FTII ಅಧ್ಯಕ್ಷರಾಗಿ BJP ಡಾರ್ಲಿಂಗ್ ಮಾಧವನ್ ಆಯ್ಕೆ
ಲಿಂಕ್ ನಕಲಿಸಲಾಗಿದೆ ✓
ತಮಿಳು, ತೆಲುಗು ಹಾಗೂ ಹಿಂದಿಯಲ್ಲಿ ಗುರುತಿಸಿಕೊಂಡಿರುವ ನಟ ಆರ್.ಮಾಧವನ್ ಅವರು ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ (ಎಫ್‌ಟಿಐಐ) ನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ನಾಮನಿರ್ದೇಶನಗೊಂಡಿದ್ದಾರೆ.
ಇತ್ತೀಚೆಗೆ ಬಿಜೆಪಿಯ ಕಣ್ಮಣಿಯಾಗಿರುವ ಮಾಧವನ್ ಅವರನ್ನು FTII ಅಧ್ಯಕ್ಷರನ್ನಾಗಿ ಕೇಂದ್ರ ನೇಮಿಸಿ ಆದೇಶಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ನಟನಿಗೆ ಶುಭ ಹಾರೈಸಿದ್ದಾರೆ. ಈ ವಿಷಯವನ್ನು ಕೇಂದ್ರ ಸಚಿವರು ಟ್ವಿಟರ್‌ನಲ್ಲಿ ಪ್ರಕಟಿಸಿದ್ದಾರೆ.
ಕೇಂದ್ರ ಸಚಿವರು ಟ್ವಿಟರ್‌ನಲ್ಲಿ ಹೃತ್ಪೂರ್ವಕ ಅಭಿನಂದನೆಗಳನ್ನು ವ್ಯಕ್ತಪಡಿಸುತ್ತಾ, “ಅವರ ಅಪಾರ ಅನುಭವ ಮತ್ತು ದೃಢವಾದ ನೈತಿಕತೆಯು ಸಂಸ್ಥೆಯನ್ನು ಶ್ರೀಮಂತಗೊಳಿಸುತ್ತದೆ, ಧನಾತ್ಮಕ ಬದಲಾವಣೆಗಳನ್ನು ತರುತ್ತದೆ ಮತ್ತು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತದೆ” ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ. ಹಿರಿಯ ನಟ ಆರ್ ಮಾಧವನ್ ಅವರ ಸ್ವಯಂ ನಿರ್ದೇಶನದ ಚಿತ್ರ ‘ರಾಕೆಟ್ರಿ: ದಿ ನಂಬಿ ಎಫೆಕ್ಟ್’ ಇತ್ತೀಚೆಗೆ ಅತ್ಯುತ್ತಮ ಚಲನಚಿತ್ರಕ್ಕಾಗಿ ರಾಷ್ಟ್ರ ಪ್ರಶಸ್ತಿಯನ್ನು ಗೆದ್ದುಕೊಂಡಿತು.
Peepal Media Desk
Peepal Media · ಸಿನಿಮಾ ವಿಭಾಗ