ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

‘ಜೈಲರ್’ ವಿರುದ್ಧ ಕೇಸ್ ದಾಖಲಿಸಿದ RCB.. ಬಿಗ್ ಶಾಕ್ ನೀಡಿದ ಹೈಕೋರ್ಟ್

PPeepal Media Desk

Peepal Media Desk • ಸಿನಿಮಾ

• 1 ನಿಮಿಷದ ಓದು

‘ಜೈಲರ್’ ವಿರುದ್ಧ ಕೇಸ್ ದಾಖಲಿಸಿದ RCB.. ಬಿಗ್ ಶಾಕ್ ನೀಡಿದ ಹೈಕೋರ್ಟ್

ಸೂಪರ್ ಸ್ಟಾರ್ ರಜನಿಕಾಂತ್ (superstar Rajnikanth) ಅಭಿನಯದ ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ಚಿತ್ರ ಜೈಲರ್. ಸನ್ ಪಿಕ್ಚರ್ಸ್ (Sun pictures) ನಿರ್ಮಾಣದ ಈ ಸಿನಿಮಾದಲ್ಲಿ ತಮನ್ನಾ ಮತ್ತು ರಮ್ಯಾ ಕೃಷ್ಣ ನಾಯಕಿಯರಾಗಿ ನಟಿಸಿದ್ದಾರೆ.

ಮೋಹನ್ ಲಾಲ್ (Mohanlal) ಮತ್ತು ಶಿವಣ್ಣ (Shivrajkumar) ಈ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರವು ಆಗಸ್ಟ್ 10ರಂದು ಬಿಡುಗಡೆಯಾಗಿ ದೊಡ್ಡ ಯಶಸ್ಸನ್ನು ಪಡೆದಿದೆ. ಸತತ 6 ಫ್ಲಾಪ್‌ಗಳ ನಂತರ ರಜನಿಯವರಿಗೆ ಒಂದು ಬ್ಲಾಕ್‌ಬಸ್ಟರ್ ಹಿಟ್ ಸಿಕ್ಕಂತಾಗಿತ್ತು. ಯಶಸ್ಸು ಮಾತ್ರವಲ್ಲ ಅದೇ ರೇಂಜ್ ನಲ್ಲಿ ಕಲೆಕ್ಷನ್ ಕೂಡ ಆಗಿದೆ. ಈ ಚಿತ್ರವು ಸುಮಾರು ರೂ. 600 ಕೋಟಿ ಕಲೆಕ್ಷನ್‌ ಮಾಡುವ ರಜನಿ ಸಾಮರ್ಥ್ಯ ಏನೆಂದು ತೋರಿಸಿದೆ. ಮತ್ತು ಈ ಚಿತ್ರವು ಬಾಕ್ಸ್ ಆಫೀಸ್ನಲ್ಲಿ ಈಗಲೂ ಓಡುತ್ತಲೇ ಇದೆ.

ಇದೆಲ್ಲದರ ನಡುವೆ ಈಗ ಚಿತ್ರ ವಿವಾದಕ್ಕೆ ಸಿಲುಕಿದೆ. ಇತ್ತೀಚೆಗೆ ಸಿನೆಮಾಗಳಲ್ಲಿನ ವಿಷಯಗಳಿಗೆ ಕೋರ್ಟಿಗೆ ಹೋಗುವುದು ತೀರಾ ಮಾಮೂಲಿ ವಿಷಯ. ಹಾಗೆಯೇ ಇತ್ತೀಚೆಗಷ್ಟೇ ಆರ್‌ಸಿಬಿ ತಮ್ಮ ತಂಡಕ್ಕೆ ಜೈಲರ್‌ನಿಂದ ಅವಮಾನವಾಗಿದೆ ಎಂದು ನ್ಯಾಯಾಲಯದ ಮೊರೆ ಹೋಗಿತ್ತು.

ಒಂದು ದೃಶ್ಯದಲ್ಲಿ ಕಾಂಟ್ರಾಕ್ಟ್ ಕಿಲ್ಲರ್.. RCB ಜರ್ಸಿ ಧರಿಸಿ.. ಮಹಿಳೆಗೆ ಅಸಭ್ಯ ಭಾಷೆಯಲ್ಲಿ ಕಿರುಕುಳ ನೀಡುತ್ತಾನೆ. ಅದು ಐಪಿಎಲ್ ತಂಡಕ್ಕೆ ಇಷ್ಟವಾಗಿಲ್ಲ. ಆರ್‌ಸಿಬಿ ಜೆರ್ಸಿಯನ್ನು ಅವಮಾನಕರವಾಗಿ ಚಿತ್ರಿಸಿದ್ದು, ಕೂಡಲೇ ದೃಶ್ಯವನ್ನು ಅಳಿಸುವಂತೆ ಆರ್‌ಸಿಬಿ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ತೀರ್ಪು ನೀಡಿದ್ದು ಜೆರ್ಸಿಯೊಂದಿಗಿನ ದೃಶ್ಯವನ್ನು ತೆಗೆದುಹಾಕಬೇಕು ಎಂದು ಜೈಲರ್ ತಯಾರಕರಿಗೆ ಆದೇಶವನ್ನು ನೀಡಿದ್ದಾರೆ.

ನಾವು ಜೈಲರ್ (Jailer) ಸಿನಿಮಾ ನೋಡಿದ್ದೇವೆ ಆದರೆ.. ಈ ಜೆರ್ಸಿ ಎಲ್ಲೂ ಕಾಣಿಸಿಲ್ಲ ಎನ್ನುವುದು ನಿಮ್ಮ ಅನುಮಾನವಾಗಿದ್ದಲ್ಲಿ… ರಜನಿಯ ಮೊಮ್ಮಗನನ್ನು ಕೊಲ್ಲಲು ಇಬ್ಬರು ಹಂತಕರು ಬರುತ್ತಾರೆ.. ಅವರಲ್ಲೊಬ್ಬ.. ರಜನಿ ಸೊಸೆಯ ಕುರಿತು ಅಶ್ಲೀಲ ಕಾಮೆಂಟ್ ಮಾಡುತ್ತಾನೆ.. ಅವನು RCB ಜೆರ್ಸಿ ಧರಿಸಿರುವುದು ಕಾಣಿಸುತ್ತದೆ. ಇದೀಗ ಈ ವಿಷಯ ವೈರಲ್ ಆಗಿದ್ದು, ಬೆಂಗಳೂರು ರಾಯಲ್ ಚಾಲೆಂಜರ್ಸ್ (ಆರ್‌ಸಿಬಿ/ Bangalore Royal Challengers) ಅಭಿಮಾನಿಗಳೂ ಅಂತಹವರೇ ಎನ್ನುವ ಟ್ರೋಲ್‌ ಓಡಾಡುತ್ತಿದೆ.

PPeepal Media Desk

Peepal Media Desk

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು