ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

‘ಕಾಂತಾರ’ ಮೆಚ್ಚಿದ ಪ್ಯಾನ್ ಇಂಡಿಯಾ ಸ್ಟಾರ್, ಹೊಂಬಾಳೆ ಫಿಲ್ಮ್ ಗೆ ಪ್ರಭಾಸ್ ಪ್ರಶಂಸೆ

PPeepal Media

Peepal Media ಸಿನಿಮಾ

• 1 ನಿಮಿಷದ ಓದು

‘ಕಾಂತಾರ’ ಮೆಚ್ಚಿದ ಪ್ಯಾನ್ ಇಂಡಿಯಾ ಸ್ಟಾರ್, ಹೊಂಬಾಳೆ ಫಿಲ್ಮ್ ಗೆ ಪ್ರಭಾಸ್ ಪ್ರಶಂಸೆ

ರಿಷಭ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ‘ಕಾಂತಾರ’, ಶುಕ್ರವಾರವಷ್ಟೇ ಜಗತ್ತಿನಾದ್ಯಂತ ಬಿಡುಗಡೆಯಾಗಿ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಈ ಮಧ್ಯೆ, ಪ್ಯಾನ್ ಇಂಡಿಯಾ ಸ್ಟಾರ್ ಮತ್ತು ‘ಬಾಹುಬಲಿ’ ಖ್ಯಾತಿಯ ಪ್ರಭಾಸ್ ಸಹ ಈ ಚಿತ್ರವನ್ನು ನೋಡಿ ಪ್ರಶಂಸೆ ಮಾಡಿದ್ದಾರೆ.

ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸಂತೋಷದಿಂದ ಬರೆದುಕೊಂಡಿರುವ ಪ್ರಭಾಸ್, ‘ಕಾಂತಾರ’ ಚಿತ್ರ ನೋಡಿ ಬಹಳ ಎಂಜಾಯ್ ಮಾಡಿದೆ. ಅದರಲ್ಲೂ ಕ್ಲೈಮ್ಯಾಕ್ಸ್ ಅದ್ಭುತವಾಗಿತ್ತು. ಇಂಥದ್ದೊಂದು ಚಿತ್ರವನ್ನು ಕಟ್ಟಿಕೊಟ್ಟ ಚಿತ್ರತಂಡಕ್ಕೆ ಶುಭವಾಗಲಿ ಮತ್ತು ಚಿತ್ರ ದೊಡ್ಡ ಯಶಸ್ಸು ಗಳಿಸಲಿ’ ಎಂದು ಹಾರೈಸಿದ್ದಾರೆ.

‘ಕೆಜಿಎಫ್’, ’ಯುವರತ್ನ’ ಮುಂತಾದ ಹಿಟ್ ಚಿತ್ರಗಳನ್ನು ನಿರ್ಮಿಸಿರುವ ವಿಜಯ್ ಕುಮಾರ್ ಕಿರಗಂದೂರು, ‘ಕಾಂತಾರ’ ಚಿತ್ರವನ್ನು ತಮ್ಮ ಹೊಂಬಾಳೆ ಫಿಲಂಸ್ ಅಡಿಯಲ್ಲಿ ನಿರ್ಮಿಸಿದ್ದು, ಅದರ ಜೊತೆಗೆ ಪ್ರಭಾಸ್ ಅಭಿನಯದ ‘ಸಲಾರ್’ ಎಂಬ ಪ್ಯಾನ್ ಇಂಡಿಯಾ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಪ್ರಗತಿಯಲ್ಲಿದ್ದು, ಮುಂದಿನ ವರ್ಷ ಬಿಡುಗಡೆಯಾಗಲಿದೆ.

ಪ್ರಭಾಸ್ ಅಲ್ಲದೆ ರಮ್ಯಾ, ರಕ್ಷಿತ್ ಶೆಟ್ಟಿ, ಅಮೂಲ್ಯ ಸೇರಿದಂತೆ ಹಲವಾರು ಸೆಲೆಬ್ರಿಟಿಗಳು ಚಿತ್ರವನ್ನು ನೋಡಿ ಮೆಚ್ಚಿಕೊಂಡಿದ್ದಾರೆ. ಕರಾವಳಿ ಭಾಗದ ವಿಶಿಷ್ಟ ಆಚರಣೆಗಳನ್ನು ಕಟ್ಟಿಕೊಟ್ಟಿರುವ ರೀತಿಯ ಜೊತೆಗೆ, ಕ್ಲೈಮ್ಯಾಕ್ಸ್ ರೂಪಿಸಿರುವ ರೀತಿ ಮತ್ತು ಅದರಲ್ಲಿ ರಿಷಭ್ ಶೆಟ್ಟಿ ನಟಿಸಿರುವ ರೀತಿಯ ಬಗ್ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

‘ಕಾಂತಾರ’, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಘರ್ಷದ ಕಥೆಯಾಗಿದ್ದು, ಈ ಚಿತ್ರದಲ್ಲಿ ರಿಷಭ್ ಶೆಟ್ಟಿ ಜೊತೆಗೆ ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ.

🔸 ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo

ಇದನ್ನೂ ಓದಿ: ಅಣ್ಣಿಗೇರಿಯ ತಲೆ ಬುರುಡೆಗಳು ಮತ್ತು ಅದರ ಹಿಂದಿನ ಕತೆಗಳು

ಪೀಪಲ್‌ ಮೀಡಿಯಾ
ರವಿ ನವಲಹಳ್ಳಿ

PPeepal Media

Peepal Media

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು