ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕೇರಳದ ಹೇಮಾ ಆಯೋಗದ ರೀತಿಯಲ್ಲಿ ಸಮಿತಿ ರಚಿಸುವ ಕುರಿತು ಫೈರ್‌ ಸಮಿತಿಗೆ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

PPeepal Media

Peepal Media • ಸಿನಿಮಾ

• 1 ನಿಮಿಷದ ಓದು

ಕೇರಳದ ಹೇಮಾ ಆಯೋಗದ ರೀತಿಯಲ್ಲಿ ಸಮಿತಿ ರಚಿಸುವ ಕುರಿತು ಫೈರ್‌ ಸಮಿತಿಗೆ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕನ್ನಡ ಚಿತ್ರರಂಗದಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ನಿರ್ಮಿಸುವುದು ಹಾಗೂ ಇತರ ಸಮಸ್ಯೆಗಳ ಅಧ್ಯಯನಕ್ಕಾಗಿ ಸಮಿತಿ ರಚಿಸುವ ಕುರಿತಂತೆ ಸವಿಸ್ತಾರ ಚರ್ಚೆಯ ಬಳಿಕ ನಿರ್ಧಾರ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಫೈರ್ ತಂಡಕ್ಕೆ ಭರವಸೆ ನೀಡಿದ್ದಾರೆ.

ಚಿತ್ರರಂಗದಲ್ಲಾಗುತ್ತಿರುವ ತಾರತಮ್ಯ ಹಾಗೂ ಕಿರುಕುಳದ ತನಿಖೆಗಾಗಿ ಕೇರಳದ ಮಾದರಿಯಲ್ಲಿ ನ್ಯಾಯಾಂಗ ಆಯೋಗ ರಚಿಸಬೇಕು ಎಂದು ಚಿತ್ರರಂಗದಲ್ಲಿನ ಹಕ್ಕುಗಳು ಹಾಗೂ ಸಮಾನತೆಗಾಗಿ ಶ್ರಮಿಸುತ್ತಿರುವ ಫೈರ್ ಸಂಘ ಟನೆ ಮುಖಂಡರು ಇಂದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ನೀಡಿದರು.

ಇದಕ್ಕೆ ಸಕಾರಾತಕವಾಗಿ ಸ್ಪಂದಿಸಿದ ಸಿದ್ದರಾಮಯ್ಯ ಅವರು, ಮನವಿಯನ್ನು ಸ್ವೀಕರಿಸಿ ಇದು ಗಂಭೀರವಾದ ವಿಚಾರ, ಮತ್ತೊಮೆ ನಿಮ ತಂಡದ ಜೊತೆ ಸವಿಸ್ತಾರವಾದ ಚರ್ಚೆ ನಡೆಸುತ್ತೇನೆ. ನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.ಹಿರಿಯ ಪತ್ರಕರ್ತೆ ಡಾ. ವಿಜಯಮ, ಫೈರ್ ಸಂಘಟನೆಯ ಕಾರ್ಯದರ್ಶಿಯಾದ ನಟ ಚೇತನ್, ನಟಿಯರಾದ ಶೃತಿ ಹರಿಹರನ್ ಹಾಗೂ ನೀತು ಶೆಟ್ಟಿ ಒಳಗೊಂಡ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು.

ಕೇರಳದ ಮಲಯಾಳಂ ಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಹಿಂಸೆ ಮತ್ತು ಇತರ ಸಮಸ್ಯೆಗಳನ್ನು ನ್ಯಾಯಮೂರ್ತಿ ಹೇಮಾ ಅವರ ಸಮಿತಿ ಬಹಿರಂಗಪಡಿಸಿದೆ. ಕನ್ನಡ ಚಿತ್ರರಂಗದಲ್ಲೂ ಈ ರೀತಿಯ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ದೇಶದಲ್ಲೇ ಮೊದಲ ಬಾರಿಗೆ ಫೈರ್ ಸಂಸ್ಥೆ ಕನ್ನಡ ಚಿತ್ರೋದ್ಯಮದಲ್ಲಿ ಆತಂರಿಕ ದೂರುಗಳ ಸಮಿತಿಯನ್ನು ರಚಿಸಿದೆ. ಚಲನಚಿತ್ರೋದ್ಯಮದಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ನಿರ್ಮಿಸಲು ಪ್ರಯತ್ನಿಸುತ್ತದೆ.

ಲೈಂಗಿಕ ಕಿರುಕುಳ ಸೇರಿದಂತೆ ಕನ್ನಡ ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ತನಿಖೆ ಮಾಡಬೇಕು, ಎಲ್ಲಾ ಮಹಿಳೆಯರಿಗೂ ಸುರಕ್ಷಿತ ಹಾಗೂ ನ್ಯಾಯಯುತ ವಾತಾವರಣ ಸೃಷ್ಟಿಸಲು ಅಗತ್ಯ ನಿಯಮಾವಳಿಗಳನ್ನು ಮಾಡಿಕೊಡಬೇಕು ಎಂದು ಮನವಿ ಮಾಡಲಾಗಿತ್ತು.

ಸುಪ್ರೀಂಕೋರ್ಟ್ ಅಥವಾ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿತ್ತು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಟಿ ಶೃತಿ ಹರಿಹರನ್, ಕನ್ನಡ ಚಿತ್ರರಂಗದಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ನಿರ್ಮಿಸಬೇಕಿದೆ. ಲೈಂಗಿಕ ಕಿರುಕುಳ ಎಂಬುದು ಒಂದು ಭಾಗ ಮಾತ್ರ. ಅದಕ್ಕಿಂತಲೂ ಮುಖ್ಯವಾಗಿ ಕೆಲಸ ಮಾಡಲು ಪೂರಕವಾದ ವಾತಾವರಣ ಸೃಷ್ಟಿಸಬೇಕಿದೆ. ಉತ್ತಮ ಶಾಚಾಲಯ ವ್ಯವಸ್ಥೆ, ಸುರಕ್ಷಿತ ಸಾರಿಗೆ ಹಾಗೂ ಭದ್ರತೆಗಾಗಿ ಅಗತ್ಯ ನಿಯಮಾವಳಿಗಳನ್ನು ರೂಪಿಸಬೇಕಿದೆ ಎಂದು ಹೇಳಿದರು.

ನೀತು ಶೆಟ್ಟಿ ಮಾತನಾಡಿ, ಚಿತ್ರರಂಗ ಹೆಣ್ಣುಮಕ್ಕಳಿಗೆ ಕೆಲಸ ಮಾಡಲು ಸುಂದರ ತಾಣವಾಗಬೇಕು. ಲೈಂಗಿಕ ಕಿರುಕುಳ ಎಂಬುದು ಪ್ರತ್ಯೇಕ ವಿಚಾರ. ಚೆಕ್‌ ಬೌನ್ಸ್ ಆದರೆ ಅದರ ಹಣ ವಾಪಸ್ ಬರುತ್ತದೆಯೋ, ಇಲ್ಲವೋ ಎಂಬ ಆತಂಕ ಕಾಡುತ್ತದೆ. ನಮ ಚಿತ್ರರಂಗ ಎಂಬ ಕಾರಣಕ್ಕೆ ಎಷ್ಟು ದಿನ ಸಹಿಸಿಕೊಳ್ಳಬೇಕು. ಕಾರ್ಪೋರೇಟ್‌ ವಲಯದಲ್ಲಿ ವಲಯದಲ್ಲಿ ಈ ರೀತಿ ನಡೆಯುವುದಿಲ್ಲ ಎಂದು ಅವರು ಹೇಳಿದರು

ಸುರಕ್ಷಿತೆಯ ವಿಷಯ ಬಂದಾಗ ಕ್ಯಾರವಾನ್‌ ಒಳಗೆ ಏನು ನಡೆಯಿತು?, ಯಾರು ಚಿತ್ರೀಕರಿಸಿದರು?, ಕೆಟ್ಟ ಕಾಮೆಂಟ್ ಮಾಡಿದರು? ಎಂಬೆೆಲ್ಲಾ ಪ್ರಕರಣಗಳೂ ವರದಿಯಾಗುತ್ತಿವೆ. ಹೀಗಾಗಿ ಹೆಣ್ಣು ಮಕ್ಕಳಿಗೆ ಶಾಂತಿಯುತವಾದ ವಾತಾವರಣ ನಿರ್ಮಾಣವಾಗಬೇಕಿದೆ ಎಂದರು.


ಕಡಿಮೆ ಅವಧಿಯಲ್ಲಿ ಸರ್ಕಾರಕ್ಕೆ ಮನವಿ ನೀಡಲು ನಿರ್ಧಾರ ತೆಗೆದುಕೊಳ್ಳಲಾಯಿತು. 162 ಮಂದಿ ಮನವಿ ಪತ್ರಕ್ಕೆ ಸಹಿ ಹಾಕಿದರು. ಬಹಳಷ್ಟು ಜನ ಇದಕ್ಕೆ ಧ್ವನಿಯಾಗಲಿದ್ದಾರೆ ಎಂದು ಹೇಳಿದರು.

PPeepal Media

Peepal Media

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು