ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜೂನ್ ನಲ್ಲಿ ತೆರೆಗೆ ಬರ್ತಿದೆ ಕಮಲ್ ಹಾಸನ್-ಶಂಕರ್ ಜೋಡಿಯ ಇಂಡಿಯನ್ ಪಾರ್ಟ್-2

PPeepal Media Desk

Peepal Media Desk ಸಿನಿಮಾ

• 1 ನಿಮಿಷದ ಓದು

ಜೂನ್ ನಲ್ಲಿ ತೆರೆಗೆ ಬರ್ತಿದೆ ಕಮಲ್ ಹಾಸನ್-ಶಂಕರ್ ಜೋಡಿಯ ಇಂಡಿಯನ್ ಪಾರ್ಟ್-2

ಉಳಗನಾಯಗನ್ ಕಮಲ್ ಹಾಸನ್ ಹಾಗೂ ದುಬಾರಿ ನಿರ್ದೇಶಕ ಎಂಬ ಖ್ಯಾತಿ ಪಡೆದಿರುವ ಕಮಲ್ ಹಾಸನ್ ಜೋಡಿಯ ಬಹು ನಿರೀಕ್ಷಿತ ಸಿನಿಮಾ ಇಂಡಿಯನ್-2. 1996ರಲ್ಲಿ ‘ಇಂಡಿಯನ್​’ ಸಿನಿಮಾ ಬಿಡುಗಡೆಯಾಗಿ ಸೂಪರ್​ ಹಿಟ್​ ಆಗಿತ್ತು. ಸೇನಾಪತಿ ಪಾತ್ರದಲ್ಲಿ ಕಮಲ್​ ಹಾಸನ್​ ಅವರು ಮಿಂಚಿದ್ದರು. ಅದರ ಮುಂದುವರಿದ ಭಾಗವಾಗಿ ‘ಇಂಡಿಯನ್ 2’ ಸಿನಿಮಾ ಮೂಡಿಬರುತ್ತಿದೆ.

ಸಣ್ಣದೊಂದು ಝಲಕ್ ಮೂಲಕ ಭಾರೀ ನಿರೀಕ್ಷೆ ಹೆಚ್ಚಿಸಿರುವ ಇಂಡಿಯನ್ -2 ಸಿನಿಮಾಗೆ ಚಿತ್ರಪ್ರೇಮಿಗಳು ನಿರೀಕ್ಷೆಯಿಂದ ಎದುರು ನೋಡುತ್ತಿದ್ದಾರೆ. ಇದೀಗ ಸೇನಾಪತಿ ಪುನರ್ ಆಗಮನಕ್ಕೆ ಸಜ್ಜಾಗಿದ್ದು, ಜೂನ್ ತಿಂಗಳಲ್ಲಿ ಕಮಲ್ ಹಾಗೂ ಶಂಕರ್ ಜೋಡಿಯ ಚಿತ್ರ ತೆರೆಗೆ ಬರ್ತಿದೆ. ಆದರೆ ಯಾವ ದಿನ ಇಂಡಿಯನ್ ಸೀಕ್ವೆಲ್ ಬಿಡುಗಡೆಯಾಗಲಿದೆ ಅನ್ನೋದನ್ನು ಚಿತ್ರತಂಡ ರಿವೀಲ್ ಮಾಡಿಲ್ಲ.

ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಅವರು ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಪ್ರತಿಷ್ಠಿತ ‘ಲೈಕಾ ಪ್ರೊಡಕ್ಷನ್ಸ್’ ಮತ್ತು ‘ರೆಡ್ ಜೈಂಟ್ ಮೂವೀಸ್’ ಸಂಸ್ಥೆಗಳ ಮೂಲಕ ‘ಇಂಡಿಯನ್ 2’ ಸಿನಿಮಾ ನಿರ್ಮಾಣವಾಗಿದೆ.

ಹಿರಿಯ ಸ್ವಾತಂತ್ರ್ಯ ಹೋರಾಟಗಾರನು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಹಾನಿಯನ್ನು ಈ ಸಿನಿಮಾ ಒಳಗೊಂಡಿದೆ. ಕಮಲ್​ ಹಾಸನ್​ ಮಾತ್ರವಲ್ಲದೇ ಅನೇಕ ಜನಪ್ರಿಯ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಕಾಜಲ್ ಅಗರ್ವಾಲ್, ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್, ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಶನ್ ಗ್ರೋವರ್, ವಿವೇಕ್, ಸಮುದ್ರಖನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೆಹಲಿ ಗಣೇಶ್, ಗುರು ಸೋಮಸುಂದರಂ, ಜಯಪ್ರಕಾಶ್, ವೆನ್ನೆಲ ಕಿಶೋರ್, ಮನೋಬಾಲಾ, ದೀಪಾ ಶಂಕರ್ ಮುಂತಾದವರು ನಟಿಸಿದ್ದಾರೆ.

PPeepal Media Desk

Peepal Media Desk

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು