ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಡ್ರಗ್ ಅಡಿಕ್ಟ್ ಹುಡುಗಿಯ ಪಾತ್ರ ಬೇಕು, ಗಾಳಿಪಟ ಹುಡುಗಿ ಮನದ ಮಾತು

PPeepal Media

Peepal Media ಸಿನಿಮಾ

• 2 ನಿಮಿಷದ ಓದು

ಡ್ರಗ್ ಅಡಿಕ್ಟ್ ಹುಡುಗಿಯ ಪಾತ್ರ ಬೇಕು, ಗಾಳಿಪಟ ಹುಡುಗಿ ಮನದ ಮಾತು

‘ಗಾಳಿಪಟ 2’ ಚಿತ್ರದಲ್ಲಿ ಅನಂತ್ ನಾಗ್, ಗಣೇಶ್, ದಿಗಂತ್, ರಂಗಾಯಣ ರಘು ಮುಂತಾದ ಪ್ರತಿಭಾವಂತ ಕಲಾವಿದರ ನಡುವೆ ಗಮನ ಸೆಳಯುವ ಇನ್ನೊಬ್ಬರೆಂದರೆ, ಅದು ಶ್ವೇತಾ ಪಾತ್ರಧಾರಿ ವೈಭವಿ ಶಾಂಡಿಲ್ಯ. ಗಣೇಶ್ಗೆ ನಾಯಕಿಯಾಗಿ ಕಾಣಿಸಿಕೊಂಡಿರುವ ವೈಭವಿ ಮೂಲತಃ ಮರಾಠಿಯವರು. ಈಗಾಗಲೇ ಕೆಲವು ಮರಾಠಿ ಮತ್ತು ತೆಲುಗು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದ ವೈಭವಿ, ಕೆಲವು ವರ್ಷಗಳ ಹಿಂದೆ ‘ರಾಜ್-ವಿಷ್ಣು’ ಚಿತ್ರದ ಮೂಲಕ ಕನ್ನಡಕ್ಕೆ ಎಂಟ್ರಿ ಕೊಟ್ಟಿದ್ದರು. ಈಗ ಗಾಳಿಪಟ 2 ಚಿತ್ರದ ಮೂಲಕ ವಾಪಸ್ಸಾಗಿದ್ದಾರೆ. ಅಷ್ಟೇ ಅಲ್ಲ, ತಮ್ಮ ಅಭಿನಯ ಮತ್ತು ಚೆಲುವಿನಿಂದ ಪ್ರೇಕ್ಷಕರ ಮನಸ್ಸಿನಲ್ಲಿ ಅಚ್ಚೊತ್ತಿದ್ದಾರೆ.

ಶ್ವೇತಾ ಪಾತ್ರ ತಮ್ಮ ವೃತ್ತಿಜೀವನದಲ್ಲಿ ಬಹಳ ವಿಭಿನ್ನವಾದ ಪಾತ್ರ ಎನ್ನುವ ವೈಭವಿ, ‘ನಾನು ನಿಜಜೀವನದಲ್ಲಿ ಬಹಳ ಮಾತನಾಡುತ್ತೇನೆ. ಆದರೆ, ಈ ಚಿತ್ರದಲ್ಲಿ ನನಗೆ ಅದಕ್ಕೆ ವಿರುದ್ಧವಾದ ಪಾತ್ರ. ಇಲ್ಲಿ ಮಾತು ಕಡಿಮೆ. ಅಷ್ಟೇ ಅಲ್ಲ, ಪ್ರಬುದ್ಧವಾಗಿರುವ ಜೊತೆಗೆ ಎಮೋಷನಲ್ ಆಗಿ ಇರುವಂತಹ ಪಾತ್ರ ನನ್ನದು. ಹಾಗಾಗಿ, ಶ್ವೇತಾ ಪಾತ್ರ ನನಗೆ ಬಹಳ ಕಷ್ಟವಾಯಿತು. ಆದರೆ, ಇಡೀ ಚಿತ್ರತಂಡದ ಸಹಾಯದೊಂದಿಗೆ ಆ ಪಾತ್ರ ನಿರ್ವಹಿಸಿದೆ. ಅದರಲ್ಲೂ ಕ್ಲೈಮ್ಯಾಕ್ಸ್ ದೃಶ್ಯಗಳ ಚಿತ್ರೀಕರಣ ನಿಜಕ್ಕೂ ಸವಾಲಿನದ್ದಾಗಿತ್ತು. ಅಷ್ಟು ದೊಡ್ಡ ರಿಸ್ಕ್ ತೆಗೆದುಕೊಂಡು ನಟಿಸಿದ್ದು ಫಲ ನೀಡಿದೆ. ಜನರ ಪ್ರೀತಿ ನೋಡಿದಾಗ ಬಹಳ ಖುಷಿಯಾಗುತ್ತದೆ’ ಎನ್ನುತ್ತಾರೆ ವೈಭವಿ.

ಚಿತ್ರದಲ್ಲಿ ತಮ್ಮ ಪಾತ್ರ ಮತ್ತು ಅಭಿನಯವನ್ನು ಜನ ಗುರುತಿಸಿ ಮಾತನಾಡುವಾಗ ಹೃದಯ ತುಂಬಿ ಬರುತ್ತದೆ ಎನ್ನುವ ವೈಭವಿ, ‘ನಾನು ನನ್ನ ಕುಟುಂಬದವರೊಡನೆ ಮುಂಬೈನಲ್ಲಿ ಗಾಳಿಪಟ 2 ನೋಡುವುದಕ್ಕೆ ಹೋಗಿದ್ದೆ. ಚಿತ್ರ ನೋಡುವುದಕ್ಕೆ ಜನ ದೊಡ್ಡ ಸಂಖ್ಯೆಯಲ್ಲಿ ಬಂದಿದ್ದರು ಮತ್ತು ಅವರೆಲ್ಲರೂ ನನ್ನನ್ನು ಗುರುತಿಸಿ ಪ್ರೀತಿಯಿಂದ ಮಾತನಾಡಿದರು. ಇತ್ತೀಚೆಗೆ ಉಡುಪಿ, ಮಂಗಳೂರಿನಲ್ಲಿ ಚಿತ್ರೀಕರಣ ಮಾಡುತ್ತಿದ್ದ ಸಂದರ್ಭದಲ್ಲೂ, ನನ್ನನ್ನು ಗಾಳಿಪಟ 2 ಹುಡುಗಿ ಎಂದು ಗುರುತಿಸಿ ಸೆಲ್ಫಿ ತೆಗೆಸಿಕೊಂಡಿದ್ದನ್ನು ಮರೆಯುವುದಕ್ಕೆ ಸಾಧ್ಯವೇ ಇಲ್ಲ’ ಎನ್ನುತ್ತಾರೆ.

ಸದ್ಯ ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’ನಲ್ಲಿ ನಾಯಕಿಯಾಗಿ ಅಭಿನಯಿಸುತ್ತಿರುವ ವೈಭವಿ, ಆ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ‘’ಮಾರ್ಟಿನ್’ ನನ್ನ ಮೊದಲ ಪ್ಯಾನ್ ಇಂಡಿಯಾ ಚಿತ್ರ. ಅದು ಇನ್ನೊಂದು ಅದ್ಭುತವಾದ ಅನುಭವ. ಈ ಪಾತ್ರ ನನ್ನ ನಿಜಜೀವನಕ್ಕೆ ಬಹಳ ಹತ್ತಿರವಾದ ಪಾತ್ರ. ಬಬ್ಲಿ ಹುಡುಗಿಯಾಗಿ ಕಾಣಿಸಿಕೊಂಡಿದ್ದೇನೆ. ಯಾರಿಗೂ ಹೆದರದ, ಜೀವನದಲ್ಲಿ ಏನಾದರೂ ಸಾಧಿಸುವ ಆಸೆ ಹೊತ್ತಿರುವ ಗಟ್ಟಿ ಹುಡುಗಿಯಾಗಿ ಕಾನಿಸಿಕೊಂಡಿದ್ದೇನೆ’ ಎನ್ನುತ್ತಾರೆ ವೈಭವಿ.

ನನಗೆ ಡ್ರಗ್ ಅಡಿಕ್ಟ್ ಆಗಿ ನಟಿಸುವಾಸೆ

ಒಬ್ಬ ನಟಿಯಾಗಿ ವಿಭಿನ್ನ ಪ್ರಯೋಗಗಳನ್ನು ಮಾಡುವುದಕ್ಕೆ ಇಷ್ಟ ಎನ್ನುವ ವೈಭವಿ, ‘ಯಾವುದೋ ಒಂದು ತರಹದ ಪಾತ್ರಕ್ಕೆ ಸೀಮಿತವಾಗುವುದಕ್ಕೆ ಇಷ್ಟವಿಲ್ಲ. ನನಗೆ ಡ್ರಗ್ ಅಡಿಕ್ಟ್ ಆಗಿ ನಟಿಸುವಾಸೆ. ಹಾರರ್ ಚಿತ್ರದಲ್ಲಿ ನಟಿಸುವಾಸೆ. ಮಹಿಳಾ ಪ್ರಧಾನ ಚಿತ್ರಗಳನ್ನು ಮಾಡುವಾಸೆ. ಸೂಕ್ಷ್ಮಸಂವೇದನೆಯ ಚಿತ್ರಗಳ ಜೊತೆಗೆ ರಾಜಮೌಳಿ ಅವರ ಶೈಲಿಯ ಲಾರ್ಜರ್ ದ್ಯಾನ್ ಲೈಫ್ ಚಿತ್ರಗಳಲ್ಲೂ ನಟಿಸುವುದಕ್ಕೆ ಆಸೆ ಇದೆ. ಎಲ್ಲ ತರಹದ ಪಾತ್ರಗಳನ್ನು, ಎಲ್ಲ ಶೈಲಿಯ ನಿರ್ದೇಶಕರ ಜೊತೆಗೆ ಕೆಲಸ ಮಾಡುವುದಕ್ಕೆ ನಾನು ಎದುರು ನೋಡುತ್ತಿದ್ದೇನೆ’ ಎನ್ನುವ ವೈಭವಿ, ಸದ್ಯಕ್ಕೆ ಯಾವುದೇ ಹೊಸ ಚಿತ್ರವನ್ನೂ ಒಪ್ಪಿಕೊಂಡಿಲ್ಲವಂತೆ.

‘ಸದ್ಯ ಹಲವು ಆಫರ್ಗಳಿವೆ. ಹಲವು ಕಥೆಗಳನ್ನು ಕೇಳುತ್ತಿದ್ದೇನೆ. ಆದರೆ, ಯಾವುದನ್ನೂ ಓಕೆ ಮಾಡಿಲ್ಲ. ಎಂತಹ ಪಾತ್ರಗಳನ್ನು ಬೇಕಾದರೂ ಮಾಡಬಲ್ಲೆ ಎಂದು ತೋರಿಸಬೇಕು. ನಾನೊಬ್ಬ ವರ್ಸಟೈಲ್ ನಟಿ ಎಂದು ನಿರೂಪಿಸಬೇಕು. ಹಾಗಾಗಿ, ಅಂತಹ ಪಾತ್ರಗಳ ಆಯ್ಕೆ ಮತ್ತು ಹುಡುಕಾಟದಲ್ಲಿದ್ದೇನೆ. ಸದ್ಯದಲ್ಲೇ ಒಂದೊಳ್ಳೆಯ ಸುದ್ದಿ ಕೊಡುತ್ತೇನೆ’ ಎನ್ನುತ್ತಾರೆ ವೈಭವಿ.

PPeepal Media

Peepal Media

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು