ಹಾಡುಗಳ ಮೂಲಕ ಪ್ರೇಕ್ಷಕರ ಮನದಲ್ಲಿ ಭರವಸೆಯ ಮುದ್ರೆ ಒತ್ತಿರುವ ‘ಧರಣಿ ಮಂಡಲ ಮಧ್ಯದೊಳಗೆ’ ಸಿನಿಮಾ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರದ ಟ್ರೇಲರ್ ರನ್ನು ಡಿಜಿಟಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ವೇದಿಕೆಯಲ್ಲಿ ನಾಯಕ ನಟ ವಸಿಷ್ಠ ಸಿಂಹ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ. ಡಿಸೆಂಬರ್ 2ರಂದು ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಟ್ರೇಲರ್ ಹೊತ್ತು ಬಂದ ಸಿನಿಮಾ ತಂಡ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

ಕ್ಯೂರಿಯಾಸಿಟಿ ಹೊತ್ತ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ಟ್ರೇಲರ್ ಪ್ರಾಮಿಸಿಂಗ್ ಆಗಿದ್ದು ಭರವಸೆ ಮೂಡಿಸಿದೆ. ಗುಲ್ಟು ಖ್ಯಾತಿಯ ನಟ ನವೀನ್ ಶಂಕರ್, ಐಶಾನಿ ಶೆಟ್ಟಿ ನಟಿಸಿರುವ ಈ ಚಿತ್ರವನ್ನು ಶ್ರೀಧರ್ ಶಿಕಾರಿಪುರ ನಿರ್ದೇಶನ ಮಾಡಿದ್ದಾರೆ.

ಟ್ರೇಲರ್ ಬಿಡುಗಡೆ ಸಮಯದಲ್ಲಿ ಮಾತನಾಡಿದ ನಟ ವಸಿಷ್ಠ ಸಿಂಹ, ʼಚಿತ್ರದಲ್ಲಿ ಪ್ರತಿಯೊಂದು ಅಂಶಗಳು ಕೂಡ ಗಮನ ಸೆಳೆಯುತ್ತಿದೆ. ಯಂಗ್ ಟೀಂ ಸೇರಿಕೊಂಡು ಇಷ್ಟು ಒಳ್ಳೆಯ ಸಿನಿಮಾವನ್ನು ಕಟ್ಟಿಕೊಟ್ಟಿದೆ ಅಂದ್ರೆ ತುಂಬಾ ಖುಷಿಯ ವಿಚಾರ. ಟ್ರೇಲರ್ ಬಹಳಾನೇ ಖುಷಿ ಕೊಟ್ಟಿದೆ. ಮ್ಯೂಸಿಕ್, ಡೈಲಾಗ್, ಕ್ಯಾಮೆರಾ ವರ್ಕ್ ತುಂಬಾನೇ ಚೆನ್ನಾಗಿ ಮೂಡಿ ಬಂದಿದೆ. ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಚಿತ್ರದ ನಿರ್ದೇಶಕ ಶ್ರೀಧರ್ ಶಿಕಾರಿಪುರ ಮಾತನಾಡಿ, ʼಇದು ನನ್ನ ನಿರ್ದೇಶನದ ಮೊದಲ ಸಿನಿಮಾ ಆಗಿದೆ. ನಮ್ಮ ಸುತ್ತಮುತ್ತ ಇರುವವರ ಕಥೆಯೇ ಧರಣಿ ಮಂಡಲ ಮಧ್ಯದೊಳಗೆ ಸಿನಿಮಾ. ಹೈಪರ್ ಲಿಂಕ್ ಶೈಲಿಯ ಕ್ರೈಂ ಡ್ರಾಮಾ ಕಥಾಹಂದರದ ಸಿನಿಮಾವಿದು. ಬಾಕ್ಸಿಂಗ್ ನಲ್ಲಿ ಅಪಾರ ಆಸಕ್ತಿ ಇರುವ ಹುಡುಗನ ಬದುಕಿನಲ್ಲಿ ನಡೆಯುವ ಘಟನೆಗಳ ಸುತ್ತ ಹೆಣೆಯಲಾದ ಕಥೆ ಈ ಚಿತ್ರದಲ್ಲಿದೆ. ಪ್ರೀತಿ, ಸೆಂಟಿಮೆಂಟ್ ಎಳೆಯನ್ನೂ ಹೊತ್ತ ಈ ಚಿತ್ರ ಖಂಡಿತ ಪ್ರೇಕ್ಷಕರಿಗೆ ಮನರಂಜನೆ ನೀಡಲಿದೆ ಎಂದು ತಿಳಿಸಿದರು.

ʼಗುಳ್ಟುʼ ನಂತರ ಕೇಳಿದ ಇಂಟ್ರಸ್ಟಿಂಗ್ ಸಬ್ಜೆಕ್ಟ್ ಇರುವ ಕಥೆ ಇದಾಗಿದೆ. ಚಿತ್ರದಲ್ಲಿ ಆದಿ ಪಾತ್ರವನ್ನು ನಿರ್ವಹಿಸಿದ್ದೇನೆ. ಬಾಕ್ಸಿಂಗ್ ನಲ್ಲಿ ಸಾಧನೆ ಮಾಡಬೇಕು ಎಂದುಕೊಂಡಿರುವ ಹುಡುಗನ ಪಾತ್ರ. ಗುಳ್ಟು ಸಿನಿಮಾಗಿಂತ ಡಿಫ್ರೆಂಟ್ ಆದ ಪಾತ್ರವನ್ನು ಇಲ್ಲಿ ನಿರ್ವಹಿಸಿದ್ದೇನೆ. ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಡಿಸೆಂಬರ್ 2ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದು ನಾಯಕ ನಟ ನವೀನ್ ಶಂಕರ್ ತಿಳಿಸಿದ್ರು.

ʼನಿರ್ದೇಶಕರು ಕ್ರೈಂ ಡ್ರಾಮಾ ಸಿನಿಮಾ ಎಂದಾಗ ನಾನು ಸ್ವಲ್ಪ ಯೋಚನೆ ಮಾಡಿದ್ದೆ, ಆದ್ರೆ ಕಥೆ ಕೇಳಿ ತುಂಬಾ ಖುಷಿ ಆಯ್ತು. ಇಲ್ಲಿವರೆಗೂ ನಾನು ಮಾಡಿರುವ ಪಾತ್ರಕ್ಕಿಂತ ಕಂಪ್ಲೀಟ್ ಡಿಫ್ರೆಂಟ್ ಆಗಿರುವ ಪಾತ್ರ ನಿರ್ವಹಿಸಿದ್ದೇನೆ. ಶ್ರೇಯ ಎನ್ನುವ ಪಾತ್ರವನ್ನು ನಿರ್ವಹಿಸಿದ್ದೇನೆ. ಡೋಂಟ್ ಕೇರ್ ಆಟಿಟ್ಯೂಡ್ ಇರುವ ಬೋಲ್ಡ್ ಹುಡುಗಿ ಪಾತ್ರ. ಈ ಚಿತ್ರದ ಭಾಗವಾಗಿರೋದಕ್ಕೆ ತುಂಬಾ ಖುಷಿ ಇದೆ. ಚಿತ್ರ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಎಲ್ಲರೂ ಈ ಚಿತ್ರಕ್ಕೆ ಸಪೋರ್ಟ್ ಮಾಡಿʼ ಎಂದು ನಾಯಕ ನಟಿ ಐಶಾನಿ ಶೆಟ್ಟಿ ತಮ್ಮ ಪಾತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ನಿರ್ಮಾಪಕ ಓಂಕಾರ್ ಮಾತನಾಡಿ ಸಿನಿಮಾ ನಿರ್ಮಾಣದ ಜೊತೆಗೆ ಡಿಸ್ಕೊ ಎಂಬ ನಟೋರಿಯಸ್ ಗ್ಯಾಂಗ್ ಸ್ಟಾರ್ ಪಾತ್ರ ಮಾಡಿದ್ದೇನೆ. ಸಿನಿಮಾದ ಸ್ಕ್ರೀನ್ ಪ್ಲೇ ತುಂಬಾ ಡಿಫ್ರೆಂಟ್ ಆಗಿದೆ. ಕನ್ನಡದಲ್ಲಿ ಇದು ಮೊದಲ ಪ್ರಯತ್ನ ಆದ್ದರಿಂದ ಸಿನಿಮಾ ನಿರ್ಮಾಣ ಮಾಡಲು ಒಪ್ಪಿಕೊಂಡೆ. ಚಿತ್ರದ ಪ್ರತಿ ವಿಭಾಗದಲ್ಲೂ ಎಲ್ಲರೂ ಪರಿಶ್ರಮ ವಹಿಸಿ ಕೆಲಸ ಮಾಡಿದ್ದಾರೆ. ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ ಎಲ್ಲರೂ ನೋಡಿ ಸಪೋರ್ಟ್ ಮಾಡಿ ಎಂದು ಹೇಳಿದರು.

ಚಿತ್ರದಲ್ಲಿ ಯಶ್ ಶೆಟ್ಟಿ, ಸಿದ್ದು ಮೂಲಿಮನಿ, ಪ್ರಕಾಶ್ ತುಮ್ಮಿನಾಡು, ಓಂಕಾರ್, ನಿತೇಶ್ ಮಹಾನ್, ಜಯಶ್ರೀ ಆರಾಧ್ಯ, ಶಾಂಭವಿ ಒಳಗೊಂಡ ತಾರಾಗಣವಿದೆ. ಬಾಕ್ಸ್ ಆಫೀಸ್ ಸಿನಿ ಕ್ರಿಯೇಷನ್ಸ್ ಬ್ಯಾನರ್ ನಡಿ ಒಂಕಾರ್ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ವೀರೇಂದ್ರ ಕಂಚನ್, ಗೌತಮಿ ರೆಡ್ಡಿ ಸಹ ನಿರ್ಮಾಣವಿದೆ. ಕೀರ್ತನ್ ಪೂಜಾರಿ ಕ್ಯಾಮೆರಾ ವರ್ಕ್, ರೋಣದ ಬಕ್ಕೇಶ್, ಕಾರ್ತಿಕ್ ಚೆನ್ನೋಜಿರಾವ್ ಸಂಗೀತ ನಿರ್ದೇಶನ, ಉಜ್ವಲ್ ಚಂದ್ರ ಸಂಕಲನ ಚಿತ್ರಕ್ಕಿದೆ. ಪ್ರೇಕ್ಷಕರ ಮನಗೆಲ್ಲಲು ಇದೇ ಡಿಸೆಂಬರ್ 2ರಂದು ಸಿನಿಮಾ ಚಿತ್ರಮಂದಿರಕ್ಕೆ  ಎಂಟ್ರಿ ಕೊಡುತ್ತಿದೆ.

PPeepal Media Desk

Peepal Media Desk

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು