ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕೆಜಿಎಫ್ ಕಬ್ಜ ಮಾಡಿದ ಟೀಸರ್, ಮೈಲಾರ ಸುತ್ತಿ ಕೋಲಾರಕ್ಕೆ ಬಂದ್ರು ಚಂದ್ರು

PPeepal Media

Peepal Media • ಸಿನಿಮಾ

• 1 ನಿಮಿಷದ ಓದು

ಕೆಜಿಎಫ್ ಕಬ್ಜ ಮಾಡಿದ ಟೀಸರ್, ಮೈಲಾರ ಸುತ್ತಿ ಕೋಲಾರಕ್ಕೆ ಬಂದ್ರು ಚಂದ್ರು

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ ಅಭಿನಯದ, ಆರ್ ಚಂದ್ರು ನಿರ್ದೇಶಿಸಿರುವ, ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ”ದ ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ. ದಕ್ಷಿಣ ಭಾರತದ ಖ್ಯಾತ ನಟ ರಾಣಾ ದಗ್ಗುಬಾಟಿ “ಕಬ್ಜ” ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ಬಿಡುಗಡೆಯಾದ ಕ್ಷಣದಿಂದಲೇ ಟೀಸರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದ್ದು, ವೀಕ್ಷಣೆಯಲ್ಲಿ ದಾಪುಗಾಲು ಹಾಕುತ್ತಿದೆ.

ಉಪೇಂದ್ರ ಸರ್ ಮುಂದೆ ನಿಂತು  ಮಾತನಾಡುವುದಕ್ಕೆ ಭಯ ಆಗತ್ತೆ. ಅಂತಹ ಅದ್ಭುತ ನಟ ಅವರು. ಖ್ಯಾತ ನಟಿ ಶ್ರೀಯಾ ಶರಣ್ ಸಹ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಆರ್ ಚಂದ್ರು ಮತ್ತು ತಂಡದ ಅದ್ಭುತ ಕೆಲಸ ಟೀಸರ್ ನಲ್ಲಿ ಕಾಣುತ್ತಿದೆ. “ಕಬ್ಜ” ಭರ್ಜರಿ ಯಶಸ್ಸು ಕಾಣಲಿ ಎಂದು ರಾಣಾ ದಗ್ಗುಬಾಟಿ ಹಾರೈಸಿದರು.

ನನಗೆ ಆರ್ ಚಂದ್ರು ಅವರು ಕಥೆ ಹೇಳಲು ಬಂದಾಗ, ಕಥೆ ಕೇಳಿ,  ನಿಜವಾಗಿಯೂ ಈ ರೀತಿ ಮಾಡಲು ಆಗುವುದಾ? ಅಂತಾ ಕೇಳಿದ್ದೆ. ಚಿತ್ರೀಕರಣ ನಡೆಯುತ್ತಿರುವಾಗ ಚಂದ್ರು ಅವರ ಕಾರ್ಯ ವೈಖರಿ ನೋಡಿ ಆಶ್ಚರ್ಯವಾಯಿತು. ಈಗಂತೂ ಟೀಸರ್ ನೋಡಿ ಬಹಳ ಸಂತೋಷವಾಗಿದೆ. ಚಿತ್ರ ಬಿಡುಗಡೆಗೆ  ನಾನು ಕಾತುರದಿಂದ ಕಾಯುತ್ತಿದ್ದೇನೆ. ಹೆಚ್ಚಿನ ಕ್ರೆಡಿಟ್ ಚಂದ್ರು ಅವರಿಗೆ ಸೇರಬೇಕು. ಶ್ರೀಯಾ ಅವರು ಅಭಿನಯ ಕೂಡ ಚೆನ್ನಾಗಿದೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ರಾಣಾ ಅವರಿಗೆ ಧನ್ಯವಾದ ಎಂದರು ರಿಯಲ್ ಸ್ಟಾರ್ ಉಪೇಂದ್ರ.

ಈ ಚಿತ್ರದಲ್ಲಿ ಅಭಿನಯಿಸಿರುವುದಕ್ಕೆ ನನಗೆ ಖುಷಿಯಾಗಿದೆ. ಅದರಲ್ಲೂ ಸೂಪರ್ ಸ್ಟಾರ್ ಉಪೇಂದ್ರ ಅವರ ಜೊತೆ ನಟಿಸಿರುವುದು ಹೆಚ್ಚಿನ ಸಂತೋಷ ತಂದಿದೆ. ತುಂಬಾ ಸಹೃದಯಿ, ಸರಳವ್ಯಕ್ತಿ ಅವರು. ಚಂದ್ರು ಸರ್ ಅವರ ನಿರ್ದೇಶನದ ಬಗ್ಗೆ ಎಷ್ಟು ಹೇಳಿದರು ಕಡಿಮೆ. ನನ್ನ ಪಾತ್ರ‌ ಕೂಡ ತುಂಬಾ ಚೆನ್ನಾಗಿದೆ ಎಂದ ನಾಯಕಿ ಶ್ರೀಯಾ ಶರಣ್, ಟೀಸರ್ ಬಿಡುಗಡೆ ಮಾಡಿದ ರಾಣಾ  ಅವರಿಗೆ ಧನ್ಯವಾದ ತಿಳಿಸಿದರು.

“ಕಬ್ಜ” ನನ್ನ ಕನಸು. ಈ ಹಿಂದೆ “ತಾಜ್ ಮಹಲ್”, ” ಚಾರ್ ಮಿನಾರ್”, “ಮೈಲಾರಿ” ನಂತಹ‌ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದೇನೆ. ಆದರೆ ಇದು ಬೇರೆಯದೆ ತರಹದ ಸಿನಿಮಾ. “ಕಬ್ಜ” ಚಿತ್ರ ಉತ್ತಮವಾಗಿ ಮೂಡಿಬಂದಿದೆ ಅಂದರೆ ಅದು ನನ್ನೊಬ್ಬನಿಂದ ಅಲ್ಲ. ಇಡೀ ತಂಡದಿಂದ. ಅದರಲ್ಲೂ ಉಪೇಂದ್ರ ಸರ್ ಅವರ ಸಹಕಾರ ಅಪಾರ. ಈ ಸಮಯದಲ್ಲಿ ಕಿಚ್ಚ ಸುದೀಪ್ ಅವರನ್ನು ನೆನಪಿಸಿಕೊಳ್ಳಬೇಕು. ನಾನು ಈ ರೀತಿಯ ಪಾತ್ರವಿದೆ ಅಂತ ಹೇಳಿದೆ. ಅವರು ಒಪ್ಪಿಕೊಂಡು ಅಭಿನಯಿಸಿದ್ದಾರೆ. ಈಗಾಗಲೇ ಸಾಕಷ್ಟು ಹೆಸರು ಮಾಡಿರುವ ಶ್ರೀಯಾ ಶರಣ್ ಅವರು ಈ ಚಿತ್ರದಲ್ಲಿ ಅಭಿನಯಿಸಿರುವುದು ಹೆಚ್ಚಿನ ಖುಷಿ ತಂದಿದೆ.  ಟೀಸರ್ ಬಿಡುಗಡೆ ಮಾಡಿಕೊಡಲು ಕೇಳಿದಾಗ ಒಪ್ಪಿ ಬಂದು ಟೀಸರ್ ಬಿಡುಗಡೆ ಮಾಡಿಕೊಟ್ಟಿರುವುದಕ್ಕೆ ದಕ್ಷಿಣ ಭಾರತದ ಖ್ಯಾತ ನಟ ರಾಣಾ ದಗ್ಗುಬಾಟಿ ಅವರಿಗೆ ಹಾಗೂ ಇಂದಿನ ಸಮಾರಂಭಕ್ಕೆ ಆಗಮಿಸಿರುವ ಎಲ್ಲಾ ಅತಿಥಿಗಳಿಗೆ

 ತುಂಬು ಹೃದಯದ ಧನ್ಯವಾದ.  ನಮ್ಮ‌”ಕಬ್ಜ” ಚಿತ್ರ ಏಳು ಭಾಷೆಗಳ ಚಿತ್ರವಲ್ಲ. ಒಟ್ಟು ಒಂಭತ್ತು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ‌ ಎಂದರು ನಿರ್ದೇಶಕ ಹಾಗೂ ನಿರ್ಮಾಪಕ ಆರ್ ಚಂದ್ರು.

PPeepal Media

Peepal Media

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು