ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪ್ರೇಕ್ಷಕರ ಮನಗೆದ್ದ ‘ಖಾಸಗಿ ಪುಟಗಳುʼ

PPeepal Media Desk

Peepal Media Desk ಸಿನಿಮಾ

• 1 ನಿಮಿಷದ ಓದು

<strong>ಪ್ರೇಕ್ಷಕರ </strong><strong>ಮನಗೆದ್ದ ‘</strong><strong>ಖಾಸಗಿ </strong><strong>ಪುಟಗಳುʼ</strong>

ಬೆಂಗಳೂರು: ಸಂತೋಷ್ ಶ್ರೀಕಂಠಪ್ಪ ನಿರ್ದೇಶನದಲ್ಲಿ ಮೂಡಿ ಬಂದ ‘ಖಾಸಗಿ ಪುಟಗಳು’ ಸಿನಿಮಾ ನವೆಂಬರ್ 18ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ಟ್ರೇಲರ್, ಹಾಡುಗಳ ಮೂಲಕ ಪ್ರೇಕ್ಷಕರಲ್ಲಿ ನಿರೀಕ್ಷೆ ಮೂಡಿಸಿದ್ದ ಸಿನಿಮಾ ಚಿತ್ರಮಂದಿರದಲ್ಲಿ ಆ ನಿರೀಕ್ಷೆಯನ್ನು ದುಪ್ಪಟ್ಟುಗೊಳಿಸಿದ್ದು, ಪ್ರೇಕ್ಷಕರಿಂದ ಫುಲ್ ಮಾರ್ಕ್ಸ್ ಗಿಟ್ಟಿಸಿಕೊಂಡ ಈ ಸಿನಿಮಾ  ಇದೀಗ ಎರಡನೇ ವಾರಕ್ಕೆ ಕಾಲಿಡುತ್ತಿದೆ.

ನವೀರಾದ ಪ್ರೇಮಕಥೆಯುಳ್ಳ ‘ಖಾಸಗಿ ಪುಟಗಳು’ ಸಿನಿಮಾ ಕಟೆಂಟ್, ವಿಶ್ಯುವಲ್ಸ್, ಹಾಡುಗಳ ಜೊತೆಗೆ ಕಲಾವಿದರ ಅಭಿನಯದ ಮೂಲಕವೂ ಗಮನ ಸೆಳೆದಿದೆ. ಸಿನಿಮಾ ನೋಡಿದವರು ಮೆಚ್ಚುಗೆ ಮಾತುಗಳನ್ನಾಡುತ್ತಿದ್ದಾರೆ. ಉತ್ತಮ ವಿಮರ್ಶೆ ಹೊತ್ತ ಈ ಚಿತ್ರದ ಬಗ್ಗೆ ಪ್ರೇಕ್ಷಕರು ಕೂಡ ಮೆಚ್ಚುಗೆ ವ್ಯಕ್ತಪಡಿಸಿ ಸೋಶಿಯಲ್ ಮೀಡಿಯಾದಲ್ಲಿ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.  ಹೊಸಬರ ಪ್ರಯತ್ನವನ್ನು ಇನ್ನಷ್ಟು ಜನರಿಗೆ ತಲುಪಿಸುತ್ತಿದ್ದಾರೆ.

ಸ್ಯಾಂಡಲ್ ವುಡ್ ಸೆಲೆಬ್ರೆಟಿಗಳು ಕೂಡ ಈ ಸಿನಿಮಾವನ್ನು ಮೆಚ್ಚಿಕೊಂಡಿದ್ದು, ನಿರ್ದೇಶಕರಾದ ಜಯತೀರ್ಥ, ಬಿ.ಎಂ.ಗಿರಿರಾಜ್, ಗುರುದೇಶ್ ಪಾಂಡೆ, ಸುಜಯ್ ಶಾಸ್ತ್ರಿ, ಶಂಕರ್ ಗುರು ಸಿನಿಮಾ ವೀಕ್ಷಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕೆ.ಜಿ.ಎಫ್ ಖ್ಯಾತಿಯ ಅರ್ಚನಾ ಜೋಯಿಸ್, ಅರ್ಚನಾ ಕೊಟ್ಟಿಗೆ, ಶ್ರೀ ಮಹಾದೇವ್, ಚೈತ್ರಾ ಕೊಟ್ಟೂರ್, ಬ್ರೋ ಗೌಡ ಹೀಗೆ ಹಲವು ನಟ ನಟಿಯರು ಸಿನಿಮಾ ವೀಕ್ಷಿಸಿ ಸೋಶಿಯಲ್ ಮೀಡಿಯಾಗಳಲ್ಲಿ ಸಿನಿಮಾ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ಪ್ರೇಕ್ಷಕರಿಂದ ಮೆಚ್ಚುಗೆ, ಸ್ಯಾಂಡಲ್ ವುಡ್ ಸೆಲೆಬ್ರೆಟಿಗಳಿಂದ ಸಾಥ್ ಹಾಗೂ ಪ್ರಶಂಸೆ ಪಡೆದುಕೊಂಡಿರುವ ಈ ಸಿನಿಮಾ ಇದೀಗ ಎರಡನೇ ವಾರಕ್ಕೆ ಕಾಲಿಟ್ಟಿದೆ. ಚಿತ್ರತಂಡ ಕೂಡ ಸಿನಿಮಾಗೆ ಸಿಗುತ್ತಿರುವ ಪ್ರೀತಿಗೆ ಸಂತಸಗೊಂಡಿದೆ. ಈ ಚಿತ್ರ ಸಂಪೂರ್ಣ ಹೊಸಬರ ಪ್ರಯತ್ನವಾಗಿದ್ದು, ಕಾಲೇಜು ಹುಡುಗನ್ನೊಬ್ಬನ ನವೀರಾದ ಪ್ರೇಮಕಥೆ ಹೊತ್ತುಕೊಂಡಿದೆ. ಚಿತ್ರದಲ್ಲಿ ನಾಯಕನಾಗಿ ವಿಶ್ವ, ನಾಯಕಿಯಾಗಿ ಶ್ವೇತಾ ಡಿಸೋಜ ಅವರು ನಟಿಸಿದ್ದಾರೆ.

ಚೇತನ್ ದುರ್ಗಾ, ನಂದಕುಮಾರ್, ಶ್ರೀಧರ್, ನಿರೀಕ್ಷಾ ಶೆಟ್ಟಿ, ದಿನೇಶ್ ಒಳಗೊಂಡ ತಾರಾಬಳಗ ಚಿತ್ರದಲ್ಲಿದೆ. ಎಸ್ ವಿ ಎಂ ಮೋಶನ್ ಪಿಕ್ಚರ್ ಬ್ಯಾನರ್ ನಡಿ ಮಂಜು ವಿ ರಾಜ್, ವೀಣಾ ವಿ ರಾಜ್, ಮಂಜುನಾಥ್ ಡಿ ಎಸ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.  ವಾಸುಕಿ ವೈಭವ್ ಸಂಗೀತ ನಿರ್ದೇಶನ, ವಿಶ್ವಜಿತ್ ರಾವ್ ಛಾಯಾಗ್ರಹಣ,ರಾಕೇಶ್ ಆಚಾರ್ಯ ಹಿನ್ನೆಲೆ ಸಂಗೀತ, ಆಶಿಕ್ ಕುಸುಗೋಳಿ ಸಂಕಲನ ಚಿತ್ರಕ್ಕಿದೆ.

PPeepal Media Desk

Peepal Media Desk

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು