ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಿವೇದಿತಾ ಶಿವರಾಜ್‌ ಕುಮಾರ್‌ ನಿರ್ಮಾಣದ ‘ಫೈರ್‌ ಫ್ಲೈ’ ಸಿನಿಮಾದ ಟ್ರೇಲರ್‌ ರಿಲೀಸ್..

PPeepal Media Desk

Peepal Media Desk • ಸಿನಿಮಾ

• 2 ನಿಮಿಷದ ಓದು

ನಿವೇದಿತಾ ಶಿವರಾಜ್‌ ಕುಮಾರ್‌ ನಿರ್ಮಾಣದ ‘ಫೈರ್‌ ಫ್ಲೈ’ ಸಿನಿಮಾದ ಟ್ರೇಲರ್‌ ರಿಲೀಸ್..

ಮಗಳ ಸಿನಿಮಾದಲ್ಲಿ ಶಿವಣ್ಣ ಪಿಜ್ಜಾ ಡೆಲಿವರಿ ಬಾಯ್‌ ..ಹೇಗಿದೆ ಫೈರ್‌ ಫ್ಲೈ ಟ್ರೇಲರ್?

ನಿವೇದಿತಾ ಶಿವರಾಜ್‌ ಕುಮಾರ್‌ ನಿರ್ಮಾಣದ ಫೈರ್‌ ಫ್ಲೈ ಸಿನಿಮಾ ಟೀಸರ್‌ ಹಾಗೂ ಹಾಡುಗಳ ಮೂಲಕ ಈಗಾಗಲೇ ಇಂಡಸ್ಟ್ರೀಯಲ್ಲಿ ಬಜ್‌ ಕ್ರಿಯೇಟ್‌ ಮಾಡಿದೆ. ಅಣ್ಣಾವ್ರ ಜನ್ಮದಿನ ಅಂದ್ರೆ ಇದೇ ತಿಂಗಳ 24ಕ್ಕೆ ತೆರೆಗೆ ಬರ್ತಿದೆ. ಈಗಾಗಲೇ ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಅದರ ಭಾಗವಾಗಿ ನಿನ್ನೆ ಶಿವಣ್ಣನ ನಿವಾಸದಲ್ಲಿ ಟ್ರೇಲರ್‌ ಬಿಡುಗಡೆ ಕಾರ್ಯ್ರಕಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಫೈರ್‌ ಫ್ಲೈ ಇಡೀ ತಂಡ ಹಾಗೂ ಶಿವಣ್ಣ ದಂಪತಿ ಭಾಗಿಯಾಗಿ ಹೊಸಪ್ರತಿಭೆಗಳ ಕನಸಿಗೆ ಬೆನ್ನುತಟ್ಟಿದ್ದರು.

ಟ್ರೇಲರ್‌ ಬಿಡುಗಡೆ ಬಳಿಕ ಶಿವಣ್ಣ ಮಾತನಾಡಿ, ಮಗಳು ಸಿನಿಮಾ ಮಾಡಿರುವುದು ಬಹಳ ಖುಷಿಯಾಗಿದೆ. ನಾನು ಕಥೆ ಕೇಳಿದೆ ವಿಭಿನ್ನವಾಗಿತ್ತು. ಕೇಳಿದ ತಕ್ಷಣ ಹೃದಯಕ್ಕೆ ಸೇರಿತು. ಸಾಕಷ್ಟು ವಿಷಯಗಳು ಚಿತ್ರದಲ್ಲಿವೆ. ಬರೀ ಫೈಟ್‌, ಡ್ಯುಯೇಟ್‌ ಸಾಂಗ್‌ ಮಾಡಬಹುದು. ಆದರೆ ಫೈರ್‌ ಫ್ಲೈ ವ್ಯಾಲ್ಯೂ ಸಬ್ಜೆಕ್ಟ್ ಇರುವ ಚಿತ್ರ.  ವಂಶಿ ಒಳ್ಳೆ ಕಥೆ ಮಾಡಿದ್ದಾರೆ. ಒಳ್ಳೆ ತಂಡ ಚಿತ್ರಕ್ಕೆ ಕೆಲಸ ಮಾಡಿದೆ. ಚರಣ್ ರಾಜ್‌ ಸಂಗೀತ ಬಗ್ಗೆ ಮಾತನಾಡುವ ಆಗಿಲ್ಲ. ನಮ್ಮ ಕನ್ನಡದಲ್ಲಿಯೂ ಹೊಸ ತಂಡ ಬರಬೇಕು. ಹೊಸ ಅಲೆ ಬರಬೇಕು ಎಂಬ ಉದ್ದೇಶದಿಂದ ನನ್ನ ಆಸೆ. ಅವರೇ ನಮ್ಮ ಭಾಷೆ, ಸಂಸ್ಕೃತಿಯನ್ನು ಕರೆದುಕೊಂಡು ಹೋಗಬೇಕು. ಸಿನಿಮಾ ಹೇಗೆ ಹೋಗುತ್ತದೆ. ಬಿಡುತ್ತದೆ ಅದು ಎರಡನೇಯದ್ದು. ಆದರೆ ನಮ್ಮ ಪ್ರಯತ್ನ ಇರಬೇಕು. ನಾನು ಈ ಚಿತ್ರದಲ್ಲಿ ನಟಿಸಿದ್ದೇನೆ. ಹೊಸ ಹುಡುಗರು ನಮ್ಮನ್ನು ಇನ್ನಷ್ಟು ಯಂಗ್‌ ಆಗಿ ತೋರಿಸಿದ್ದಾರೆ.

ಗೀತಾ ಶಿವರಾಜ್‌ ಕುಮಾರ್‌ ಮಾತನಾಡಿ, ಹೊಸ ತಂಡ ಹೊಸ ಪ್ರಯತ್ನ ಮಾಡಿದೆ. ಎಲ್ಲರೂ ಇದಕ್ಕೆ ಪ್ರೋತ್ಸಾಹ ಕೊಡಬೇಕು. ಈ ಚಿತ್ರವನ್ನು ಕುಮಾರ್‌ ಅವರು ಡಿಸ್ಟ್ರೀಬ್ಯೂಟ್‌ ಮಾಡುತ್ತಿದ್ದಾರೆ. ಅದಕ್ಕೆ ತುಂಬಾ ಧನ್ಯವಾದ. ವಂಶಿ ಹೇಳಿದ ಕಥೆ ಕೇಳಿ ಅವಳಿಗೆ ಅವರ ತಂದೆಗೂ ಇಷ್ಟವಾಯ್ತು. ಅದು ಈಗ ಇಲ್ಲಿವರೆಗೂ ಬಂದು ನಿಂತಿದೆ.

ನಿರ್ಮಾಪಕಿ ನಿವೇದಿತಾ ಶಿವರಾ ಕುಮಾರ್‌, ಇದು ನನ್ನ ಮೊದಲ ಸಿನಿಮಾ. ತಾತನ ಹುಟ್ಟುಹಬ್ಬದ ದಿನ ಬರುತ್ತಿರುವುದು ಬಹಳ ಖುಷಿ ಇದೆ. ಕನ್ನಡ ಸಿನಿಮಾ ನೋಡಲು ಪ್ರೇಕ್ಷಕರು ಬರುತ್ತಿಲ್ಲ ಎಂದು ಎಲ್ಲರೂ ಕೇಳುತ್ತಾರೆ. ನಾವು ಅದಕ್ಕೆ ಒಳ್ಳೆ ಸಿನಿಮಾ ಕೊಟ್ಟರೆ ಖಂಡಿತ ಬರುತ್ತಾರೆ. ಏಪ್ರಿಲ್ 24 ಸಿನಿಮಾ ರಿಲೀಸ್‌ ಆಗುತ್ತಿದೆ. ಎಲ್ಲರೂ ಥಿಯೇಟರ್‌ ನಲ್ಲಿಯೇ ಫೈರ್‌ ಫ್ಲೈ ಸಿನಿಮಾ ನೋಡಿ ಎಂದರು.

ತಾರಾಬಳಗದ ಮೂಲಕ ಗಮನ ಸೆಳೆದಿರುವ ಫೈರ್‌ ಫ್ಲೈ ಸಿನಿಮಾದಲ್ಲಿ  ವಂಶಿ ನಟಿಸಿ, ನಿರ್ದೇಶಿಸಿದ್ದಾರೆ. ಇದು ಇವರ ಚೊಚ್ಚಲ ಪ್ರಯತ್ನ. ಚಿತ್ರದಲ್ಲಿ ಸುಧಾರಾಣಿ, ರಚನಾ ಇಂದರ್, ಅಚ್ಯುತ್ ಕುಮಾರ್, ಮೂಗು ಸುರೇಶ್, ಶೀತಲ್ ಶೆಟ್ಟಿ‌ ಸೇರಿದಂತೆ ಮತ್ತಿತರರು ಅಭಿನಯಿಸಿದ್ದಾರೆ. . ಜಯ್ ರಾಮ್ ಚಿತ್ರದ ಸಹ-ನಿರ್ದೇಶಕ. ಅಭಿಲಾಷ್ ಕಳತ್ತಿ ಅವರ ಕ್ಯಾಮರಾ ವರ್ಕ್, ಚರಣ್ ರಾಜ್ ಸಂಗೀತ ನಿರ್ದೇಶನ, ರಘು ನಿಡುವಳ್ಳಿ ಅವರ ಸಂಭಾಷಣೆ ಚಿತ್ರಕ್ಕಿದೆ.

ಒಂದೊಳ್ಳೆ ಕಾಡುವ ಕಥೆಯೊಂದಿಗೆ ಫೈರ್‌ ಫ್ಲೈ ಸಿನಿಮಾ ಏಪ್ರಿಲ್‌ 24ಕ್ಕೆ ತೆರೆಗೆ ಬರ್ತಿದೆ. ವಿಶೇಷ ಎಂದರೆ ಮಗಳ ನಿರ್ಮಾಣದಲ್ಲಿ ಶಿವಣ್ಣ ಕೂಡ ನಟಿಸಿದ್ದಾರೆ. ಶಿವಣ್ಣ ಇಲ್ಲಿ ದಿ ಕಿಂಗ್ಸ್ ಪಿಜ್ಜಾ ಬಾಯ್ ಆಗಿದ್ದಾರೆ. ಆದರೆ, ಕಿಂಗ್ಸ್ ಅನ್ನೋದು ಇಲ್ಲಿ ಶಿವಣ್ಣನಿಗೆ ಸೂಟೇಬಲ್ ಆಗಿದೆ. ಶಿವಣ್ಣ ಕಿಂಗ್ ಅಲ್ವೇ? ಅದಕ್ಕೇನೆ ಈ ಹೆಸರು ಇಟ್ಟಂತೇನೆ ಇದೆ. ಆದರೆ, ಶಿವಣ್ಣ ಇಂತಹ ರೋಲ್ ಯಾಕೆ ಮಾಡಿದ್ರು ಅನ್ನೋದನ್ನು ನೀವು ಥಿಯೇಟರ್‌ ನಲ್ಲಿಯೇ ನೋಡಬೇಕು.

PPeepal Media Desk

Peepal Media Desk

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು