ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ‘ಡವ್ ಮಾಸ್ಟರ್’ ಚಿತ್ರದ ಟ್ರೇಲರ್ ಬಿಡುಗಡೆ

P

Peepal Media Desk • ಸಿನಿಮಾ

• 1 ನಿಮಿಷದ ಓದು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ‘ಡವ್ ಮಾಸ್ಟರ್’ ಚಿತ್ರದ ಟ್ರೇಲರ್ ಬಿಡುಗಡೆ

ಬೆಂಗಳೂರು: ವಿಭಿನ್ನ ಕಥಾಹಂದರ ಹೊಂದಿರುವ “ಡವ್ ಮಾಸ್ಟರ್” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆದಿದ್ದು, ಮಾಜಿ‌ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಟ್ರೇಲರ್ ಅನಾವರಣ ಮಾಡಿದರು.

ಸಿನಿಮಾದ ಹಾಡುಗಳನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಶಾಸಕ ಭೈರತಿ ಸುರೇಶ್, ನಾರಾಯಣ ಸ್ವಾಮಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಎಸ್ ಎ ಚಿನ್ನೇಗೌಡ, ಕೆ.ವಿ.ಚಂದ್ರಶೇಖರ್, ಹಾಲಿ ಅಧ್ಯಕ್ಷರಾದ ಭಾ.ಮ.ಹರೀಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ನಿರ್ಮಾಪಕರಾದ ಸಿದ್ದರಾಜು, ಭಾ.ಮ.ಗಿರೀಶ್ ಸೇರಿದಂತೆ ಹಲವು ಗಣ್ಯರು ಬಿಡುಗಡೆಗೊಳಿಸಿದರು.

ಟ್ರೇಲರ್ ಅನಾವರಣದ ಬಳಿಕ ಸಿನಿಮಾದ ಕುರಿತು ಮಾತನಾಡಿದ ಸಿದ್ದರಾಮಯ್ಯ ಅವರು, ʼಡವ್ ಮಾಸ್ಟರ್ʼ ಚಿತ್ರ ನಾಯಿ ಹಾಗೂ ಮನುಷ್ಯನ ಸಂಬಂಧದ ನಡುವಿನ ಕಥಾಹಂದರ ಹೊಂದಿರುವ ಚಿತ್ರ ಎಂದು ತಿಳಿದು ಸಂತೋಷವಾಯಿತು. ಪ್ರಾಣಿಗಳಲ್ಲೇ ಹೆಚ್ಚು ನಿಯತ್ತಿನ ಪ್ರಾಣಿ ನಾಯಿ ಎನ್ನುತ್ತೇವೆ. ‘ರಾಕಿ’ ಎಂಬ ಹೆಸರಿನ ನಾಯಿ ಈ ಚಿತ್ರದಲ್ಲಿ ಅಭಿನಯಿಸಿದೆ. ತಬಲನಾಣಿ ಸೇರಿದಂತೆ ಅನೇಕ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಆತ್ಮೀಯರಾದ ಚಾಂದ್ ಪಾಷ ಅವರ ಮಗ ರೋಷನ್ ಈ ಚಿತ್ರ ನಿರ್ಮಾಣ ಮಾಡಿರುವ ವಿಷಯ ತಿಳಿದು ಖುಷಿಯಾಯಿತು. ಇಡೀ ತಂಡಕ್ಕೆ ಒಳ್ಳೆಯದಾಗಲಿ. ಎಲ್ಲರೂ ಈ ಚಿತ್ರ ನೋಡುವ ಮೂಲಕ ಪ್ರೋತ್ಸಾಹಿಸಿ ಎಂದರು.

ನಿರ್ದೇಶಕ ಆರ್ಯ ಹೇಳಿದ ಕಥೆ ಇಷ್ಟವಾಯಿತು. ಹಾಗಾಗಿ ನಿರ್ಮಾಣಕ್ಕೆ ಮುಂದಾದೆವು. ನಾನು ಇಪ್ಪತ್ತೈದು ವರ್ಷಗಳಿಂದ ಚಿತ್ರರಂಗದಲ್ಲಿ ವಿತರಕನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಈಗ ಚಿತ್ರ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ನನ್ನ ಮಗ ರೋಷನ್ ನೋಡಿಕೊಳ್ಳುತ್ತಿದ್ದಾನೆ. ಈ ಸಮಾರಂಭಕ್ಕೆ ಆಗಮಿಸಿರುವ ಸಿದ್ದರಾಮಯ್ಯ ಅವರು ಸೇರಿದಂತೆ ಎಲ್ಲಾ ಗಣ್ಯರಿಗೆ ನನ್ನ ಧನ್ಯವಾದ ಎಂದರು ಚಾಂದ್ ಪಾಷಾ.

ನಿರ್ದೇಶಕ ಆರ್ಯ ಮಾತನಾಡಿ, ನನ್ನ ಕಥೆ ಇಷ್ಟಪಟ್ಟು ನಿರ್ಮಾಣ ಮಾಡಿದ ನಿರ್ಮಾಪಕರಿಗೆ ಹಾಗೂ ನನ್ನ ಇಡೀ ತಂಡಕ್ಕೆ ಧನ್ಯವಾದ. ಸಿದ್ದರಾಮಯ್ಯ ಅವರಿಂದ ನಮ್ಮ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿಸಬೇಕೆಂಬುದು ನನ್ನ ಆಸೆಯಾಗಿತ್ತು. ಅದು ಈಡೇರಿದೆ. ಅವರಿಗೆ ವಿಶೇಷ ಧನ್ಯವಾದ ತಿಳಿಸಿದರು.

ನನ್ನ ಅಭಿನಯದ ಚಿತ್ರವೊಂದಕ್ಕೆ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದ ಆರ್ಯ ಈ ಚಿತ್ರದ ಕಥೆ ಹೇಳಿದಾಗ ಇಷ್ಟವಾಯಿತು. ನಾಯಿ ಹಾಗೂ ನನ್ನ ನಡುವಿನ ಬಾಂಧವ್ಯದ ಸನ್ನಿವೇಶಗಳನ್ನು ನಿರ್ದೇಶಕರು ಮನಮುಟ್ಟುವಂತೆ ತೋರಿಸಿದ್ದಾರೆ. ರಾಕಿ(ನಾಯಿ) ನನಗಿಂತ ಚೆನ್ನಾಗಿ ನಟಿಸಿದೆ ಅಂತ ಹೇಳಬಹುದು ಎಂದು ತಬಲನಾಣಿ ತಿಳಿಸಿದರು.

ನಿರ್ಮಾಪಕ ಸಿ.ರೋಷನ್, ಸಂಗೀತ ನಿರ್ದೇಶಕ ಶಕೀಲ್ ಅಹ್ಮದ್, ಛಾಯಾಗ್ರಾಹಕ ಕಿರಣ್ ಕುಮಾರ್, ನಟಿ ಪಂಕಜ ಹಾಗೂ ಹಾಡು ಬರೆದಿರುವ ಸೌಮ್ಯ ಅವರು ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ತಬಲ ನಾಣಿ, ಶಕೀಲ, ಕುರಿ ಪ್ರತಾಪ್, ಮಿತ್ರ, ನವೀನ್ ಪಡೀಲ್, ಪಂಕಜ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ರಾಕಿ(ನಾಯಿ) ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿದೆ.

P

Peepal Media Desk

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version