ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹಿಂದಿ ವೆಬ್ ಸೀರೀಸ್ ನಲ್ಲಿ ಗಾಳಿಪಟ ಭಾವನಾ ರಾವ್ : ಸುನಿಲ್ ಶೆಟ್ಟಿ ಜೊತೆ ತೆರೆ ಹಂಚಿಕೊಂಡ ಅಪ್ಪಟ ಕನ್ನಡತಿ

PPeepal Media Desk

Peepal Media Desk ಸಿನಿಮಾ

• 1 ನಿಮಿಷದ ಓದು

ಹಿಂದಿ ವೆಬ್ ಸೀರೀಸ್ ನಲ್ಲಿ ಗಾಳಿಪಟ ಭಾವನಾ ರಾವ್ : ಸುನಿಲ್ ಶೆಟ್ಟಿ ಜೊತೆ ತೆರೆ ಹಂಚಿಕೊಂಡ ಅಪ್ಪಟ ಕನ್ನಡತಿ

ಬೆಂಗಳೂರು: ‘ಗಾಳಿಪಟ’ ಸಿನಿಮಾದಲ್ಲಿ ಅರಳು ಹುರಿದಂತೆ ಮಾತನಾಡಿ, ಚೆಂದದ ಹಾಡಿಗೆ ಅಷ್ಟೇ ಸೊಗಸಾಗಿ ಹೆಜ್ಜೆ ಹಾಕಿ ಪ್ರೇಕ್ಷಕರ ಮನದಲ್ಲಿ ನೆಲೆಯೂರಿದ ಅಪ್ಪಟ ಕನ್ನಡತಿ ಭಾವನಾ ರಾವ್ ಗಾಳಿಪಟ ನಂತರ ಚಂದನವನದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿದ್ದಾರೆ. ತಮಿಳು ಸಿನಿಮಾಗಳಲ್ಲೂ ಮಿಂಚಿದ್ದಾರೆ. ಪ್ರತಿಭೆ ಹಾಗೂ ಸಹಜ ಅಭಿನಯದ ಮೂಲಕ ಎಲ್ಲರ ಗಮನ ಸೆಳೆಯೋ ಭಾವನಾ ರಾವ್ ಹಿಂದಿಯ ಬಹು ನಿರೀಕ್ಷಿತ ವೆಬ್ ಸೀರೀಸ್ ನಲ್ಲಿ ಬಿಟೌನ್ ದಿಗ್ಗಜರ ಜೊತೆ ಸ್ಕ್ರೀನ್ ಶೇರ್ ಮಾಡಿದ್ದಾರೆ.

ಹಿಂದಿಯಲ್ಲಿ ಬಿಡುಗಡೆಗೆ ಸಜ್ಜಾಗಿರುವ ‘ಧಾರಾವಿ ಬ್ಯಾಂಕ್’ ವೆಬ್ ಸೀರೀಸ್ ನಲ್ಲಿ ಭಾವನಾ ರಾವ್ ನಟಿಸಿದ್ದಾರೆ. ಇದರಲ್ಲಿ ಬಾಲಿವುಡ್ ಸ್ಟಾರ್ ನಟ ಸುನಿಲ್ ಶೆಟ್ಟಿ ಜೊತೆ ಭಾವನಾ ರಾವ್ ಅಭಿನಯಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆಸಿರುವ ಭಾವನಾ ರಾವ್ ಹಿಂದಿಯಲ್ಲಿ, ʼಇದು ನನ್ನ ಮೊದಲ ವೆಬ್ ಸೀರೀಸ್. ಇದರಲ್ಲಿ ಸುನಿಲ್ ಶೆಟ್ಟಿಯವರ ಮಗಳಾಗಿ ನಟಿಸಿದ್ದು, ಲಾಯರ್ ಪಾತ್ರವನ್ನು ನಿರ್ವಹಿಸಿದ್ದೇನೆ. ಒಟ್ಟು ಹತ್ತು ಸಂಚಿಕೆಗಳಿದ್ದು, ತುಂಬಾನೇ ಚೆನ್ನಾಗಿ ಮೂಡಿ ಬಂದಿದೆ. ನವೆಂಬರ್ 19ರಂದು ಈ ವೆಬ್ ಸೀರೀಸ್ ಬಿಡುಗಡೆಯಾಗುತ್ತಿದೆʼ ಎಂದು ಸಂತಸ ಹಂಚಿಕೊಂಡಿದ್ದಾರೆ. ಕನ್ನಡದಲ್ಲಿ ಭಾವನಾ ರಾವ್ ನಟನೆಯ ಹೊಂದಿಸಿ ಬರೆಯಿರಿ, ಗ್ರೇ ಗೇಮ್ಸ್ ಬಿಡುಗಡೆಗೆ ರೆಡಿಯಾಗಿದ್ದು, ಇವುಗಳ ಜೊತೆ ಇನ್ನೂ ಮುರ್ನಾಲ್ಕು ಸಿನಿಮಾಗಳು ಕೈಯಲ್ಲಿವೆ.

ಇಂದೋರಿ ಇಶ್ಕ್, ಹಾಫ್ ಟಿಕೆಟ್ ಸಿನಿಮಾ ಖ್ಯಾತಿಯ ಸಮಿತ್ ಕಕ್ಕಡ್ ‘ಧಾರಾವಿ ಬ್ಯಾಂಕ್’ ವೆಬ್ ಸೀರೀಸ್ ನಿರ್ದೇಶನ  ಮಾಡಿದ್ದಾರೆ. ಚಿತ್ರದ ಲೀಡ್ ರೋಲ್ ಗಳಲ್ಲಿ ಸುನಿಲ್ ಶೆಟ್ಟಿ ಹಾಗೂ ವಿವೇಕ್ ಒಬೇರಾಯ್ ನಟಿಸಿದ್ದಾರೆ. ಟ್ರೇಲರ್ ಬಿಡುಗಡೆಯಾಗಿ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದ್ದು  ನವೆಂಬರ್ 19ರಂದು MX ಪ್ಲೇಯರ್ ನಲ್ಲಿ ವೆಬ್ ಸೀರೀಸ್  ಬಿಡುಗಡೆಯಾಗುತ್ತಿದೆ.

PPeepal Media Desk

Peepal Media Desk

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು