ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕನ್ನಡದ ಈ ಧಾರಾವಾಹಿ ಬರೆದ ದಾಖಲೆ ಗೊತ್ತಾ?

MMurali Maluru

Murali Maluru • ಸಿನಿಮಾ

• 2 ನಿಮಿಷದ ಓದು

ಕನ್ನಡದ ಈ ಧಾರಾವಾಹಿ ಬರೆದ ದಾಖಲೆ ಗೊತ್ತಾ?

Zeeಕನ್ನಡದ ಜನಪ್ರಿಯ ಧಾರಾವಾಹಿ ಪುಟ್ಟಕ್ಕನ ಮಕ್ಕಳು ಯಶಸ್ವಿಯಾಗಿ ಸಾವಿರ ಸಂಚಿಕೆ ಪೂರೈಸಿದ್ದು, ಆರಂಭದಿಂದ ಇಲ್ಲಿವರೆಗೂ ಪ್ರೇಕ್ಷಕರ ಪ್ರೀತಿ ಪಡೆದುಕೊ‌ಂಡಿದೆ. ಗಂಡನಿಂದ ವಂಚಿಳಾದ ಹೆಣ್ಣು ಕುಗ್ಗದೇ ಜೀವನ ಕಟ್ಟಿಕೊಂಡ ಕಥೆ. ಛಲವೊಂದಿದ್ದರೆ ಸಾಕು ಸಾಧಿಸಿ ತೋರಿಸಬಹುದು ಎಂಬುಸನ್ನು ಸಾಬೀತುಪಡಿಸಿದ‌ ಕಥೆಯೇ ಪುಟ್ಟಕ್ಕನ ಮಕ್ಕಳು.

ಜೆ.ಎಸ್ ಪ್ರೊಡಕ್ಷನ್ಸ್ ನಿರ್ಮಾಣ ಮಾಡಿ, ಜೀ ಕನ್ನಡದಲ್ಲಿ 13ನೇ ಡಿಸೆಂಬರ್ 2021 ರಿಂದ ಪ್ರಸಾರವಾದ ಧಾರಾವಾಹಿ ಪುಟ್ಟಕ್ಕನ ಮಕ್ಕಳು. ಹೆಣ್ಣು ಮಕ್ಕಳ ಹೆತ್ತೋಳೂ ಎಲ್ಲ ದೇವರಿಗೂ ದೊಡ್ಡೋಳು ಎಂಬ ಶೀರ್ಷಿಕೆ ಗೀತೆಯಿಂದಲೇ ಎಲ್ಲರ ಮನಸೆಳೆದು, ಮೊದಲ ವಾರದ ರೇಟಿಂಗ್ ನಲ್ಲಿ 13.5 ಟಿ ವಿ ಆರ್ ಗಳಿಸಿ ಇಡೀ ಭಾರತದಲ್ಲೇ ಅತಿ ಹೆಚ್ಚು ಓಪನಿಂಗ್ ಪಡೆದ ಧಾರಾವಾಹಿ ಎಂಬ ದಾಖಲೆ ಸೃಷ್ಠಿಸಿತು. ಆರೂರು ಜಗದೀಶ್ ರವರ ಸಾರಥ್ಯದಲ್ಲಿ ಚಿತ್ರೀಕರಣಗೊಂಡ ಮೊದಲ ಕಂತುಗಳು ‘ಸಣ್ಣ ಪರದೆಯ ದೊಡ್ಡ ಸಿನಿಮಾ’ ಎಂಬ ಮನ್ನಣೆ ಗಳಿಸಿದವು.

ನಿರ್ಮಾಪಕಿ ಸ್ಮಿತಾ ಜೆ ಶೆಟ್ಟಿಯವರ, ಜೆ ಎಸ್ ಪ್ರೊಡಕ್ಷನ್ಸ್ ಸಂಸ್ಥೆಯು ‘ಶುಭ ವಿವಾಹ, ಜೋಡಿ ಹಕ್ಕಿ, ಜೊತೆ ಜೊತೆಯಲಿ’ ಯಂತಹ ಯಶಸ್ವಿ ಧಾರಾವಾಹಿಗಳನ್ನು ನೀಡಿದ್ದು, ಸಾವಿರ ಸಂಚಿಕೆಗಳನ್ನು ಪೂರೈಸಿರುವ ‘ಪುಟ್ಟಕ್ಕನ ಮಕ್ಕಳು’ ಈ ಸಂಸ್ಥೆಯ ಮೈಲುಗಲ್ಲಾಗಿದೆ.

ಉಮಾಶ್ರೀ, ಮಂಜು ಭಾಷಿಣಿ, ರಮೇಶ್ ಪಂಡಿತ್, ಸಾರಿಕಾ, ಗುರು ಹೆಗ್ಡೆ ನಂತಹ ಹಿರಿಯ ಕಲಾವಿದರ ಜೊತೆಗೆ, ಧನುಷ್, ಅಕ್ಷರ, ವಿದ್ಯಾ, ಶಿಲ್ಪ, ಅನಿರೀಶ್, ಮುಂತಾದ ಉದಯೋನ್ಮುಖ ಕಲಾವಿದರ ತಾರಾಗಣ ಹೊಂದಿರುವ ಪುಟ್ಟಕ್ಕನ ಮಕ್ಕಳು, ರಾಜ್ಯದ ಪ್ರತಿ ಮನೆಯ, ಪ್ರತಿದಿನದ ಅವಿಭಾಜ್ಯ ಅಂಗವಾಗಿದೆ. ಈ ಸಾಧನೆಯಲ್ಲಿ ತೆರೆಯ ಹಿಂದಿನ ತಾಂತ್ರಿಕ ವರ್ಗದ ಶ್ರಮವೂ ಸಾಕಷ್ಟಿದೆ.

ಬರಹಗಾರರಾದ ಸತ್ಯಕಿಯವರ ಚಿತ್ರಕಥೆ ಮತ್ತು ಸಂಭಾಷಣೆ ಈ ಧಾರಾವಾಹಿಯ ಜೀವಾಳ. ಪ್ರಧಾನ ನಿರ್ದೇಶಕರಾದ ಆರೂರು ಜಗದೀಶ್, ಸಂಚಿಕೆ ನಿರ್ದೇಶಕರಾದ ಮಹೇಶ್ ಸಾರಂಗ್, ಸಹ ನಿರ್ದೇಶಕರಾದ ಮುರಳಿ, ಸಂಕಲನರಾದ ಜಯಚಂದ್ರ, ಹಾಗು ಪ್ರೊಡಕ್ಷನ್ ಮ್ಯಾನೇಜರಿಂದ ಹಿಡಿದು, ಸೆಟ್ ಹುಡುಗರು, ಕ್ಯಾಮೆರಾ ಮತ್ತು ಲೈಟ್ ವಿಭಾಗ, ಮೇಕಪ್, ಊಟೋಪಚಾರ, ಆಫೀಸಿನ ಅಕೌಂಟ್ ಸೆಕ್ಷನ್ ಹೀಗೆ ಎಲ್ಲರ ಶ್ರಮವೂ ಈ ಧಾರಾವಾಹಿಯ ಯಶಸ್ಸಿಗೆ ಕಾರಣವಾಗಿದೆ.

ಧಾರಾವಾಹಿಯ ಮೂಲ ಉದ್ದೇಶ ಮನರಂಜನೆಯೇ ಆಗಿದ್ದರೂ, ಅದು ಕೇವಲ ಅಷ್ಟಕ್ಕೆ ಸೀಮಿತವಾಗದೆ, ಪುಟ್ಟಕ್ಕನ ಮಕ್ಕಳು ಸಾಕಷ್ಟು ಸಾಮಾಜಿಕ ವಿಷಯಗಳನ್ನು ಚರ್ಚಿಸುವ ಕಥೆಯಾಗಿದೆ. ಅಷ್ಟೇ ಅಲ್ಲದೆ, ಕೌಟುಂಬಿಕ ಮೌಲ್ಯಗಳು, ಹೊಂದಾಣಿಕೆ, ತ್ಯಾಗ, ಪ್ರಾಮಾಣಿಕತೆ, ಸಮಸ್ಯೆಗಳನ್ನು ಎದುರಿಸುವ ಛಲ ಇನ್ನಿತರೆ ಜೀವನ ಪಾಠಗಳನ್ನು ಆಗಾಗ್ಗೆ ಬೋಧಿಸುವಲ್ಲಿ ಪುಟ್ಟಕ್ಕ ಮೇಷ್ಟರಾಗಿದ್ದಾಳೆ. ಇತ್ತೀಚೆಗೆ ಮಹಿಳೆಯೊಬ್ಬರು ತಾವು ಪುಟ್ಟಕ್ಕನ ಮಕ್ಕಳು ಧಾರಾವಾಹಿ ನೋಡಿ, ಸ್ಫೂರ್ತಿಗೊಂಡು ತಾವೂ ಸಹ ಹೊಟೇಲ್ ಶುರು ಮಾಡಿದೆವು ಎಂದು ಸಂದರ್ಶನ ನೀಡಿದ್ದರು. ರಾಜ್ಯದ ಹಲವೆಡೆ ‘ಪುಟ್ಟಕ್ಕನ ಮೆಸ್’ ಎಂಬ ಹೋಟೆಲ್‍ಗಳೂ ಸಹ ಕಾಣ ಸಿಗುತ್ತಿವೆ.

ಒಂದು ಕಥೆಯನ್ನು ಬರಹಗಾರ ಎಷ್ಟೇ ಚಂದ ಬರೆದರೂ, ನಿರ್ದೇಶಕ ಅಚ್ಚುಕಟ್ಟಾಗಿ ಚಿತ್ರಿಸಿದರೂ, ನಟರು ಪ್ರಬುದ್ದತೆಯಿಂದ ನಟಿಸಿದರೂ, ಅದಕ್ಕೊಂದು ವಾಹಿನಿ ದೊರೆತಾಗಲೇ ಅದು ಜನರನ್ನು ಮುಟ್ಟುತ್ತದೆ. ಜೀ ಕನ್ನಡ ವಾಹಿನಿಯು ಪ್ರತಿ ಮನೆಯ ಮನರಂಜನಾ ಸಂಗಾತಿ. ಜೀ ಕನ್ನಡದ ಮುಖ್ಯಸ್ಥರಾದ ರಾಘವೇಂದ್ರ ಹುಣಸೂರು ರವರು ಈ ಕಥೆ ಮೇಲಿಟ್ಟಂತಹ ನಂಬಿಕೆ ಮತ್ತು ವಾಹಿನಿಯ ಇಡೀ ತಂಡದ ನೆರವು, ಇಂದು ಪುಟ್ಟಕ್ಕನನ್ನು ‘ಸಾವಿರದ ಪುಟ್ಟಕ್ಕ’ಳನ್ನಾಗಿ ರೂಪಿಸಿದೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯನ್ನು ಎದೆಗಪ್ಪಿಕೊಂಡು ನಿಮ್ಮದಾಗಿಸಿಕೊಂಡ ಕನ್ನಡ ಜನತೆಗೆ ಇಡೀ ತಂಡ ತಲೆ ಬಾಗಿ, ಧನ್ಯವಾದಗಳನ್ನು ತಿಳಿಸಿದೆ.

MMurali Maluru

Murali Maluru

Peepal Media · ಸಿನಿಮಾ ವಿಭಾಗ

Murali MV is a Reporter at Peepal Media. An avid reader, he reports on Sports and Political issues.

ಸಂಬಂಧಿತ ಸುದ್ದಿಗಳು