ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಟ್ರೇಲರ್‌ನಲ್ಲಿ ʼಬಂದೂಕ್‌ʼ…ಪ್ರತಿಭಾನ್ವಿತ ತಾರಾಬಳಗ ಅಭಿನಯದ ಚಿತ್ರ ಜುಲೈ 25ಕ್ಕೆ ರಿಲೀಸ್‌

PPeepal Media Desk

Peepal Media Desk • ಸಿನಿಮಾ

• 1 ನಿಮಿಷದ ಓದು

ಟ್ರೇಲರ್‌ನಲ್ಲಿ ʼಬಂದೂಕ್‌ʼ…ಪ್ರತಿಭಾನ್ವಿತ ತಾರಾಬಳಗ ಅಭಿನಯದ ಚಿತ್ರ ಜುಲೈ 25ಕ್ಕೆ ರಿಲೀಸ್‌

ಸಿನಿಮಾ ಎಂಬ ಬಣ್ಣದ ಲೋಕಕ್ಕೆ ಪ್ರತಿಭಾನ್ವಿತ ನಟ-ನಟಿಯರು, ನಿರ್ದೇಶಕರ ಪ್ರವೇಶ ಮುಂದುವರೆದಿದೆ. ಕಠಿಣ ಪರಿಶ್ರಮ, ಪ್ರತಿಭೆ ಜೊತೆಗೆ ಕೆಲವೊಮ್ಮೆ ಅದೃಷ್ಟವೂ ಬೇಕಾಗುತ್ತದೆ. ಈ ಚಿತ್ರರಂಗ ಕೆಲವರ ಕೈಹಿಡಿದರೆ, ಹಲವರು ಒಂದೆರಡು ಸಿನಿಮಾಗಳ ನಂತರ ಸುಮ್ಮನಾಗುತ್ತಾರೆ. ಬಹುತೇಕರು ಏಳು-ಬೀಳುಗಳ ನಡುವೆ ಪ್ರೇಕ್ಷಕರನ್ನು ಮನರಂಜಿಸುವುದನ್ನು ಮುಂದುವರೆಸುತ್ತಾರೆ. ಅದಕ್ಕೆ ನಿರಂತರ ಪರಿಶ್ರಮ, ಧೈರ್ಯ ಅಗತ್ಯ. ಇದೀಗ ‘ಬಂದೂಕ್’ ಚಿತ್ರತಂಡ ಪ್ರೇಕ್ಷಕರನ್ನು ತಲುಪುವ ಪ್ರಯತ್ನದಲ್ಲಿದೆ. ಯುವ ಪ್ರತಿಭೆ ಮಹೇಶ್ ರವಿಕುಮಾರ್ ಸಾರಥ್ಯದಲ್ಲಿ ಮೂಡಿಬಂದಿರುವ ಈ ಸಿನಿಮಾದ ಟ್ರೇಲರ್‌ ರಿಲೀಸ್‌ ಆಗಿದ್ದು, ನಿರೀಕ್ಷೆ ಹೆಚ್ಚಿಸಿದೆ. ಜುಲೈ 25ಕ್ಕೆ ಬಂದೂಕ್‌ ತೆರೆಗೆ ಬರ್ತಿದೆ. ಈ ಹಿನ್ನೆಲೆ ಚಿತ್ರತಂಡ ಸುದ್ದಿಗಾರರೊಂದಿಗೆ ಹಲವು ವಿಷಯ ಹಂಚಿಕೊಂಡಿದೆ.

ಬೆಂಗಳೂರಿನ ಎಸ್‌ಆರ್‌ ವಿ ಥಿಯೇಟರ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ಮಹೇಶ್ ರವಿಕುಮಾರ್ , ಮೂರು ವರ್ಷದ ಮುಂಚೆ ಶುರುವಾದ ಐಡಿಯಾ. ಬಂದೂಕ್‌ನಲ್ಲಿ ಆರು ಚೇಂಬರ್‌ ಇರುತ್ತದೆ. ನಮ್ಮ ಸಿನಿಮಾದಲ್ಲಿ ಐದು ಚೇಂಬರ್‌ ಇರುವ ಗನ್‌ ಯೂಸ್‌ ಮಾಡಿರುತ್ತೇವೆ. ಆ ಗನ್‌ ಎಲ್ಲಾ ಪಾತ್ರಗಳಿಗೂ ಕನೆಕ್ಟ್‌ ಆಗುತ್ತದೆ. ಹೀಗಾಗಿ ಬಂದೂಕ್‌ ಎಂದು ಹೆಸರಿಟ್ಟಿದ್ದೇವೆ. ಇದು ನನ್ನ ಮೊದಲ ಸಿನಿಮಾ. ಒಂದಷ್ಟು ಕಿರುಚಿತ್ರ ಮಾಡಿದ್ದೇನೆ ಎಂದು ಹೇಳಿದರು.

ಯುವ ಪ್ರತಿಭೆ ಮಹೇಶ್ ರವಿಕುಮಾರ್ ಕಥೆ ಬರೆದು, ಆ್ಯಕ್ಷನ್ ಕಟ್​ ಹೇಳಿರೋ ಚೊಚ್ಚಲ ಚಿತ್ರ ಬಂದೂಕ್​​ ಚಿತ್ರದಲ್ಲಿ ಯುವ ಪ್ರತಿಭೆ ಪಾರ್ಥ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ ಬಾಲಾಜಿ ಮನೋಹರ್, ಶ್ವೇತಾ ಪ್ರಸಾದ್, ಗೋಪಾಲ ಕೃಷ್ಣ ದೇಶಪಾಂಡೆ, ಶಂಕರ್ ಅಶ್ವಥ್, ಹರೀಶ್ ರೈ ಅವರಂತಹ ಪ್ರತಿಭಾನ್ವಿತ ತಾರೆಯರು ಅಭಿನಯಿಸಿದ್ದಾರೆ.

ಕ್ರೈಮ್‌ – ಆ್ಯಕ್ಷನ್‌ ಕಥಾಹಂದರ ಹೊಂದಿರುವ ಬಂದೂಕ್ ಸಿನಿಮಾಗೆ ಶ್ರೀನಿವಾಸ್‌ ಮೂರ್ತಿ ಮತ್ತು ಚಂದ್ರಶೇಖರ್‌ ಬಂಡವಾಳ ಹೂಡಿದ್ದಾರೆ. ಪೈಡಿ ರಾಮಕೃಷ್ಣ ಸಹ ನಿರ್ಮಾಪಕರಾಗಿ ಸಾಥ್‌ ಕೊಟ್ಟಿದ್ದಾರೆ. ಹೊನ್ನಾವರ, ಉಡುಪಿ, ಮಲ್ಪೆ, ಮಂಗಳೂರು ಸುತ್ತಮುತ್ತ ಶೂಟಿಂಗ್‌ ನಡೆದಿದೆ.  ಕ್ರೈಮ್‌ – ಆ್ಯಕ್ಷನ್‌ ಕಥಾಹಂದರ ಹೊಂದಿರುವ ಬಂದೂಕ್ ಸಿನಿಮಾಗೆ ಶ್ರೀನಿವಾಸ್‌ ಮೂರ್ತಿ ಮತ್ತು ಚಂದ್ರಶೇಖರ್‌ ಬಂಡವಾಳ ಹೂಡಿದ್ದಾರೆ. ಪೈಡಿ ರಾಮಕೃಷ್ಣ ಸಹ ನಿರ್ಮಾಪಕರಾಗಿ ಸಾಥ್‌ ಕೊಟ್ಟಿದ್ದಾರೆ. ಹೊನ್ನಾವರ, ಉಡುಪಿ, ಮಲ್ಪೆ, ಮಂಗಳೂರು ಸುತ್ತಮುತ್ತ ಶೂಟಿಂಗ್‌ ನಡೆದಿದೆ. ಟ್ರೇಲರ್‌ ಬಿಡುಗಡೆ ಮೂಲಕ ತಮ್ಮನ್ನು ಪರಿಚಯಿಸಿಕೊಂಡಿರುವ ಚಿತ್ರ ತಂಡ ಜುಲೈ 25ಕ್ಕೆ ಚಿತ್ರಮಂದಿರ ಪ್ರವೇಶಿಸಲಿದೆ.

PPeepal Media Desk

Peepal Media Desk

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು