ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹೊಯ್ಸಳನ ಮಾರ್ಚ್ ಫಾಸ್ಟ್, ಡಾಲಿ ಚಿತ್ರ 2023 ಮಾರ್ಚ್ 30ಕ್ಕೆ ಬಿಡುಗಡೆ

PPeepal Media

Peepal Media • ಸಿನಿಮಾ

• 1 ನಿಮಿಷದ ಓದು

ಹೊಯ್ಸಳನ ಮಾರ್ಚ್ ಫಾಸ್ಟ್, ಡಾಲಿ ಚಿತ್ರ 2023 ಮಾರ್ಚ್ 30ಕ್ಕೆ ಬಿಡುಗಡೆ

ಹೊಸಬರ ಚಿತ್ರಗಳು ಮುಂದಿನ ವಾರ ಬಿಡುಗಡೆ ಇದ್ದರೂ ಗೊತ್ತೇ ಆಗದ ಚಿತರರಂಗದಲ್ಲಿ ಸ್ಟಾರ್ ನಟರ ಚಿತರಗಳು ಸಾಕಷ್ಟು ಮುಂಚೆಯೇ ಬಿಡುಗಡೆಯ ದಿನಾಂಕ ಘೋಷಿಸುತ್ತವೆ.ಅದೇ ಟ್ರೆಂಡ್ ನಲ್ಲಿ ಮುಂದಿನ ವರ್ಷ ದ ಬಿಡುಗಡೆಯ ದಿನಾಂಕ ಹೊತ್ತು ಬಂದಿದ್ದಾನೆ ಹೊಯ್ಸಳ.

ಹೌದು, ವಿಭಿನ್ನ‌ ಪಾತ್ರಗಳ ಮೂಲಕ ಕನ್ನಡಿಗರ ಮನಗೆದ್ದಿರುವ ನಟ ಡಾಲಿ ಧನಂಜಯ ನಾಯಕರಾಗಿ ಅಭಿನಯಿಸುತ್ತಿರುವ, ಬಹು ನಿರೀಕ್ಷಿತ “ಹೊಯ್ಸಳ” ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

 30.3.2023 ರಂದು ಈ ಚಿತ್ರ ಬಿಡುಗಡೆಯಾಗಲಿದೆ. ಅಂದು ಶ್ರೀರಾಮನವಮಿ ಶುಭದಿನ ಕೂಡ. ಚಿತ್ರಕ್ಕೆ ಮೈಸೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದ್ದು, ಈಗ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ.

 ಡಾಲಿ ಧನಂಜಯ ಈ ಚಿತ್ರದಲ್ಲಿ ಗುರುದೇವ ಹೊಯ್ಸಳ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಮೃತ ಅಯ್ಯಂಗಾರ್ ಈ ಚಿತ್ರದ ನಾಯಕಿ. ಅಚ್ಯುತಕುಮಾರ್, ಪ್ರತಾಪ್ ನಾರಾಯಣ್, ನವೀನ್ ಶಂಕರ್, ಅವಿನಾಶ್ ಕೆ.ಜಿ.ಎಫ್, ರಾಘು ಶಿವಮೊಗ್ಗ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ವಿಜಯ್ ಕಿರಗಂದೂರು ಅರ್ಪಿಸುತ್ತಿರುವ ಈ ಚಿತ್ರವನ್ನು ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿದ್ದಾರೆ. “ರತ್ನನ ಪ್ರಪಂಚ” ದ ನಂತರ ಕೆ.ಆರ್.ಜಿ ಸ್ಟುಡಿಯೋಸ್ ಹಾಗೂ ಧನಂಜಯ ಅವರ ಕಾಂಬಿನೇಶನ್ ನಲ್ಲಿ ಬರುತ್ತಿರುವ ಎರಡನೇ ಚಿತ್ರ “ಹೊಯ್ಸಳ”. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ವಿಜಯ್ ನಾಗೇಂದ್ರ ನಿರ್ದೇಶಿಸುತ್ತಿದ್ದಾರೆ. ವಿಜಯ್ ನಾಗೇಂದ್ರ ಈ ಹಿಂದೆ ಗಣೇಶ್ ಅಭಿನಯದ “ಗೀತಾ” ಚಿತ್ರವನ್ನು ನಿರ್ದೇಶನ ಮಾಡಿದ್ದರು. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ “ಹೊಯ್ಸಳ” ಚಿತ್ರಕ್ಕಿದೆ.

PPeepal Media

Peepal Media

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು