ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹೊಂದಿಸಿ ಬರೆಯಿರಿ ಮಧುರ ಹಾಡು ಬದುಕಿ ಸುಮ್ಮನೆ

PPeepal Media

Peepal Media • ಸಿನಿಮಾ

• 1 ನಿಮಿಷದ ಓದು

ಹೊಂದಿಸಿ ಬರೆಯಿರಿ ಮಧುರ ಹಾಡು ಬದುಕಿ ಸುಮ್ಮನೆ

ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಹೊಂದಿಸಿ ಬರೆಯಿರಿ’ ಸಿನಿಮಾ ಸಾಕಷ್ಟು ವಿಶೇಷತೆಗಳಿಂದ ಗಮನಸೆಳೆಯುತ್ತಿದೆ. ತಾರಾಗಣ, ಕಂಟೆಂಟ್, ಕ್ವಾಲಿಟಿ , ಟೀಸರ್ ಹಾಗೂ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಸಿನಿಮಾದಿಂದ ಈಗ ‘ಬದುಕಿ ಸುಮ್ಮನೆ’ ಎಂಬ ಮೆಲೋಡಿ ಹಾಡು ಬಿಡುಗಡೆಯಾಗಿದೆ.

ರಾಮೇನಹಳ್ಳಿ ಜಗನ್ನಾಥ್ ಅರ್ಥಪೂರ್ಣವಾಗಿ ರಚಿಸಿರುವ ಹಾಡಿಗೆ ಜೋ ಕೋಸ್ಟ ಅದ್ಭುತ ಸಂಗೀತ ನೀಡುವುದರ ಜೊತೆಗೆ ಹಾಡಿಗೆ ಧ್ವನಿಯಾಗಿದ್ದಾರೆ. ಗುಳ್ಟು ಖ್ಯಾತಿಯ ನವೀನ್ ಹಾಗೂ ಕೆಜಿಎಫ್ ಸಿನಿಮಾದಲ್ಲಿ ರಾಕಿಭಾಯ್ ಅಮ್ಮನಾಗಿ ನಟಿಸಿದ್ದ ಅರ್ಚನಾ ಜೋಯಿಸ್  ಕೆ. ಜಿ. ಎಫ್ ನಂತರ ಹೊಂದಿಸಿ ಬರೆಯಿರಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪರಿಸ್ಥಿತಿಗಳನ್ನು ಹೊಂದಿಕೊಂಡು ಸಾಗುವ ಬದುಕಿನ ಪಯಣದ ‘ಹೊಂದಿಸಿ ಬರೆಯಿರಿ’ ಸಿನಿಮಾ ಏಳು ಯುವಕ-ಯುವತಿಯರ ಪ್ರೇಮಕಥೆ ಹೊಂದಿದೆ.

ಈಗಾಗಲೇ ಹೊಂದಿಸಿ ಬರೆಯಿರಿ ಸಿನಿಮಾದ ಶೂಟಿಂಗ್ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಟಗರು ಖ್ಯಾತಿಯ ಮಾಸ್ತಿ, ಪೊಗರು ಖ್ಯಾತಿಯ ಪ್ರಶಾಂತ್ ರಾಜಪ್ಪ ಹಾಗೂ ಜಗನ್ನಾಥ್ ಸೇರಿದಂತೆ ಮೂವರು ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. ‘ಗುಳ್ಟು’ ಚಿತ್ರಕ್ಕೆ ಸಿನಿಮಾಟೋಗ್ರಫಿ ಮಾಡಿದ್ದ ಶಾಂತಿ ಸಾಗರ್‌ ಈ ಚಿತ್ರಕ್ಕೆ ಕ್ಯಾಮೆರಾ ಹಿಡಿದಿದ್ದಾರೆ.

ಈ ಚಿತ್ರವನ್ನು “ಸಂಡೇ ಸಿನಿಮಾಸ್ “ಬ್ಯಾನರ್ ನಡಿ ರಾಮೇನಹಳ್ಳಿ ಜಗನ್ನಾಥ್ ಹಾಗೂ ಅವರ ಸ್ನೇಹಿತರು ನಿರ್ಮಾಣ ಮಾಡಿದ್ದು, ಚೂರಿಕಟ್ಟೆ ಖ್ಯಾತಿಯ ಪ್ರವೀಣ್, ಐಶಾನಿ ಶೆಟ್ಟಿ, ಸಂಯುಕ್ತ ಹೊರನಾಡು, ಗಜಾನನ ಅಂಡ್ ಗ್ಯಾಂಗ್ ಖ್ಯಾತಿಯ ಶ್ರೀಮಹಾದೇವ್, ಗಾಳಿಪಟ ಚಿತ್ರ ಖ್ಯಾತಿಯ ಭಾವನಾರಾವ್ ಹೀಗೆ ಹಲವು ಪ್ರತಿಭೆಗಳು ಅಭಿನಯಿಸಿದ್ದಾರೆ.

PPeepal Media

Peepal Media

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು