ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

‘ಕಂಬ್ಳಿಹುಳ’ ಸಿನಿಮಾ ನೋಡಿ ನಿರ್ದೇಶಕ ಸಿಂಪಲ್ ಸುನಿ ಫಿಧಾ : ಪ್ರೇಕ್ಷಕರಿಗೆ ಹೊಸ ಆಫರ್ ಘೋಷಣೆ

PPeepal Media Desk

Peepal Media Desk ಸಿನಿಮಾ

• 1 ನಿಮಿಷದ ಓದು

‘ಕಂಬ್ಳಿಹುಳ’ ಸಿನಿಮಾ ನೋಡಿ ನಿರ್ದೇಶಕ ಸಿಂಪಲ್ ಸುನಿ ಫಿಧಾ : ಪ್ರೇಕ್ಷಕರಿಗೆ ಹೊಸ ಆಫರ್ ಘೋಷಣೆ

ಬೆಂಗಳೂರು : ನವೆಂಬರ್ 4ರಂದು ರಾಜ್ಯಾದ್ಯಂತ ಬಿಡುಗಡೆಯಾದ ‘ಕಂಬ್ಳಿಹುಳ’ ಸಿನಿಮಾ ಪ್ರೇಕ್ಷಕ ಪ್ರಭುಗಳಿಂದ ಭರ್ಜರಿ ರೆಸ್ಪಾನ್ಸ್ ಗಿಟ್ಟಿಸಿಕೊಂಡಿತ್ತು. ಹೊಸಬರ ಸಿನಿಮಾವನ್ನು, ಹೊಸತನವನ್ನು ಚಿತ್ರ ರಸಿಕರು ಒಪ್ಪಿ ಅಪ್ಪಿಕೊಂಡಿದ್ದಾರೆ. ಮಲೆನಾಡಿನ ಪ್ರೇಮಕಥೆಯೊಂದನ್ನು ತೆರೆ ಮೇಲೆ ಸೊಗಸಾಗಿ ಕಟ್ಟಿಕೊಟ್ಟ ನವ ನಿರ್ದೇಶಕ ನವನ್ ಶ್ರೀನಿವಾಸ್ ಪ್ರರಿಶ್ರಮಕ್ಕೆ ಸ್ಯಾಂಡಲ್ ವುಡ್ ನಟ ನಟಿಯರೂ ಫಿಧಾ ಆಗಿದ್ದರು, ಎಲ್ಲರೂ ಸಿನಿಮಾ ನೋಡಲೇ ಬೇಕು ಎಂದು ಮನದುಂಬಿ ಹೊಗಳಿದ್ದರು. ಇದೀಗ ಸಿನಿಮಾ ತಂಡಕ್ಕೆ ಖ್ಯಾತ ನಿರ್ದೇಶಕ ಸಿಂಪಲ್ ಸುನಿ ಕೂಡ ಸಾಥ್ ನೀಡಿದ್ದು ಪ್ರೇಕ್ಷಕರಿಗೆ ಹೊಸ ಆಫರ್ ನೀಡಿದ್ದಾರೆ.

ಹೌದು, ನಿರ್ದೇಶಕ ಸಿಂಪಲ್ ಸುನಿ ‘ಕಂಬ್ಳಿಹುಳ’ ಸಿನಿಮಾ ನೋಡಿ ಫಿಧಾ ಆಗಿದ್ದಾರೆ. ಕೇವಲ ಫಿದಾ ಆಗಿಲ್ಲ ಸಿನಿಮಾ ನೋಡಿ ಹಾಡಿ ಹೊಗಳಿದ್ದಾರೆ. ಇಡೀ ಚಿತ್ರತಂಡಕ್ಕೆ ಬೆಂಬಲವಾಗಿ ನಿಂತಿದ್ದಾರೆ. ಕಂಬ್ಳಿಹುಳ ಸಿನಿಮಾ ನೋಡಿ ಬರುವವರಿಗೆ ಆಫರ್ ಕೂಡ ನೀಡಿದ್ದಾರೆ. ಅಷ್ಟರ ಮಟ್ಟಿಗೆ ಈ ಸಿನಿಮಾ ಸಿನಿಮಾ ಸಿಂಪಲ್ ಸುನಿ ಮನಸ್ಸಿಗೆ ಹಿಡಿಸಿದ್ದು, ಮನ ಸೆಳೆದಿದೆ. ಕಂಬ್ಳಿಹುಳ ಸಿನಿಮಾ ಸೆಕೆಂಡ್ ಹಾಫ್ ಮುಗಿಸಿ ಚಿತ್ರಮಂದಿರದಿಂದ ಹೊರಬರುವ ಪ್ರೇಕ್ಷಕ ಪ್ರಭುಗಳು ಸಿನಿಮಾ ಚೆನ್ನಾಗಿಲ್ಲ ಅಂದ್ರೆ ಅವರು ತೆಗೆದುಕೊಂಡ ಟಿಕೆಟ್ ನ ಅರ್ಧಹಣವನ್ನು ವಾಪಾಸ್ಸು ಮಾಡುವುದಾಗಿ ಹೇಳಿದ್ದಾರೆ. ಈ ಆಫರ್ ಮುಂದಿನ ಮೂರು ದಿನಗಳು ಮಾತ್ರ ಲಭ್ಯವಿದೆ ಎಂದು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿ ಕೊಂಡಿದ್ದಾರೆ. ಸಿಂಪಲ್ ಸುನಿ ಸಿನಿಮಾ ಮೇಲೆ ತೋರಿಸಿರುವ ಪ್ರೀತಿಕಂಡು ಸಿನಿಮಾ ತಂಡ ಕೂಡ ಸಂತಸಗೊಂಡಿದೆ.

ಪ್ರೇಕ್ಷಕ ಪ್ರಭುಗಳು ಕೂಡ ಸಿನಿಮಾ ನೋಡಿ ಎಂಜಾಯ್ ಮಾಡ್ತಿದ್ದಾರೆ. ಈಗಾಗಲೇ ನೋಡಿದವರು ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಬರೆದುಕೊಳ್ಳುತ್ತಿದ್ದಾರೆ. ಸಪೋರ್ಟ್ ಕಂಬ್ಳಿಹುಳ, ನಮ್ಮ ಮಣ್ಣಿನ ಸಿನಿಮಾ ಎಂದು ಸೋಶಿಯಲ್ ಮೀಡಿಯಾದಲ್ಲಿ ಹ್ಯಾಶ್ ಟ್ಯಾಗ್ ಬಳಸಿ ಟ್ರೆಂಡ್ ಮಾಡುತ್ತಿದ್ದಾರೆ. ಇದರಲ್ಲೇ ಅರ್ಥ ಮಾಡಿಕೊಳ್ಳಬೇಕು ಸಿನಿಮಾ ಅದೆಷ್ಟು ಚೆನ್ನಾಗಿದೆ ಅನ್ನೋದು. ಚಿತ್ರದ ಬಗೆಗೆ ಎಲ್ಲರೂ ತೋರಿಸುತ್ತಿರುವ ಪ್ರೀತಿ, ಸಪೋರ್ಟ್ ಕಂಡು ಸಿನಿಮಾ ತಂಡ ಕೂಡ ಸಂತಸ ವ್ಯಕ್ತಪಡಿಸಿದೆ.

ನವ ಪ್ರತಿಭೆ ನವನ್ ಶ್ರೀನಿವಾಸ್ ನಿರ್ದೇಶನದಲ್ಲಿ ಮೂಡಿ ಬಂದ ಈ ಚಿತ್ರದಲ್ಲಿ ಅಂಜನ್ ನಾಗೇಂದ್ರ ಹಾಗೂ ಅಶ್ವಿತಾ ಆರ್ ಹೆಗ್ಡೆ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. ಗ್ರೇ ಸ್ಕ್ವೇರ್ ಸ್ಟುಡಿಯೋಸ್ ಬ್ಯಾನರ್ ನಡಿ ಸಿನಿಮಾ ನಿರ್ಮಾಣವಾಗಿದ್ದು, ಸತೀಶ್ ರಾಜೇಂದ್ರ ಛಾಯಾಗ್ರಾಹಣ, ಜಿತೇಂದ್ರ ನಾಯಕ ಮತ್ತು ರಾಘವೇಂದ್ರ ಟಿಕೆ ಸಂಕಲನ, ಶಿವ ಪ್ರಸಾದ್ ಸಂಗೀತ ನಿರ್ದೇಶನ ‘ಕಂಬ್ಳಿಹುಳ’ ಚಿತ್ರಕ್ಕಿದೆ.

PPeepal Media Desk

Peepal Media Desk

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು