ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

‘ಹಮಾರೆ ಬಾರಹ್’ ಸಿನಿಮಾ ರಾಜ್ಯದಲ್ಲಿ ಎರಡು ವಾರ ನಿಷೇಧ: ಮುಸ್ಲಿಮರ ಬಗ್ಗೆ ತುಷ್ಟೀಕರಣದ ಆರೋಪ

PPeepal Media Desk

Peepal Media Desk ವಿಶೇಷ, ಸಿನಿಮಾ

• 1 ನಿಮಿಷದ ಓದು

‘ಹಮಾರೆ ಬಾರಹ್’ ಸಿನಿಮಾ ರಾಜ್ಯದಲ್ಲಿ ಎರಡು ವಾರ ನಿಷೇಧ: ಮುಸ್ಲಿಮರ ಬಗ್ಗೆ ತುಷ್ಟೀಕರಣದ ಆರೋಪ

ಬೆಂಗಳೂರು: ಮುಸ್ಲಿಮರ ಬಗ್ಗೆ ಅವಹೇಳನಕಾರಿ ಸಂಗತಿಗಳಿವೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇಂದು ಶುಕ್ರವಾರ ಬಿಡುಗಡೆಯಾಗಬೇಕಿದ್ದ ‘ಹಮಾರೆ ಬಾರಹ್’ ಹಿಂದಿ ಸಿನಿಮಾ ಹಾಗೂ ಅದರ ಟ್ರೇಲರ್ ಅನ್ನು ರಾಜ್ಯ ಸರ್ಕಾರ ನಿಷೇಧಿಸಿದೆ.

ಈ ಸಿನಿಮಾವನ್ನು ಎರಡು ವಾರಗಳ ಅವಧಿ ಅಥವಾ ಮುಂದಿನ ಆದೇಶದವರೆಗೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರ ಬಿಡುಗಡೆಗೆ ಅನುಮತಿ ಕೊಟ್ಟಲ್ಲಿ ರಾಜ್ಯದಲ್ಲಿ ಶಾಂತಿಗೆ ಭಂಗವುಂಟು ಮಾಡುವ ಧರ್ಮ ಧರ್ಮಗಳ ನಡುವೆ ಹಾಗೂ ಜಾತಿ ಜಾತಿಗಳ ಮಧ್ಯೆ ದ್ವೇಷವುಂಟು ಮಾಡುವ ಸಂಗತಿಗಳಿವೆ ಎನ್ನಲಾಗಿದೆ. ಒಂದು ಧರ್ಮದ ಪದ್ಧತಿಗಳನ್ನು ಉದ್ದೇಶಪೂರ್ವಕವಾಗಿ ಅವಹೇಳನ ಮಾಡುವ ದೃಶ್ಯಗಳಿವೆ. ಅವು ಮುಸ್ಲಿಮರ ಹಾಗೂ ಮಹಿಳೆಯರ ಭಾವನೆಗಳಿಗೆ ಧಕ್ಕೆ ಉಂಟು ಮಾಡುವಂತೆ ಕಂಡು ಬಂದಿವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

‘ಇತ್ತೀಚಿಗೆ ‘ಜೀ ಸಿನಿಮಾ’ ವಾಹಿನಿಯು ‘ಹಮಾರೆ ಬಾರಹ್’ ಎಂಬ ಚಲನಚಿತ್ರದ ಟ್ರೇಲರ್ ಬಿಡುಗಡೆ ಮಾಡಿತ್ತು. ಇದರಲ್ಲಿ ಮುಸ್ಲಿಂ ಧರ್ಮದ ಬಗ್ಗೆ ಪ್ರಚೋದನಾತ್ಮಕ ಮತ್ತು ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಚಿತ್ರ ಪ್ರದರ್ಶನಕ್ಕೆ ರಾಜ್ಯದ ವಿವಿಧ ಮುಸ್ಲಿಂ ಸಂಘಗಳಿಂದ ಪ್ರತಿಭಟನೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದ ಯಾವುದೇ ಎಲೆಕ್ಟ್ರಾನಿಕ್ ಮಾಧ್ಯಮ, ಸಾಮಾಜಿಕ ಜಾಲತಾಣ, ಸಿನಿಮಾ ಮಂದಿರಗಳು, ಖಾಸಗಿ ಟಿವಿ ಚಾನಲ್‌ಗಳು ಹಾಗೂ ಇತರೆ ಮಾಧ್ಯಮಗಳ ಮೂಲಕ ಪ್ರಸಾರ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ಆದೇಶದ ವಿವರ: ಇಂತಹ ಚಿತ್ರಗಳಿಗೆ ಅನುಮತಿ ನೀಡಿದರೆ ಧರ್ಮ ಮತ್ತು ಜಾತಿಗಳ ಮಧ್ಯೆ ದ್ವೇಷ ಹುಟ್ಟಿಸುತ್ತದೆ. ದೇಶದಲ್ಲಿ ಒಂದು ಧರ್ಮವನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿ, ಕೋಮು ಸೌಹಾರ್ದತೆಗೆ ಧಕ್ಕೆಯುಂಟು ಮಾಡಿ, ದೇಶದಲ್ಲಿ ಅಶಾಂತಿ ಉಂಟು ಮಾಡುವುದು, ಮುಸ್ಲಿಂ ಧರ್ಮದ ಭಾವನೆಗಳಿಗೆ ಧಕ್ಕೆ ಉಂಟು ಮಾಡುವುದು ಒಂದು ಷಡ್ಯಂತ್ರವಾಗಿದೆ. ಚಲನಚಿತ್ರಗಳು ಸಮಾಜದಲ್ಲಿ ಮಾರ್ಗದರ್ಶನವಾಗಬೇಕು, ಅದನ್ನು ಬಿಟ್ಟು ಧರ್ಮಗಳ ಮಧ್ಯೆ ದ್ವೇಷ ಭಾವನೆ ಹುಟ್ಟಿಸುವುದಲ್ಲ. ಅದರಂತೆ, ಇಂದು (ಜೂನ್ 07, 2024) ದೇಶಾದ್ಯಂತ ಬಿಡುಗಡೆಯಾಗಲಿರುವ ‘ಹಮಾರೆ ಬಾರಹ್’ ಎಂಬ ವಿವಾದಾತ್ಮಕ ಸಿನಿಮಾ ಬಿಡುಗಡೆಯನ್ನು ನಿಷೇಧಿಸಲಾಗಿದೆ.

‘ಈ ಚಲನಚಿತ್ರದ ಟ್ರೈಲರ್ ಅನ್ನು ಪರಿಶೀಲಿಸಲಾಗಿದ್ದು, ‘ಹಮಾರೆ ಬಾರಹ್’ ಚಿತ್ರದಲ್ಲಿ ಪವಿತ್ರ ಗ್ರಂಥ ‘ಖುರಾನ್’ ಶರೀಫರಲ್ಲಿ ಇರುವ ‘ಸೂರೆ ಎ ಬಕರ’ದ ಸಾಲಿನಲ್ಲಿನ ಉಪದೇಶಗಳು ಹಾಗೂ ಸಂದೇಶಗಳ ಕುರಿತಂತೆ ನಿರ್ಮಾಪಕ ಹಾಗೂ ನಿರ್ದೇಶಕರು ತಪ್ಪು ಅಪಾರ್ಥ ಬರುವಂತೆ ಸೃಷ್ಟಿಸಿದ್ದಾರೆ. ಒಂದು ಸಮಾಜವನ್ನು ಧರ್ಮದ ಆಧಾರದಲ್ಲಿ ವಿಶ್ಲೇಷಣೆ ಮಾಡುವುದು ಸ್ವಾಸ್ಥ್ಯಕ್ಕೆ ಧಕ್ಕೆ ತರುವ ಸಂಭವವಿದೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

PPeepal Media Desk

Peepal Media Desk

Peepal Media · ವಿಶೇಷ ವಿಭಾಗ

ಸಂಬಂಧಿತ ಸುದ್ದಿಗಳು